Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಂವಿಧಾನದ ರಕ್ಷಣೆ ನಮ್ಮೆಲ್ಲರ ಹೊಣೆ:...

ಸಂವಿಧಾನದ ರಕ್ಷಣೆ ನಮ್ಮೆಲ್ಲರ ಹೊಣೆ: ಡಾ.ಮುಹಮ್ಮದ್ ಮನ್ಝೂರ್ ಆಲಮ್

ವಾರ್ತಾಭಾರತಿವಾರ್ತಾಭಾರತಿ2 Oct 2018 8:06 PM IST
share
ಸಂವಿಧಾನದ ರಕ್ಷಣೆ ನಮ್ಮೆಲ್ಲರ ಹೊಣೆ: ಡಾ.ಮುಹಮ್ಮದ್ ಮನ್ಝೂರ್ ಆಲಮ್

ಬೆಂಗಳೂರು, ಅ.2: ಸಂವಿಧಾನದಲ್ಲಿ ನ್ಯಾಯ, ಸಮಾನತೆ, ಸಹೋದರತೆ, ಸ್ವಾತಂತ್ರದ ಭರವಸೆ ನೀಡಲಾಗಿದೆ. ಇಂದಿನ ಪರಿಸ್ಥಿತಿಯಲ್ಲಿ ಅದನ್ನು ಯಾವ ರೀತಿಯಲ್ಲಿ ರಕ್ಷಣೆ ಮಾಡಬೇಕು ಎಂಬುದು ನಮ್ಮ ಮುಂದಿರುವ ಬೃಹತ್ ಸವಾಲು ಎಂದು ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ.ಮುಹಮ್ಮದ್ ಮನ್ಝೂರ್ ಆಲಮ್ ತಿಳಿಸಿದರು.

ಮಂಗಳವಾರ ನಗರದ ದಾರುಸ್ಸಲಾಮ್‌ನಲ್ಲಿ ಆಯೋಜಿಸಲಾಗಿದ್ದ ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್ ರಾಜ್ಯ ಘಟಕದ ಸರ್ವ ಸದಸ್ಯರ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಸಂವಿಧಾನವನ್ನು ನಾಶಗೊಳಿಸಲು ಮುಂದಾಗಿರುವವರಿಗೆ ನಾವು ಕಣ್ಣು ಮುಚ್ಚಿಕೊಂಡು ಬೆಂಬಲ ನೀಡಬೇಕೆ? ಅಥವಾ ಸಂವಿಧಾನವನ್ನು ರಕ್ಷಿಸಲು ಶ್ರಮಿಸುತ್ತಿರುವವರಿಗೆ ನಾವು ಬೆಂಬಲ ನೀಡಬೇಕೆ? ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಿದೆ ಎಂದು ಅವರು ಹೇಳಿದರು.

ಸಂವಿಧಾನದ ರಕ್ಷಣೆಗೆ ನಿಂತಿರುವವರು ಸಮಾಜದ ಎಲ್ಲ ವರ್ಗಗಳ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಹಕ್ಕುಗಳ ರಕ್ಷಣೆಯ ಭರವಸೆಯನ್ನು ನೀಡಬೇಕು. ಅಲ್ಲದೆ, ಸಂವಿಧಾನವನ್ನು ರಕ್ಷಿಸದಿದ್ದರೆ ನಮ್ಮ ಬೇಡಿಕೆಗಳನ್ನು ಆಡಳಿತ ವರ್ಗದ ಮುಂದೆ ಮಂಡಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂಬ ಸತ್ಯವನ್ನು ಎಲ್ಲರಿಗೂ ಅರ್ಥೈಸಬೇಕಿದೆ ಎಂದು ಮನ್ಝೂರ್ ಆಲಮ್ ಹೇಳಿದರು.

ನಮ್ಮ ಹಕ್ಕುಗಳನ್ನು ಪಡೆಯಲು ನ್ಯಾಯಯುತ ಮಾರ್ಗದಲ್ಲಿ ಹೋರಾಡಬೇಕಿದೆ. ಪ್ರಮುಖವಾಗಿ 18-32 ವರ್ಷದ ವಯೋಮಾನದವರು ಈ ಹೋರಾಟದ ಮುಂಚೂಣಿಯಲ್ಲಿ ನಿಲ್ಲಬೇಕು. ಕಳೆದ ನಾಲ್ಕು ವರ್ಷಗಳಲ್ಲಿ ಇಡೀ ದೇಶದಲ್ಲಿ ಲವ್ ಜಿಹಾದ್, ಗುಂಪು ಹಲ್ಲೆಗಳು, ತ್ರಿವಳಿ ತಲಾಕ್, ಶರೀಅತ್ ಹೆಸರಿನಲ್ಲಿ ಮುಸ್ಲಿಮರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ವ್ಯವಸ್ಥಿತ ಷಡ್ಯಂತ್ರ ನಡೆದಿದೆ ಎಂದು ಅವರು ತಿಳಿಸಿದರು.

ಮುಂದಿನ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪ್ರಮುಖ ವಿಷಯಗಳ ಬಗ್ಗೆ ಜನರ ದಿಕ್ಕು ತಪ್ಪಿಸಲು, ವಿಪಕ್ಷಗಳ ಒಕ್ಕೂಟದಲ್ಲಿ ಗೊಂದಲ ಮೂಡಿಸಲು, ಮಾಧ್ಯಮಗಳನ್ನು ತಮ್ಮ ಪಕ್ಷದ ಮುಖವಾಣಿಗಳ ರೂಪದಲ್ಲಿ ಬಳಸಿಕೊಳ್ಳುವ ಎಲ್ಲ ಪ್ರಯತ್ನಗಳನ್ನು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷ ಮಾಡಲಿದೆ ಎಂದು ಮನ್ಝೂರ್ ಆಲಮ್ ಆರೋಪಿಸಿದರು.

ದೇಶದಲ್ಲಿ ಕೆಲವೇ ಕೆಲವು ವ್ಯಕ್ತಿಗಳ ಬಳಿ ಸಂಪತ್ತಿನ ಕ್ರೋಡೀಕರಣ ಆಗುತ್ತಿರುವುದು ಅಪಾಯಕಾರಿ. ಇದರಿಂದ, ದೇಶ ಸಿರಿವಂತರ ಸಾಲಿನಲ್ಲಿ ಕಂಡು ಬಂದರೂ ಬಡತನದ ಪ್ರಮಾಣ ಹೆಚ್ಚಳವಾಗುತ್ತಿರುವುದನ್ನು ಅಲ್ಲಗೆಳೆಯುವಂತಿಲ್ಲ. ಸಂಪತ್ತಿನ ಸಮಾನ ಹಂಚಿಕೆಯಾದಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಅವರು ಹೇಳಿದರು. ಅಧಿಕಾರ ನಡೆಸುತ್ತಿರುವವರು ತಮ್ಮ ಸ್ನೇಹಿತರಿಗೆ ಲಾಭ ಮಾಡಿಕೊಡಲು ಮುಂದಾಗಿದ್ದಾರೆ. ಅದರ ಪರಿಣಾಮವಾಗಿಯೇ ಸಂಪತ್ತಿನ ಕ್ರೋಡೀಕರಣ ಸೀಮಿತ ವ್ಯಕ್ತಿಗಳ ಬಳಿ ಆಗುತ್ತಿದೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ ಎಂದು ಮನ್ಝೂರ್ ಆಲಮ್ ತಿಳಿಸಿದರು.

ಈ ಸಂದರ್ಭದಲ್ಲಿ ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್ ಅಧ್ಯಕ್ಷ ಮೌಲಾನ ಇಜಾಝುದ್ದೀನ್ ನದ್ವಿ, ಉಪಾಧ್ಯಕ್ಷ ಸುಲೈಮಾನ್ ಖಾನ್, ಮೌಲಾನ ಮುಸ್ತಫಾ ರಿಫಾಯಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಉಬೇದುಲ್ಲಾ ಶರೀಫ್, ಸುಲ್ತಾನ್ ಆಗಾ, ರಾಜ್ಯ ಸರಕಾರದ ಹೊಸದಿಲ್ಲಿಯ ವಿಶೇಷ ಪ್ರತಿನಿಧಿ ಸೈಯ್ಯದ್ ಮೊಹಿದ್ ಅಲ್ತಾಫ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X