ನಾರೀಶಕ್ತಿ ಪ್ರಶಸ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಅ.1: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯದಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದಿರುವ ಮಹಿಳೆಯರಿಗೆ ಮತ್ತು ಸಂಘ ಸಂಸ್ಥೆಗಳಿಗೆ 2019, ಮಾ.8 ರಂದು ಆಚರಿಸಲಾಗುವ ಅಂತರ್‌ರಾಷ್ಟ್ರೀಯ ಮಹಿಳಾ ದಿನಾಚರಣೆಯಂದು 40 ಮಹಿಳೆಯರಿಗೆ ನಾರೀಶಕ್ತಿ ಪ್ರಶಸ್ತಿಯನ್ನು ನೀಡಿ ಪರಸ್ಕರಿಸಲಾಗುವುದು.
ಪ್ರಶಸ್ತಿಗಾಗಿ ನಿಗಧಿತ ಅರ್ಜಿಯನ್ನು ಭರ್ತಿಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಉಪನಿದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇವರ ಮೂಲಕ ಅ.15ರೊಳಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾತಿಗಾಗಿ ಮಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯದ ವೆಬ್‌ಸೈಟ್ www.wcd.nic.in ಹಾಗೂ ಜಿಲ್ಲಾ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
Next Story





