Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನನ್ನ ತಂಟೆಗೆ ಬಂದರೆ ಸುಮ್ಮನಿರುವುದಿಲ್ಲ:...

ನನ್ನ ತಂಟೆಗೆ ಬಂದರೆ ಸುಮ್ಮನಿರುವುದಿಲ್ಲ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ30 Sept 2018 9:18 PM IST
share
ನನ್ನ ತಂಟೆಗೆ ಬಂದರೆ ಸುಮ್ಮನಿರುವುದಿಲ್ಲ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

ದಾವಣಗೆರೆ,ಸೆ.30: ಅಣ್ಣನವರ ಮಾತಿಗೆ ನಾನು ಉತ್ತರ ಕೊಡುವುದಿಲ್ಲ. ನಾಲ್ಕು ತಿಂಗಳ ಹಿಂದೆಯೇ ಕ್ಷೇತ್ರದ ಜನ ಉತ್ತರ ಕೊಟ್ಟಿದ್ದಾರೆ. ಇನ್ನೂ ಉತ್ತರ ಬೇಕೆಂದರೆ, ನಾಲ್ಕೂವರೆ ವರ್ಷದ ಮೇಲೆ ನಾನೇ ಉತ್ತರ ನೀಡುತ್ತೇನೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾಜಿ ಶಾಸಕ ಸಂಜಯ್ ಪಾಟೀಲ್‍ಗೆ ತಿರುಗೇಟು ನೀಡಿದರು. 

ಹರಿಹರದ ಪಂಚಮಸಾಲಿ ಪೀಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಗಾವಿ ಜಿಲ್ಲೆಯ ರಾಜಕಾರಣಿಗಳು ಸೇರಿದಂತೆ ಎಲ್ಲರಿಗೂ ಅಣ್ಣನವರ ಭಾಷೆ, ಸಂಸ್ಕೃತಿ ಬಗ್ಗೆ ಗೊತ್ತಿದೆ. ಅಣ್ಣನವರಿಗೆ ನಾನು ಉತ್ತರಿಸುವುದಿಲ್ಲ ಎಂದ ಅವರು, ಬಿಜೆಪಿ ಆಮಿಷದ ಬಗ್ಗೆ ಸಮಯ ಬಂದಾಗ ಉತ್ತರಿಸುವೆ ಎಂದರು.

ಬಿಜೆಪಿಯವರು 30 ಕೋಟಿ ರೂ. ಹಾಗೂ ಸಚಿವ ಸ್ಥಾನದ ಆಮಿಷವನ್ನು ತನಗೆ ಒಡ್ಡಿದ್ದ ಬಗ್ಗೆ ನನ್ನ ಪಕ್ಷದ ವರಿಷ್ಟರೊಂದಿಗೆ ಚರ್ಚಿಸುತ್ತೇನೆ. ಬಿಎಸ್ವೈ ಬಗ್ಗೆ ನನಗೆ ಅಭಿಮಾನವಿದೆ. ಸಮಯ ಬಂದಾಗ ಅದಕ್ಕೆ ನಾನೇ ಉತ್ತರ ನೀಡುತ್ತೇನೆ ಎಂದರು.

ಪಂಚಮಸಾಲಿ ಸಮಾಜದ ದಿಟ್ಟ ಹೆಣ್ಣು ಮಗಳು ನಾನು. ನಾನಾಗಿ ಯಾರ ತಂಟೆಗೂ ಹೋಗಲ್ಲ. ಸುಖಾಸುಮ್ಮನೇ ನನ್ನ ತಂಟೆಗೆ ಬಂದರೆ ಸುಮ್ಮನಿರುವುದೂ ಇಲ್ಲ. ವೀರ ರಾಣಿ ಕಿತ್ತೂರು ಚೆನ್ನಮ್ಮ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಸಹ ಬೆಳಗಾವಿಯವರು. ಹೆಣ್ಣು-ಗಂಡು ಸಮಾನವಾಗಿ ಬೆಳೆಸಿದ ನೆಲ ಬೆಳಗಾವಿ ಎಂದ ಅವರು, ಬೆಳಗಾವಿ ರಾಜಕೀಯ ಸದ್ಯಕ್ಕೆ ತಣ್ಣಗಾಗಿದೆ. ಕಾಂಗ್ರೆಸ್ ಪಕ್ಷದ ವರಿಷ್ಟರು ಅಲ್ಲಿಗೆ ಬಂದು, ನಮ್ಮೆಲ್ಲರ ಜೊತೆಗೆ ಮಾತನಾಡಿ ಎಲ್ಲಾ ವಿಚಾರಕ್ಕೂ ಅಂತ್ಯ ಹಾಡಿದ್ದಾರೆ. ನಾನು ಬೇರೆಯವರ ಮನೆ ಇಣುಕಿ ನೋಡುವುದಿಲ್ಲ. ನನ್ನ ಮನೆಯಲ್ಲಿ ನನಗೆ ಜೀವನ ನಡೆಸಲು ಬಿಡಿ. ನನ್ನ ತಂಟೆಗೆ ಬಂದರೆ ಸುಮ್ಮನಿರುವವಳೂ ನಾನಲ್ಲ ಎಂದು ಹೇಳಿದರು.

ಬಹುತೇಕ ಕಡೆ ನನ್ನ ಕಾರಣದಿಂದಾಗಿ ಬೆಳಗಾವಿ ಹೆಣ್ಣು ಮೆಟ್ಟಿದ ನಾಡು ಎಂಬುದಾಗಿಯೂ ಜನ ಮಾತನಾಡುತ್ತಿದ್ದಾರೆ. ಅಂತಹ ವೀರ ರಾಣಿ ಕಿತ್ತೂರು ಚನ್ನಮ್ಮನ ಸಮಾಜದ ದಿಟ್ಟ ಹೆಣ್ಣು ಮಗಳು ನಾನು. ಕಿತ್ತೂರು ಚನ್ನಮ್ಮ, ಸಂಗೊಳ್ಳಿ ರಾಯಣ್ಣನಂತಹ ಅಪ್ರತಿಮ ಹೋರಾಟಗಾರರ ನೆಲದ ಹೆಣ್ಣು ನಾನು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X