Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಟೆಸ್ಟ್ ಸರಣಿಯಲ್ಲಿ ಅವಕಾಶ ಪಡೆಯದ ಶಿಖರ್...

ಟೆಸ್ಟ್ ಸರಣಿಯಲ್ಲಿ ಅವಕಾಶ ಪಡೆಯದ ಶಿಖರ್ ಧವನ್, ರೋಹಿತ್,ಕರುಣ್

ವಾರ್ತಾಭಾರತಿವಾರ್ತಾಭಾರತಿ30 Sept 2018 11:52 PM IST
share

ಹೊಸದಿಲ್ಲಿ, ಸೆ.30: ವೆಸ್ಟ್‌ಇಂಡೀಸ್ ವಿರುದ್ಧ ತವರಿನಲ್ಲಿ ನಡೆಯಲಿರುವ ಎರಡು ಟೆಸ್ಟ್ ಗಳ ಸರಣಿಗೆ ಶನಿವಾರ ಪ್ರಕಟಗೊಂಡ 15 ಮಂದಿ ಸದಸ್ಯರ ಟೀಮ್ ಇಂಡಿಯಾದಲ್ಲಿ ಅವಕಾಶದ ನಿರೀಕ್ಷೆಯಲ್ಲಿದ್ದ ಹಲವರಿಗೆ ನಿರಾಶೆಯಾಗಿದೆ.

 ಅ.4ರಂದು ರಾಜ್‌ಕೋಟ್‌ನಲ್ಲಿ ಮೊದಲ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದೆ. ಕರ್ನಾಟಕದ ಅಗ್ರ ಸರದಿಯ ದಾಂಡಿಗ ಮಾಯಾಂಕ್ ಅಗರ್‌ವಾಲ್ ದೇಶೀಯ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಟೆಸ್ಟ್ ತಂಡದಲ್ಲಿ ಅವಕಾಶ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದೆ ವೇಳೆ ಹೈದರಾಬಾದ್‌ನ ಯುವ ವೇಗಿ ಮುಹಮ್ಮದ್ ಸಿರಾಜ್ ಆಯ್ಕೆ ಸಮಿತಿಯ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ವಿರಾಟ್ ಕೊಹ್ಲಿ ನಾಯಕತ್ವದ ಟೆಸ್ಟ್ ತಂಡದಲ್ಲಿ ಲೋಕೇಶ್ ರಾಹುಲ್, ಪ್ರಥ್ವಿ ಶಾ, ಮಾಯಾಂಕ್ ಅಗರ್‌ವಾಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಹನುಮ ವಿಹಾರಿ, ರಿಷಭ್ ಪಂತ್(ವಿಕೆಟ್ ಕೀಪರ್), ಆರ್.ಅಶ್ವಿನ್, ರವೀಂದ್ರ ಜಡೇಜ, ಕುಲ್‌ದೀಪ್ ಯಾದವ್, ಮುಹಮ್ಮದ್ ಶಮಿ, ಉಮೇಶ್ ಯಾದವ್, ಮುಹಮ್ಮದ್ ಸಿರಾಜ್, ಶಾರ್ದುಲ್ ಠಾಕೂರ್ ಅವಕಾಶ ಪಡೆದಿದ್ದಾರೆ.

ಯುಎಇಯಲ್ಲಿ ನಡೆದ ಏಶ್ಯಕಪ್‌ನಲ್ಲಿ ಎರಡು ಶತಕ ಮತ್ತು 1 ಅರ್ಧಶತಕ ದಾಖಲಿಸಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದ ಆರಂಭಿಕ ದಾಂಡಿಗ ಶಿಖರ್ ಧವನ್ ಅವರನ್ನು ಟೆಸ್ಟ್ ತಂಡಕ್ಕೆ ಕಡೆಗಣಿಸಲಾಗಿದೆ. ಇದೇ ರೀತಿ ತಂಡದ ಹಂಗಾಮಿ ನಾಯಕರಾಗಿ ಭಾರತಕ್ಕೆ ಏಶ್ಯಕಪ್ ತಂದು ಕೊಟ್ಟಿರುವ ರೋಹಿತ್ ಶರ್ಮ ಅವರಿಗೂ ತಂಡದಲ್ಲಿ ಅವಕಾಶ ಸಿಕ್ಕಿಲ್ಲ. ರೋಹಿತ್ 1 ಶತಕ ಮತ್ತು 2 ಅರ್ಧ ಶತಕ ದಾಖಲಿಸಿದ್ದರು. ರೋಹಿತ್ ಮತ್ತು ಶಿಖರ್ ಧವನ್ ಮುನ್ನೂರಕ್ಕೂ ಅಧಿಕ ರನ್ ದಾಖಲಿಸಿದ್ದರು.

 ಕರ್ನಾಟಕದ ಕರುಣ್ ನಾಯರ್, ಮುರಳಿ ವಿಜಯ್,ಪಾರ್ಥಿವ್ ಪಟೇಲ್, ಯಜುವೇಂದ್ರ ಚಹಾಲ್, ನವ್‌ದೀಪ್ ಸೈನಿಗೆ ವಿಂಡೀಸ್ ವಿರುದ್ಧದ ಸರಣಿಯಲ್ಲಿ ಆಡುವ ಅವಕಾಶ ಸಿಕ್ಕಿಲ್ಲ.

► ಕರುಣ್ ನಾಯರ್: ಮಧ್ಯಮ ಸರದಿಯ ದಾಂಡಿಗ ಕರುಣ್ ನಾಯರ್ ಇಂಗ್ಲೆಂಡ್ ವಿರುದ್ಧದ ಪ್ರವಾಸ ಸರಣಿಗೆ ತಂಡದಲ್ಲಿ ಸ್ಥಾನ ಪಡೆದಿದ್ದರು. ಆದರೆ ಒಂದೇ ಒಂದು ಪಂದ್ಯದಲ್ಲಿ ಅವರಿಗೆ ಅವಕಾಶ ಸಿಗಲಿಲ್ಲ. ನಾಯರ್ ಬದಲಿಗೆ ಹನುಮ ವಿಹಾರಿಗೆ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯಕ್ಕೆ ಅವಕಾಶ ನೀಡಲಾಗಿತ್ತು. ವಿಹಾರಿ ಮೊದಲ ಇನಿಂಗ್ಸ್ ನಲ್ಲಿ 56 ರನ್ , 37ಕ್ಕೆ 2 ವಿಕೆಟ್ ಉಡಾಯಿಸಿದ್ದರು. ವಿಹಾರಿಗೆ ಇಂಗ್ಲೆಂಡ್ ವಿರುದ್ಧದ ಪ್ರದರ್ಶನ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ನೆರವಾಗಿದೆ. ಆದರೆ ನಾಯರ್‌ಗೆ ಬಾಗಿಲು ಬಂದ್ ಆಗಿದೆ. ನಾಯರ್ ಇದೀಗ ವಿಜಯ್ ಹಝಾರೆ ಟ್ರೋಫಿಯಲ್ಲಿ ಮುಂಂದುವರಿಯುವಂತಾಗಿದೆ.

► ಮುರಳಿ ವಿಜಯ್: ಆರಂಭಿಕ ದಾಂಡಿಗ ಮುರಳಿ ವಿಜಯ್ ಇಂಗ್ಲೆಂಡ್ ವಿರುದ್ಧದ ಪ್ರವಾಸ ಸರಣಿಗೆ ತೆರಳುವ ಮೊದಲು ತಂಡದಲ್ಲಿ ಸ್ಥಾನವನ್ನು ಭದ್ರಪಡಿಸಿದ್ದಾರೆಂದು ಹೇಳಲಾಗಿತ್ತು. ಆದರೆ ಇಂಗ್ಲೆಂಡ್‌ನಲ್ಲಿ ಸತತ ವೈಫಲ್ಯದ ಹಿನ್ನೆಲೆಯಲ್ಲಿ ಮೂರನೇ ಟೆಸ್ಟ್‌ಗೆ ಅವಕಾಶ ಸಿಗಲಿಲ್ಲ. ವಿಜಯ್ ಬಳಿಕ ಎಸೆಕ್ಸ್ ತಂಡದ ಪರ ಚೆನ್ನಾಗಿ ಆಡಿದ್ದರು. 1 ಶತಕ . ಸತತ ಮೂರು ಅರ್ಧಶತಕಗಳನ್ನು ಸಿಡಿಸಿದ್ದರು.

►ಮುರಳಿ ವಿಜಯ್ ತವರಿಗೆ ಆಗಮಿಸಿ ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ತಂಡದಲ್ಲಿ ಅವಕಾಶ ಪಡೆಯುವ ನಿರೀಕ್ಷೆಯಲ್ಲಿದ್ದರು. ಆದರೆ ಅವರಿಗೆ ಅವಕಾಶ ಸಿಗಲಿಲ್ಲ. ಪಾರ್ಥಿವ್ ಪಟೇಲ್: ಟೀಮ್ ಇಂಡಿಯಾದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಪಾರ್ಥಿವ್ ಪಟೇಲ್ ಈ ವರ್ಷಾರಂಭದಲ್ಲಿ ದಕ್ಷಿಣ ಆಫ್ರಿಕ ವಿರುದ್ಧದ ಸರಣಿಗೆ ಅವಕಾಶ ಗಿಟ್ಟಿಸಿಕೊಂಡಿದ್ದರು. ವೃದ್ಧಿಮನ್ ಸಹಾ ಗಾಯಗೊಂಡ ಹಿನ್ನೆಲೆಯಲ್ಲಿ ಒಂದು ಪಂದ್ಯದಲ್ಲಿ ಅವಕಾಶ ಪಡೆದ ಪಟೇಲ್ ಚೆನ್ನಾಗಿ ಆಡಿದ್ದರು.

ಇಂಗ್ಲೆಂಡ್ ವಿರುದ್ಧದ ಸರಣಿಗೆ ಪಾರ್ಥಿವ್ ಪಟೇಲ್‌ಗೆ ಅವಕಾಶ ಸಿಗಲಿಲ್ಲ. ದಿನೇಶ್ ಕಾರ್ತಿಕ್ ಮತ್ತು ರಿಷಭ್ ಪಂತ್‌ಗೆ ಅವಕಾಶ ನೀಡಲಾಗಿತ್ತು. ವಿಂಡೀಸ್ ವಿರುದ್ಧದ ಸರಣಿಗೆ ಕಾರ್ತಿಕ್‌ಗೆ ಅವಕಾಶ ಇಲ್ಲ. ಪಟೇಲ್‌ರನ್ನು ತಂಡಕ್ಕೆ ಸೇರಿಸಿಕೊಂಡಿಲ್ಲ. ರಿಷಭ್ ಪಂತ್‌ಲ್ಲಿ ಆಯ್ಕೆ ಸಮಿತಿ ವಿಶ್ವಾಸವಿರಿಸಿ ತಂಡದಲ್ಲಿ ಸೇರಿಸಿಕೊಂಡಿದೆ.

► ಯಜುವೇಂದ್ರ ಚಹಾಲ್: 28ರ ಹರೆಯದ ಸ್ಪಿನ್ನರ್ ಯಜುವೇಂದ್ರ ಚಹಾಲ್ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಮಿಂಚುತ್ತಿದ್ದಾರೆ. ಅವರಿಗೆ ಈ ತನಕ ಟೆಸ್ಟ್‌ನಲ್ಲಿ ಆಡುವ ಸಿಕ್ಕಿಲ್ಲ. ವಿಂಡೀಸ್ ಸರಣಿ ಅವರಿಗೆ ಸಾಮರ್ಥ್ಯ ಪರೀಕ್ಷೆಗೆ ಉತ್ತಮ ಅವಕಾಶ ಒದಗಿಸುವ ಸಾಧ್ಯತೆ ಇತ್ತು. ಆದರೆ ವಿಂಡೀಸ್ ಸರಣಿಗೆ ಅವಕಾಶ ಸಿಕ್ಕಿಲ್ಲ. ರವಿಚಂದ್ರನ್ ಅಶ್ವಿನ್ ತಂಡಕ್ಕೆ ಮರಳಿರುವುದು ಚಹಾಲ್‌ಗೆ ಅವಕಾಶ ಸಿಗದಿರಲು ಕಾರಣವಾಗಿದೆ.

► ನವ್‌ದೀಪ್ ಸೈನಿ: 25ರ ಹರೆಯದ ವೇಗಿ ನವ್‌ದೀಪ್ ಸೈನಿಗೆ ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು. ಆದರೆ ಅವರಿಗೆ ಆಡಲು ಅವಕಾಶ ಸಿಗಲಿಲ್ಲ. ಇಂಗ್ಲೆಂಡ್ ಪ್ರವಾಸಕ್ಕೆ ಅವಕಾಶ ಸಿಗಲಿಲ್ಲ. ಮುಹಮ್ಮದ್ ಶಮಿ ಮರಳಿದ ಹಿನ್ನೆಲೆಯಲ್ಲಿ ಸೈನಿಗೆ ತಂಡದಲ್ಲಿ ಅವಕಾಶ ಸಿಗಲಿಲ್ಲ. ಮತ್ತೆ ಅವರಿಗೆ ವಿಂಡೀಸ್ ವಿರುದ್ಧದ ಸರಣಿಗೂ ಅವಕಾಶ ನಿರಾಕರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X