ಅಕ್ರಮ ಮರಳುಗಾರಿಕೆ ಪತ್ತೆ: ಆರು ಲಕ್ಷ ರೂ. ಮೌಲ್ಯದ ಸೊತ್ತು ವಶ
ಮಂಗಳೂರು, ಸೆ.30: ನಗರದ ಮುಳಿಹಿತ್ಲು ಟೈಲ್ಸ್ ಫ್ಯಾಕ್ಟರಿಯೊಂದರ ಬಳಿ ನೇತ್ರಾವತಿ ಕಿನಾರೆಯಲ್ಲಿ ನಡೆಸುತ್ತಿದ್ದ ಅಕ್ರಮ ಮರಳುಗಾರಿಕೆ ಮೇಲೆ ಮಂಗಳೂರು ದಕ್ಷಿಣ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ ಅಕ್ರಮ ಮರಳು ಸಹಿತ ಡೋಝರ್ ಹಾಗೂ ಟಿಪ್ಪರ್‌ನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ ಆರು ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ರವಿವಾರ ರಾತ್ರಿ ಮಂಗಳೂರು ದಕ್ಷಿಣ ಠಾಣಾ ಪೊಲೀಸ್ ಇನ್‌ಸ್ಪೆಕ್ಟರ್ ಗಸ್ತಿನಲ್ಲಿದ್ದ ಸಮಯದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ ಈ ದಾಳಿ ನಡೆಸಲಾಗಿದೆ. ವಶಪಡಿಸಿಕಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಪಿಎಸ್ಸೈ ರಾಜೇಂದ್ರ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
Next Story





