Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ: ಸಂವಿಧಾನ ಆಂದೋಲನ ಕಾರ್ಯಕ್ರಮ

ಬಂಟ್ವಾಳ: ಸಂವಿಧಾನ ಆಂದೋಲನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ30 Sept 2018 6:10 PM IST
share
ಬಂಟ್ವಾಳ: ಸಂವಿಧಾನ ಆಂದೋಲನ ಕಾರ್ಯಕ್ರಮ

ಬಂಟ್ವಾಳ, ಸೆ. 30: ಇಂದಿನ ಯುವ ಜನತೆ ಏಕ ಸಂಸ್ಕೃತಿ ಮತ್ತು ಏಕ ಧರ್ಮದ ಹಿಂದೆ ಹೋಗುತ್ತಿರುವುದರಿಂದ ಭಾರತದ ಸಂವಿಧಾನ ಅಪಾಯದಲ್ಲಿದೆ. ವೈವಿದ್ಯತೆಯಿಂದ ಕೂಡಿರುವ ಹಾಗೂ ಬಹು ಸಂಸ್ಕೃತಿಯನ್ನು ಒಪ್ಪಿ ಸ್ವೀಕರಿಸುವ ಮೂಲಕ ಭಾರತದ ಸಂವಿಧಾನವು ನಿಜಾರ್ಥದಲ್ಲಿ ಅನುಷ್ಠಾನ ವಾಗುವವರೆಗೂ ಸಂಘಟಿತ ಹೋರಾಟ ಅಗತ್ಯವಿದೆ ಎಂದು ಬೆಂಗಳೂರಿನ ನಿವೃತ್ತ ಪೊಲೀಸ್ ಉಪ ಆಯುಕ್ತ ಬಿ.ಕೆ. ಶಿವರಾಂ ಅಭಿಪ್ರಾಯಪಟ್ಟಿದ್ದಾರೆ.

ಅವರು ಬಂಟ್ವಾಳ ಗಾಣದಪಡ್ಪಿನಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ರವಿವಾರ ನಡೆದ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಬಂಟ್ವಾಳ ತಾಲೂಕು ಸಮಿತಿ, ಸಂವಿಧಾನ ಆಂದೋಲನ ಸ್ವಾಗತ ಸಮಿತಿ ಬಂಟ್ವಾಳ ವತಿಯಿಂದ "ಸಂವಿಧಾನ ಆಂದೋಲನ ಕಾರ್ಯಕ್ರಮದಲ್ಲಿ "ಜಾತಿ ವ್ಯವಸ್ಥೆ ಅಮಾನವೀಯತೆ ಮತ್ತು ಶ್ರೀ ನಾರಾಯಣ ಗುರುಗಳ ಹೋರಾಟ"ದ ಬಗ್ಗೆ ವಿಶೇಷ ಉಪನ್ಯಾಸ ನೀಡಿ, ಮನುವಾದಿಗಳ ಪಾಲಕರು ಸಾರುವ ಹಿಂದೂ ಧರ್ಮ ನಮಗೆ ಬೇಕಾಗಿಲ್ಲ. ಇದು ದೇಶಕ್ಕೆ ಅಪಾಯ. ಸ್ವಾಮಿ ವಿವೇಕಾನಂದರು, ಬ್ರಹ್ಮಶ್ರೀ ನಾರಾಯಣ ಗುರು, ಮಹಾತ್ಮ ಗಾಂಧೀಜಿ ಹಾಗೂ ಕವಿ ಕುವೆಂಪು ಅವರು ಸಾರಿರುವ ಹಿಂದೂ ಧರ್ಮ ನಮಗೆ ಬೇಕಾಗಿದೆ ಎಂದು ಹೇಳಿದರು.

ಹಿಂದುಳಿದ ವರ್ಗಗಳ ಲೀಗ್‍ನ ಪ್ರಧಾನ ಕಾರ್ಯದರ್ಶಿ ಜಯಾನಂದ ದೇವಾಡಿಗ ಅವರು ಗಿಡಕ್ಕೆ ನೀರುಣಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಂವಿಧಾನ ಪ್ರಜಾಪ್ರಭುತ್ವದ ಜೀವಾಳವಾಗಿದೆ. ಸಂವಿಧಾನ ಉಳಿದರೆ ಈ ದೇಶ ಉಳಿಯುತ್ತದೆ. ಸಂವಿಧಾನ ಎಲ್ಲ ಜೀವ ರಾಶಿಗಳ ಆತ್ಮ. ಆದ್ದರಿಂದ ನಮ್ಮ ಹಕ್ಕುಗಳಿಗಾಗಿ ಯೋಚಿಸಿ, ವಿವೇಚಿಸಿ ಹಾಗೂ ನಿರ್ಧರಿಸುವ ಮೂಲಕ ಉಳಿಸುಕೊಳ್ಳುವ ಪ್ರಯತ್ನ ಮಾಡಬೇಕಾಗಿದೆ ಎಂದು ಸಲಹೆ ನೀಡಿದರು.

ವಲಯ ಸಂಚಾಲಕ ಕೆ.ಎಸ್.ಸತೀಶ್ ಕುಮಾರ್ ಪ್ರಾಸ್ತಾವಿಕ ಮಾತನಾಡಿ, ಮಾನವ ಬಂಧುತ್ವ ವೇದಿಕೆಯು ಕಳೆದ 5 ವರ್ಷಗಳಿಂದ ಸಮಾಜವನ್ನು ಕಟ್ಟುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಮಾನವೀಯತೆಯೇ ನಮ್ಮ ಧರ್ಮ, ಸಂವಿಧಾನವೇ ನಮ್ಮ ಗ್ರಂಥ ಎಂದು ನುಡಿದರು.

ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ವಿಲ್ಫ್ರೆಡ್ ಡಿಸೋಜ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶದ ಬಹು ಸಂಸ್ಕøತಿಗಾಗಿ ಸಂವಿಧಾನ ಜಾರಿಗೊಂಡಿದೆಯೇ ವಿನಃ, ಆರೆಸ್ಸೆಸ್ಸ್‍ನ ಮನು ಸಂಸ್ಕøತಿಯನ್ನು ಅನುಷ್ಠಾನಗೊಳಿಸುವುದಕ್ಕಲ್ಲ ಎಂದು ಹೇಳಿದರು.

ಸಿಐಟಿಯು ರಾಜ್ಯ ಉಪಾಧ್ಯಕ್ಷ ಕೆ.ಪ್ರಕಾಶ್ ಅವರು "ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಸ್ಥಿತಿ" ವಿಷಯದ ಕುರಿತು, ಮಾನವ ಬಂಧುತ್ವ ವೇದಿಕೆ ವಲಯ ಸಂಚಾಲಕ ಹೈಕೋರ್ಟ್ ವಕೀಲ ಅನಂತ ನಾಯಕ್ ಅವರು, "ಭಾರತ ಸಂವಿಧಾನ ಮತ್ತು ಸಾಮಾಜಿಕ ನ್ಯಾಯ" ಕುರಿತು ಮಾತನಾಡಿದರು.
ಮಾನವ ಬಂಧುತ್ವ ವೇದಿಕೆಯ ಕೊಡಗು ಜಿಲ್ಲಾ ಮುಖಂಡ ಕುಂಞಿ ಅಬ್ದುಲ್ಲ ಹಾಗೂ ಲೇಖಕಿ ಡಾ.ಲೀಲಾ ಸಂಪಿಗೆ ಅವರು ವಿಶೇಷ ಉಪನ್ಯಾಸಕ್ಕೆ ಪ್ರತಿಕ್ರಿಯೆ ನೀಡಿದರು.

ಮುಖ್ಯ ಅತಿಥಿಗಳಾಗಿ ಚಲನಚಿತ್ರ ನಟ ನಿರ್ಮಾಪಕ ಡಾ.ರಾಜಶೇಖರ ಕೋಟ್ಯಾನ್, ಲೇಖಕಿ ಬಿ.ಎಂ.ರೋಹಿಣಿ, ಬೆಳಗಾವಿಯ ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ್ ಭಾಗವಹಿಸಿದ್ದರು.

ದ.ಕ.ಜಿಲ್ಲೆ ಸಂಚಾಲಕ ನಾರಾಯಣ ಕಿಲ್ಲಂಗೋಡಿ, ಸಹಸಂಚಾಲಕ ಚೆನ್ನಕೇಶವ, ಸಂವಿಧಾನ ಆಂದೋಲನ ಸಮಿತಿ ಗೌರವಾಧ್ಯಕ್ಷ ರಾಜಾ ಚಂಡ್ತಿಮಾರ್, ಸಂಚಾಲಕ ಪ್ರಭಾಕರ ದೈವಗುಡ್ಡೆ, ಕಾರ್ಯದರ್ಶಿ ಮಹಮ್ಮದ್ ತೌಸೀಫ್ ಉಪಸ್ಥಿತರಿದ್ದರು. ಸಮಿತಿಯ ಅಧ್ಯಕ್ಷ ವಿಜಯ ಕುಮಾರ್ ಎಸ್. ಸ್ವಾಗತಿಸಿದರು. ರಾಜೀವ ಕಕ್ಯಪದವು, ಹಮೀದ್ ಗೋಳ್ತಮಜಲು ನಿರೂಪಿಸಿದರು. ಬಂಟ್ವಾಳ ತಾಲೂಕು ಸಂಚಾಲಕ ಎ.ಗೋಪಾಲ ಅಂಚನ್ ಸಹಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X