Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹರೇಕಳ: ಸಾರಿಗೆ ವ್ಯವಸ್ಥೆಗಾಗಿ...

ಹರೇಕಳ: ಸಾರಿಗೆ ವ್ಯವಸ್ಥೆಗಾಗಿ ಒತ್ತಾಯಿಸಿ ಡಿವೈಎಫ್‍ಐನಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ1 Oct 2018 8:49 PM IST
share
ಹರೇಕಳ: ಸಾರಿಗೆ ವ್ಯವಸ್ಥೆಗಾಗಿ ಒತ್ತಾಯಿಸಿ ಡಿವೈಎಫ್‍ಐನಿಂದ ಪ್ರತಿಭಟನೆ

ಕೊಣಾಜೆ, ಅ. 1: ಹರೇಕಳಕ್ಕೆ ಸಮರ್ಪಕ ಸಾರಿಗೆ ವ್ಯವಸ್ಥೆ, ಹರೇಕಳದಿಂದ ಕೊಜಪಾಡಿಗೆ ಬಸ್ ಸೇವೆ ವಿಸ್ತರಿಸುವಂತೆ ಒತ್ತಾಯಿಸಿ ಸೋಮವಾರ ಹರೇಕಳ ಕಡವಿನ ಬಳಿ ಡಿವೈಎಫ್‍ಐ ವತಿಯಿಂದ ನಡೆದ ರಸ್ತೆತಡೆ ಪ್ರತಿಭಟನೆ ನಡೆಯಿತು. 

ಡಿವೈಎಫ್‍ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಈ ಸಂದರ್ಭದಲ್ಲಿ ಮಾತನಾಡಿ, ಕಳೆದ ಹತ್ತು ವರ್ಷಗಳ ಹಿಂದೆ ಹರೇಕಳ ಪ್ರದೇಶಕ್ಕೆ ಹತ್ತು ಬಸ್ ಪರವಾನಿಗಳಿದ್ದವು. ಈಗ ಪರವಾನಿಗೆ ಸಂಖ್ಯೆಯೂ ಕಡಿಮೆಯಾಗಿದೆ ಜೊತೆಗೆ ಪರವಾನಿಗೆ ಇದ್ದ ಬಸ್ಸುಗಳು ಕೂಡಾ ಸರಿಯಾಗಿ ಓಡಾಟ ನಡೆಸುತ್ತಿಲ್ಲ. ಇದರಿಂದಾಗಿ ಜನರಿಗೆ ತೊಂದರೆಯಾಗುತ್ತಿದ್ದು, ಸರ್ಕಾರಿ ಬಸ್ ಓಡಾಟಕ್ಕೆ ಅಧಿಕಾರಿಗಳು ಎರಡು ವರ್ಷದ ಹಿಂದೆ ಸರ್ವೆ ನಡೆಸಿದ್ದರೂ ಯೋಜನೆ ಜಾರಿಯಾಗಿಲ್ಲ.  ಮೊದಲ ಹಂತದಲ್ಲಿ ಸಾಂಕೇತಿಕ ಬಸ್ ತಡೆ ನಡೆಸಲಾಗಿದೆ, ಮುಂದೆ ವಿವಿಧ ಹಂತದ ಹೋರಾಟ ನಡೆಯಲಿದ್ದು, ಆರ್‍ಟಿಒ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆಯನ್ನೂ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. 

ರಾಜ್ಯದ ಎಲ್ಲಾ ಶಾಸಕರಿಗಿಂತಲೂ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರು ಜನರ ಜೊತೆ ಹೆಚ್ಚು ಒಡನಾಟ ಹೊಂದಿರುವ ಹೆಗ್ಗಳಿಕೆ ಹೊಂದಿದ್ದಾರೆ. ಆದರೂ ಹೆಚ್ಚು ಅಲ್ಪಸಂಖ್ಯಾತರು, ಬಡ, ಕೂಲಿ ಕಾರ್ಮಿಕರು ವಾಸವಿರುವ ಹರೇಕಳಕ್ಕೆ ಬಸ್ ವ್ಯವಸ್ಥೆ ಸರಿಪಡಿಸುವ ಮನಸ್ಸು ಮಾಡಬೇಕಾಗಿದೆ. ಇಲ್ಲದಿದ್ದಲ್ಲಿ ನಿಮ್ಮ ಗೆಲುವಿಗಾಗಿ ದುಡಿದ, ಗೆದ್ದಾಗ ಹೆಗಲಲ್ಲಿ ಹೊತ್ತುಕೊಂಡು ಕುಣಿದಾಡಿದ ಜನರೇ ಮುಂದಿನ ಚುನಾವಣೆಯಲ್ಲಿ ಉತ್ತರ ನೀಡುವ ಸಾಮಥ್ರ್ಯ ಹೊಂದಿದ್ದಾರೆ ಎಂದರು. 

ಹರೇಕಳ ಗ್ರಾಮ ಪಂಚಾಯಿತಿ ಸದಸ್ಯ ಅಶ್ರಫ್ ಮಾತನಾಡಿ, ಹರೇಕಳಕ್ಕೆ ನಾಲ್ಕು ಖಾಸಗಿ ಬಸ್ಸುಗಳು ಸಂಚರಿಸುತ್ತಿದ್ದು ಎರಡು ಸ್ಟೇಟ್‍ಬ್ಯಾಂಕ್‍ಗೆ ಹೋಗುತ್ತವೆ. ಇವುಗಳ ಪೈಕಿ ಪರವಾನಿಗೆ ಮುಗಿದು ಆರ್‍ಟಿಒ ನಿಯಮಕ್ಕೆ ವಿರುದ್ಧವಾಗಿ ಓಡುವ ಬಸ್ಸುಗಳಿದ್ದು, ಮಳೆಗಾಲದಲ್ಲಿ ಸೋರುವುದರಿಂದ ಪ್ರಯಾಣಿಕರು ಕಷ್ಟಪಡುತ್ತಾರೆ ಎಂದು ತಿಳಿಸಿದರು.

ಡಿವೈಎಫ್‍ಐ ಜಿಲ್ಲಾ ಉಪಾಧ್ಯಕ್ಷ ರಫೀಕ್ ಹರೇಕಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಿಪಿಐಎಂ ಹಿರಿಯ ಮುಖಂಡ ಟಿ.ಎಸ್.ಹಮೀದ್ ಮಲಾರ್, ಹರೇಕಳ ಗ್ರಾಮ ಪಂಚಾಯಿತಿ ಸದಸ್ಯ ಹನೀಫ್ ಹರೇಕಳ, ಡಿವೈಎಫ್‍ಐ ಉಳ್ಳಾಲ ವಲಯ ಸಮಿತಿ ಸದಸ್ಯ ಇಸ್ಮಾಯಿಲ್, ಹರೇಕಳ ಘಟಕಾಧ್ಯಕ್ಷ ನಿಝಾಂ, ಮುಖಂಡ ಸಿರಾಜ್ ಇನ್ನಿತರರು ಭಾಗವಹಿಸಿದ್ದರು. ಹರೇಕಳ ಘಟಕ ಕಾರ್ಯದರ್ಶಿ ಸಾದಿಕ್ ವಂದಿಸಿದರು. 

ಹಿಂದೆ ಹತ್ತು ಬಸ್ ಪರವಾನಿಗೆ ಇತ್ತಾದರೂ ಈಗ ಆರು ಇದ್ದು ನಾಲ್ಕು ಬಸ್ಸುಗಳು ಸಂಚರಿಸುತ್ತಿದೆ, ಅದೂ ತೀರಾ ಹಳೆಯ ಬಸ್ಸುಗಳಾಗಿದ್ದು, ಆರ್‍ಟಿಒ ನಿಯಮಕ್ಕೆ ವಿರುದ್ಧವಾಗಿ ಸಂಚರಿಸುತ್ತಿರುವುದರಿಂದ ಪ್ರಯಾಣಿಕರಿಗೆ ಭದ್ರತೆ ಇಲ್ಲದಂತಾಗಿ. ಸರ್ಕಾರಿ ಬಸ್ಸಿಗಾಗಿ ಹಲವು ಬಾರಿ ಮನವಿ ನೀಡಲಾಗಿದೆ. ಕೊಜಪಾಡಿ ಪ್ರದೇಶಕ್ಕೆ ಎರಡು ಬಸ್‍ಗಳು ಮಾತ್ರ ಸಂಚರಿಸುತ್ತಿದ್ದು ಅದು ಕೂಡಾ ಟ್ರಿಪ್ ಕಟ್ ಮಾಡಿ ಹೋಗುತ್ತಿವೆ, ಮುಂದಿನ ದಿನಗಳಲ್ಲಿ ಸಂಚಾರ ವ್ಯವಸ್ಥೆಯನ್ನು ಸರಿಪಡಿಸದಿದ್ದಲ್ಲಿ ವಿವಿಧ ಹೋರಾಟಗಳನ್ನು ನಡೆಸಲಾಗುವುದು.

-ರಫೀಕ್ ಹರೇಕಳ, ಡಿವೈಎಫ್‍ಐ ಜಿಲ್ಲಾ ಉಪಾಧ್ಯಕ್ಷ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X