Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುರಸಭಾ ಗೋದಾಮಿನಲ್ಲಿ ಬಕೆಟ್‍ಗಳ ರಾಶಿ:...

ಪುರಸಭಾ ಗೋದಾಮಿನಲ್ಲಿ ಬಕೆಟ್‍ಗಳ ರಾಶಿ: ತಕ್ಷಣ ವಿಲೇವಾರಿ ಮಾಡುವಂತೆ ಶಾಸಕ ಸೂಚನೆ

ಬಂಟ್ವಾಳ ಪುರಸಭೆಯಲ್ಲಿ ವಿವಿಧ ಇಲಾಖಾಧಿಕಾರಿಗಳ ಸಭೆ

ವಾರ್ತಾಭಾರತಿವಾರ್ತಾಭಾರತಿ1 Oct 2018 8:25 PM IST
share
ಪುರಸಭಾ ಗೋದಾಮಿನಲ್ಲಿ ಬಕೆಟ್‍ಗಳ ರಾಶಿ: ತಕ್ಷಣ ವಿಲೇವಾರಿ ಮಾಡುವಂತೆ ಶಾಸಕ ಸೂಚನೆ

ಬಂಟ್ವಾಳ, ಸೆ. 1: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಸೋಮವಾರ ದಿಢೀರನೇ ಬಂಟ್ವಾಳ ಪುರಸಭೆಯಲ್ಲಿ ವಿವಿಧ ಇಲಾಖಾಧಿಕಾರಿಗಳ ಕುಂದು-ಕೊರತೆ ಸಭೆ ನಡೆಸಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದರು.

ಕುಡಿಯುವ ನೀರು, ಸಮಗ್ರ ಒಳಚರಂಡಿ ಯೋಜನೆ, ಟ್ರಾಫಿಕ್ ಸಮಸ್ಯೆ, ಕಸವಿಲೇವಾರಿ ಸಹಿತ ವಿವಿಧ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದ ಶಾಸಕ ಯು.ರಾಜೇಶ್ ನಾಯ್ಕ್ ಅಧಿಕಾರಿಗಳಿಗೆ ಸಲಹೆ, ಸೂಚನೆ ನೀಡಿದರು.

570 ಅನಧಿಕೃತ ನಳ್ಳಿ ಸಂಪರ್ಕ

ಎರಡನೆ ಹಂತದ ಕುಡಿಯುವ ನೀರಿನ ಯೋಜನೆಯಲ್ಲಿ 90 ಕಿ.ಮೀ ಪೈಕಿ, 85 ಕಿ.ಮೀ.ಪೈಪ್ ಲೈನ್ ಪೂರ್ಣಗೊಂಡಿದ್ದು, 5,040 ನೀರಿನ ಸಂಪರ್ಕ ನೀಡಲಾಗುತ್ತಿದೆ ಎಂದು ಕೆಯುಡಬ್ಲ್ಯಎಸ್‍ನ ಶೋಭಾಲಕ್ಮ್ಮಿ ಮಾಹಿತಿ ನೀಡಿ, ಇನ್ನು ಕೂಡ ಪುರಸಭೆಗೆ ಇದನ್ನು ಹಸ್ತಾಂತರಿಸಿಲ್ಲ ಎಂದರು.

ಇದೇ ವೇಳೆ ಶಾಸಕರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮುಖ್ಯಾಧಿಕಾರಿ ರೇಖಾ ಶೆಟ್ಟಿ ಅವರು, ಪುರಸಭೆ ನಡೆಸಿರುವ ಸರ್ವೇ ಪ್ರಕಾರ 570 ಅನಧಿಕೃತ ನಳ್ಳಿ ಸಂಪರ್ಕ ಪತ್ತೆಯಾಗಿದೆ ಎಂದು ಉತ್ತರಿಸಿದರು. ಆಗ ಇದಕ್ಕಿಂತಲೂ ಹೆಚ್ಚು ಅನಧಿಕೃತ ನಳ್ಳಿ ಸಂಪರ್ಕಗಳಿವೆ ಶಾಸಕರು ವಾದಿಸಿದರು.

ಎರಡನೆ ಹಂತದ ಕುಡಿಯುವ ನೀರಿನ ಯೋಜನೆಯಲ್ಲಿ ಅನಧಿಕೃತ ಸಂಪರ್ಕ ಪಡೆಯದಾಗೆ ತಾಂತ್ರಿಕತೆಯನ್ನು ಅಳವಡಿಸುಂತೆ ಶಾಸಕ ರಾಜೇಶ್ ನಾಯ್ಕ್ ಕೆಯುಡಬ್ಲ್ಯಎಸ್ ಅಧಿಕಾರಿಗಳಿಗೆ ಸೂಚಿಸಿದರು.

ಯೋಜನೆಯ ಕಾಮಗಾರಿಗೆ ಸಂಬಂಧಿಸಿ ಕೆಯುಡಬ್ಲ್ಯಎಸ್‍ನ ಶೋಭಾಲಕ್ಷ್ಮಿ ಹಾಗೂ ಕಿರಿಯ ಇಂಜಿನಿಯರ್ ಡೊಮೆನಿಕ್ ಡಿಮೆಲ್ಲೋ ನಡುವೆ ಮಾತಿನ ಚಕಮಕಿಯು ನಡೆಯಿತು. ಆಗ ಶಾಸಕರು ಮಧ್ಯಪ್ರವೇಶಿಸಿ, ಹಿಂದೆ ಅಗಿರುವುದನ್ನು ಬಿಟ್ಟು ಮುಂದೆ ಸಮಸ್ಯೆ ಅಗದಂತೆ  ಬಗೆಹರಿಸುವಂತೆ ಸಲಹೆ ನೀಡಿದರು.

2.77 ಕೋ.ರೂ. ವಿದ್ಯುತ್ ಬಿಲ್ಲು ಬಾಕಿ

ಈ ಸಂದರ್ಭ ಮಧ್ಯಪ್ರವೇಶಿಸಿದ ಮೆಸ್ಕಾಂ ಇಂಜಿನಿಯರ್ ಅವರು, ಪುರಸಭಾ ವ್ಯಾಪ್ತಿಯಲ್ಲು ಸಾಕಷ್ಟು ಅನಧಿಕೃತ ದಾರಿದೀಪಗಳು ಉರಿಯುತ್ತಿರುವ ಬಗ್ಗೆ ಸಭೆಯ ಗಮನ ಸೆಳೆದರಲ್ಲದೆ, ಪುರಸಭೆಯಿಂದ 2.77 ಕೋ.ರೂ.ವಿದ್ಯುತ್ ಬಿಲ್ಲು ಪಾವತಿಸಲು ಬಾಕಿ ಇದೆ ಎಂದರು.

ಹಾಗೆಯೇ ಕುಡಿಯುವ ನೀರಿನ ಯೋಜನೆಗೂ ಎಕ್ಸ್ ಪ್ರೆಸ್‍ಲೈನ್ ವಿದ್ಯುತ್ ಸಂಪರ್ಕ ಪಡೆಯದಿದ್ದು, ಮುಂದಕ್ಕೆ ವಿದ್ಯುತ್‍ನಲ್ಲಿ ಅಡಚಣೆಯಾಗುವ ತೊಂದರೆ ಬರಬಹುದು ಎಂದು ಸಭೆಯ ಗಮನಕ್ಕೆ ತಂದರು. ತಕ್ಷಣ ಈ ಬಗ್ಗೆ ಕಾರ್ಯ ಪ್ರವೃತ್ತರಾಗುವಂತೆ ಶಾಸಕರು ಸೂಚಿಸಿದರು. ಹಾಗೆಯೇ ನೀರಿನ ಸಮಸ್ಯೆಯ ಬಗ್ಗೆ ದೂರು ಬರುತ್ತಿದ್ದು, ಈಗಾಗಲೇ ಎರಡು ಪ್ರದೇಶಕ್ಕೆ ತಾನೇ ಟ್ಯಾಂಕರ್ ಪೂರೈಸುವ ವ್ಯವಸ್ಥೆ ಮಾಡಿದ್ದು, ಇನ್ನು ಮುಂದೆ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸುವಂತೆಯ ಸೂಚಿಸಿದರು.

ಪ್ಲಾಸ್ಟಿಕ್ ನಿಷೇಧ ಕಟ್ಟುನಿಟ್ಟಾಗಿ ಜಾರಿಗೆ ಸೂಚನೆ

ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಈಗಾಗಲೇ ಜಾರಿಯಲ್ಲಿ ಪ್ಲಾಸ್ಟಿಕ್ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಶಾಸಕ ರಾಜೇಶ್ ನಾಯ್ಕಅವರು ನಿರ್ಮಲ ಅಧಿಕಾರಿಗಳಿಗೆ ಸೂಚಿಸಿದರು.

ಯಾವುದೇ ಪ್ಲಕ್ಸ್, ಬಂಟಿಂಗ್ಸ್ ಬಳಸಲು ಅವಕಾಶ ನೀಡಬಾರದು, ಬಿ.ಸಿ.ರೋಡಿನ ರಾ.ಹೆ.ಯ ಬಸ್ ತಂಗುದಾಣದಲ್ಲಿ ಅಳವಡಿಸಿರುವ ಜಾಹೀರಾತಿನ ಪ್ಲಕ್ಸ್ ಕೂಡ ತೆರವಿಗೆ ನಿರ್ದೇಶಿಸಿದರು. ಕಂಚಿನಡ್ಕ ಪದವಿನ ತ್ಯಾಜ್ಯ ವಿಲೇವಾರಿ ಘಟಕದ ಸುತ್ತ ಇರುವ ಮನೆಗಳನ್ನು ಸ್ಥಳಾಂತರಿಸಲು ಇರಾ ಗ್ರಾಮದಲ್ಲಿ ಜಮೀನು ಗುರುತಿಸಲಾಗಿದೆ. ಅಲ್ಲಿ ಪೈರೋಲಿಸಿಸ್ ಯಂತ್ರ ಅಳವಡಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಕಸವಿಲೇವಾರಿಯ ಗುತ್ತಿಗೆದಾರನ ಅವಧಿ ಈಗಾಗಲೇ ಪೂರ್ಣಗೊಂಡಿದೆ ಎಂದು ಮುಖ್ಯಾಧಿಕಾರಿ ರೇಖಾ ಶೆಟ್ಟಿ ಶಾಸಕರಿಗೆ ಮಾಹಿತಿ ನೀಡಿದರು.

ಆಯಕಟ್ಟಿನ ಜಾಗಕ್ಕೆ ಸಿಸಿ ಕ್ಯಾಮೆರಾ

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆಯಕಟ್ಟಿನ ಏಳು ಕಡೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಎಸ್ಸೈ ಹರೀಶ್ ಸಭೆಯ ಗಮನಕ್ಕೆ ತಂದಾಗ ಕೆಲ ಪ್ರದೇಶಗಳಲ್ಲಿ ರಸ್ತೆಯಲ್ಲೆ ತ್ಯಾಜ್ಯ ಎಸೆದು ಗಲೀಜು ಮಾಡುವುದನ್ನು ತಡೆಗಟ್ಟಲು ಸಹಾಯವಾಗುವ ನಿಟ್ಟಿನಲ್ಲಿ   ಪ್ರದೇಶಗಳನ್ನು ಗುರುತಿಸಿ, ಅಲ್ಲಿ ಕೂಡ ಸಿಸಿ ಕ್ಯಾಮೆರಾ ಅಳವಡಿಸುವ ನಿಟ್ಟಿನಲ್ಲಿ ಈ ಕೂಡಲೇ ಕಾರ್ಯಪ್ರರ್ವತವಾಗುವಂತೆ ಶಾಸಕ ರಾಜೇಶ್ ನಾಯ್ಕ್ ಸೂಚಿಸಿದರು. ಇದಕ್ಕೆ ಗುಣಮಟ್ಟದ ಸಿಸಿ ಕ್ಯಾಮಾರವನ್ನೇ ಕೊಡಿಸುವುದಾಗಿ ಶಾಸಕರು ಭರವಸೆ ನೀಡಿದರಲ್ಲದೆ, ಇದರ ನಿರ್ವಹಣೆಯನ್ನು ಪೆÇಲೀಸ್ ಇಲಾಖೆಯಿಂದಲೇ ನಡೆಸುವಂತೆಯು ನಿರ್ದೇಶಿಸಿದರು.

ಬಿ.ಸಿ.ರೋಡಿನಲ್ಲಿ ವಾಹನ ಪಾರ್ಕಿಂಗ್ ಸಮಸ್ಯೆ

ಬಿ.ಸಿ.ರೋಡ್ ಟ್ರಾಫಿಕ್ ಸಮಸ್ಯೆಯ ಬಗ್ಗೆ ಗಮನಸೆಳೆದ ಎಸ್ಸೈ ಮಂಜುಳಾ, ಬಿ.ಸಿ.ರೋಡಿನಲ್ಲಿ ವಾಹನ ಪಾರ್ಕಿಂಗ್‍ನದ್ದೆ ಬಹುದೊಡ್ಡ ಸಮಸ್ಯೆ ಎಂದರು. ಈ  ಸಮಸ್ಯೆ ಬಗೆಹರಿಸಲು ಸೂಕ್ತ ಸ್ಥಳ ಪರಿಶೀಲಿಸಿ ಗಮನಕ್ಕೆ ತರುವಂತೆ ಶಾಸಕರು ಸೂಚಿಸಿದರು. ಇದೇ ವೇಳೆ ಟ್ರಾಫಿಕ್ ಠಾಣೆಗೆ ಸ್ವಂತ ಕಟ್ಟಡಕ್ಕಾಗಿ ಜಮೀನು ಒದಗಿಸುವಂತೆ ಮುಖ್ಯಾಧಿಕಾರಿಯವರಲ್ಲಿ ಮನವಿ ಮಾಡಿದರು.

ಒಟ್ಟಾರೆಯಾಗಿ ಹೊಸ ಬದಲಾವಣೆಯೊಂದಿಗೆ ಸುಂದರ ಬಂಟ್ವಾಳವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕೈ ಜೋಡಿಸುವಂತೆ ಶಾಸಕ ರಾಜೇಶ್ ನಾಯ್ಕ್ ಅಧಿಕಾರಿಗಳಲ್ಲಿ ಕೋರಿದರು.

ಸಭೆಯಲ್ಲಿ ಮಂಗಳೂರು ಸಹಾಯಕ ಕಮೀಷನರ್, ಪುರಸಭೆಯ ಆಡಳಿತಾಧಿಕಾರಿ ರವಿಚಂದ್ರ ನಾಯಕ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉಮೇಶ್ ಭಟ್, ಕೆಯುಡಬ್ಲ್ಯಎಸ್ ಇಂಜಿನಿಯರ್‍ಗಳಾದ ಜಗದೀಶ್, ಸಂಶುದ್ದೀನ್, ಪುರಸಭೆಯ ಕಿರಿಯ ಇಂಜಿನಿಯರ್ ಡೊಮೆನಿಕ್ ಡಿಮೆಲ್ಲೊ, ಅರಣ್ಯಾಧಿಕಾರಿ, ಪುರಸಭೆಯ ಅಧಿಕಾರಿಗಳು ಹಾಜರಿದ್ದರು.

ಮುಖ್ಯಾಧಿಕಾರಿ ರೇಖಾ ಶೆಟ್ಟಿ ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X