ಸೈಕಲ್ ಪಲ್ಟಿ: ಗಾಯಾಳು ಸವಾರ ಮೃತ್ಯು
ಬೈಂದೂರು, ಸೆ.30: ಯಡ್ತರೆ ಸಮೀಪ ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಸೈಕಲ್ ಸಮೇತ ಬಿದ್ದು ಗಂಭೀರವಾಗಿ ಗಾಯಗೊಂಡ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಬೈಂದೂರು ಗ್ರಾಮದ ಬಾಡ ನಿವಾಸಿ ಮಂಜುನಾಥ ಶೇರುಗಾರ (45) ಎಂದು ಗುರುತಿಲಾಗಿದೆ.
ಇವರು ಸೆ.19ರಂದು ರಾತ್ರಿ ಸೈಕಲ್ ಸಮೇತ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಮಣಿಪಾಲ ಆಸ್ಪತ್ರೆಗೆ ದಾಖ ಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಸೆ.29ರಂದು ರಾತ್ರಿ 8:20ರ ಸುಮಾರಿಗೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





