ಟ್ರಬಲ್ ಶೂಟರ್ ನಾನೇ : ಸಿದ್ದರಾಮಯ್ಯ
ಮೈಸೂರು, ಸೆ.30: " ಸಮ್ಮಿಶ್ರ ಸರಕಾರದಲ್ಲಿ ಸಮಸ್ಯೆ ಬಂದಾಗ ಅದನ್ನು ಬಗೆಹರಿಸುವುದು ಸಮನ್ವಯ ಸಮಿತಿಯ ಜವಾಬ್ದಾರಿಯಾಗಿದೆ. ಸರಕಾರಕ್ಕೆ ಎದುರಾಗುವ ಸಮಸ್ಯೆಗಳನ್ನು ಬಗೆ ಹರಿಸುವುದಕ್ಕಾಗಿ ನನ್ನನ್ನು ಸಮನ್ವಯ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಹೀಗಾಗಿ ನಾನೇ ಟ್ರಬಲ್ ಶೂಟರ್ " ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿ ಅಗತ್ಯ ಬಿದ್ದರೆ ಮಾತ್ರ ಸಮನ್ವಯ ಸಮಿತಿ ಸಭೆ ಕರೆಯಲಾಗುವುದು ಎಂದರು.
ಸಮ್ಮಿಶ್ರ ಸರಕಾರದ ಬಗ್ಗೆ ರಾಜ್ಯದಲ್ಲಿ ಒಳ್ಳೆಯ ಅಭಿಪ್ರಾಯ ಇದೆ. ಸಾಲ ಮನ್ನಾ ಮಾಡುವ ಸರಕಾರದ ನಿರ್ಧಾರದ ಬಗ್ಗೆ ಪ್ರಶಂಸೆ ವ್ಯಕ್ತವಾಗಿದೆ. ಸರಕಾರ ಐದು ವರ್ಷ ಪೂರ್ಣಗೊಳಿಸಲಿದೆ ಎಂದು ಹೇಳಿದ ಸಿದ್ದರಾಮಯ್ಯ “ಸಮ್ಮಿಶ್ರ ಸರಕಾರದ ಬಗ್ಗೆ ಒಳ್ಳೆಯ ಅಭಿಪ್ರಾಯ ಇದೆ. ಸಾಲ ಮನ್ನಾ ಬಗ್ಗೆ ಪ್ರಶಂಸೆ ವ್ಯಕ್ತವಾಗಿದೆ. ಯಾವೊಬ್ಬ ಶಾಸಕನೂ ಸರಕಾರವನ್ನು ಅಸ್ಥಿರಗೊಳಿಸಲು ಕೈ ಹಾಕಲ್ಲ ಎಂದು ಸ್ಪಷ್ಟಪಡಿಸಿದರು.
ಅಕ್ಟೋಬರ್ 3ರ ಬಳಿಕ ರಾಜ್ಯ ಸಚಿವ ಸಂಪುಟದ ವಿಸ್ತರಣೆಯಾಗಲಿದೆ ಎಂದು ಸಿದ್ದರಾಮಯ್ಯ
ಮಾಹಿತಿ ನೀಡಿದರು.
,,,,,,,,,,,,