ಅ.1ರಂದು ವಿಶ್ವ ಹಿರಿಯ ನಾಗರಿಕ ದಿನಾಚರಣೆ
ಬೆಂಗಳೂರು, ಸೆ.30: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯಕ್ತ ಅ.1 ರಂದು ಬೆಳಗ್ಗೆ 10.30ಕ್ಕೆ ಮಾನವ ಹಕ್ಕುಗಳ ಹಿರಿಯ ಚಾಂಪಿಯನ್ನರೊಡನೆ ಸಂಭ್ರಮಿಸೋಣ ಕಾರ್ಯಕ್ರಮವನ್ನು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿ ಕೊಳ್ಳಲಾಗಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಡಾ.ಜಯಮಾಲಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೇಂದ್ರ ಸಚಿವ ಅನಂತಕುಮಾರ್, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





