ಮಾಜಿ ಸಂಸದ ಎಂ.ಶ್ರೀನಿವಾಸ್‌ಗೆ ಗೌರವ ಡಾಕ್ಟರೇಟ್

ಬೆಂಗಳೂರು, ಅ.2: ರಾಜಕೀಯ ಮತ್ತು ಉದ್ಯಮ ಕ್ಷೇತ್ರದ ಸಾಧನೆಗಾಗಿ ಮಾಜಿ ಸಂಸದ ಎಂ.ಶ್ರೀನಿವಾಸ್‌ಗೆ ಚೈನ್ನೈನ ಇಂಡಿಯನ್ ವರ್ಚುಯಲ್ ಯುನಿವರ್ಸಿಟಿ ಫಾರ್ ಪೀಸ್ ಅಂಡ್ ಎಜುಕೇಷನ್ ವತಿಯಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.
ಇತ್ತೀಚೆಗೆ ಚೆನ್ನೈನ ಕಿಲ್‌ಪಾಕ್ ಗಾರ್ಡನ್ ರಸ್ತೆಯಲ್ಲಿರುವ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ಶ್ರಿನಿವಾಸ್‌ರವರು ಉತ್ತರಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ಒಂದು ಬಾರಿ ಶಾಸಕರಾಗಿ ಚುನಾಯಿತರಾಗಿದ್ದರು. ಅಲ್ಲದೆ, ಒಂದು ಬಾರಿ ಕನಕಪುರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು.
Next Story





