Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿಟಿ ಪೊಲೀಸ್ ತಂಡಕ್ಕೆ ‘ಬ್ರ್ಯಾಂಡ್ ...

ಸಿಟಿ ಪೊಲೀಸ್ ತಂಡಕ್ಕೆ ‘ಬ್ರ್ಯಾಂಡ್ ಮಂಗಳೂರು’ ಟ್ರೋಫಿ: ಜಿಲ್ಲಾಧಿಕಾರಿ ತಂಡ ರನ್ನರ್

ವಾರ್ತಾಭಾರತಿವಾರ್ತಾಭಾರತಿ2 Oct 2018 10:19 PM IST
share
ಸಿಟಿ ಪೊಲೀಸ್ ತಂಡಕ್ಕೆ ‘ಬ್ರ್ಯಾಂಡ್  ಮಂಗಳೂರು’ ಟ್ರೋಫಿ: ಜಿಲ್ಲಾಧಿಕಾರಿ ತಂಡ ರನ್ನರ್

ಮಂಗಳೂರು, ಅ.2: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಆಶ್ರಯದಲ್ಲಿ ಅಡ್ಯಾರ್ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಬ್ರ್ಯಾಂಡ್ ಮಂಗಳೂರು ಫ್ರೆಂಡ್‌ಶಿಪ್ ಕ್ರಿಕೆಟ್ ಟೂರ್ನಿಯ ಫೈನಲ್‌ನಲ್ಲಿ ಡಿಸಿ ಇಲೆವೆನ್ ತಂಡವನ್ನು ಸೋಲಿಸುವ ಮೂಲಕ ನಗರ ಪೊಲೀಸ್ ತಂಡ ಪ್ರಶಸ್ತಿ ಗೆದ್ದುಕೊಂಡಿತು.

ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನಗರ ಪೊಲೀಸ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಬ್ಯಾಟಿಂಗ್ ಇಳಿದ ಡಿಸಿ ಇಲೆವೆನ್ ತಂಡ 5 ಓವರ್‌ನಲ್ಲಿ 9 ವಿಕೆಟ್‌ಗಳನ್ನು ಕಳೆದುಕೊಂಡು 26ರನ್ ಗಳಿಸುವಲ್ಲಿ ಯಶಸ್ವಿಯಾಯಿತು.

ಇದಕ್ಕುತ್ತರವಾಗಿ ಬ್ಯಾಟಿಂಗ್‌ಗಿಳಿದ ನಗರ ಪೊಲೀಸರು 3 ಓವರ್‌ನಲ್ಲಿ 3 ವಿಕೆಟ್ ಕಳೆದುಕೊಂಡು 27ರನ್ ಗಳಿಸುವ ಮೂಲಕ ವಿಜಯ ಸಾಧಿಸಿದರು. ಈ ಮೂಲಕ ಮಂಗಳೂರು ನಗರ ಪೊಲೀಸ್ ವಿನ್ನರ್ ಪ್ರಶಸ್ತಿ ತನ್ನದಾಗಿಸಿಕೊಂಡರೆ, ಜಿಲ್ಲಾಧಿಕಾರಿ ತಂಡ ರನ್ನರ್ ಪ್ರಶಸ್ತಿ ಗಳಿಸಿಕೊಂಡಿತು.

ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್, ಮಂಗಳೂರು ನಗರ ಉಪ ಪೊಲೀಸ್ ಆಯುಕ್ತೆ ಉಮಾಪ್ರಶಾಂತ್, ಸಹ್ಯಾದ್ರಿ ಅಧ್ಯಕ್ಷ ಮಂಜುನಾಥ ಭಂಡಾರಿ, ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಕಾರ್ಯದರ್ಶಿ ಬಿ.ಎನ್. ಪುಷ್ಪರಾಜ್, ಮಾಜಿ ಅಂತರರಾಷ್ಟ್ರೀಯ ಅಥ್ಲೀಟ್ ಸುನೀಲ್ ಶೆಟ್ಟಿ, ಉಪಸ್ಥಿತರಿದ್ದು, ವಿಜೇತರಿಗೆ ಅಭಿನಂದನೆ ಸಲ್ಲಿಸಿದರು.

ಸಂಘದ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭ ಮೊದಲ ಪ್ರಶಸ್ತಿ ಪಡೆದ ನಗರ ಪೊಲೀಸ್ ತಂಡಕ್ಕೆ ಪೊಲೀಸ್ ಕಮಿಷನರ್ 10ಸಾವಿರ ರೂ. ವಿಶೇಷ ಬಹುಮಾನ ಘೋಷಣೆ ಮಾಡಿದರು.

ಸಾಂಕೇತಿಕ ಉದ್ಘಾಟನೆ

ಕಾರ್ಯಕ್ರಮವನ್ನು ಬೆಳಗ್ಗೆ ಮಂಗಳೂರು ನಗರ ಪೊಲೀಸ್ ಉಪ ಪೊಲೀಸ್ ಆಯುಕ್ತೆ ಉಮಾಪ್ರಶಾಂತ್ ಮತ್ತು ದ.ಕ. ಜಿಲ್ಲಾ ಎಎಸ್ಪಿ ಸಜಿತ್ ಉದ್ಘಾಟಿಸಿದರು. ಈ ಸಂದರ್ಭ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಂಜುನಾಥ ಭಂಡಾರಿ, ಎಡಿಷನ್ ಎಸ್ಪಿ ಋಷಿಕೇಶ್ ಸೋನಾವಣೆ, ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಉಪಾಧ್ಯಕ್ಷ ದಯಾನಂದ್ ಕುಕ್ಕಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹೀಂ ಅಡ್ಕಸ್ಥಳ, ಕಾರ್ಯದರ್ಶಿ ಜೀತೇಂದ್ರ ಕುಂದೇಶ್ವರ ಉಪಸ್ಥಿತರಿದ್ದರು.

6 ತಂಡಗಳ ಮುಖಾಮುಖಿ

ಪಂದ್ಯಾಟದಲ್ಲಿ ಮಂಗಳೂರು ನಗರ ಪೊಲೀಸ್, ದ.ಕ. ಜಿಲ್ಲಾ ಎಸ್ಪಿ ತಂಡ, ನಗರ ಪತ್ರಕರ್ತರ ತಂಡ, ಗ್ರಾಮೀಣ ಪತ್ರಕರ್ತರ ತಂಡ, ಸಹ್ಯಾದ್ರಿ ಪ್ರೆಸಿಡೆಂಟ್ ಇಲೆವೆನ್, ಡಿಸಿ ಇಲೆವನ್ ತಂಡಗಳ ಮಧ್ಯೆ ಸ್ಪರ್ಧೆ ನಡೆಯಿತು. ಎ ಮತ್ತು ಬಿ ವಿಭಾಗದಲ್ಲಿ ಲೀಗ್ ಪಂದ್ಯಾಟ ನಡೆದು ಉತ್ತಮ ಪ್ರದರ್ಶನ ನೀಡಿದ ಸಿಟಿ ಪೊಲೀಸ್ ಮತ್ತು ನಗರ ಜಿಲ್ಲಾಧಿಕಾರಿಗಳ ತಂಡ ಫೈನಲ್‌ಗೇರಿತ್ತು.

ವೈಯಕ್ತಿಕ ಪ್ರಶಸ್ತಿ

ಫೈನಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಪತ್ರಕರ್ತರ ತಂಡದ ಧೀರಜ್ ಬೆಸ್ಟ್ ಬ್ಯಾಟ್ಸ್‌ಮನ್, ಡಿಸಿ ಇಲೆವೆನ್‌ನ ಕರುಣಾಕರ್ ಬೆಸ್ಟ್ ಬೌಲರ್, ಸಿಟಿ ಪೊಲೀಸ್ ತಂಡದ ರಂಜನ್ ಮ್ಯಾನ್ ಆಫ್‌ದಿ ಮ್ಯಾಚ್, ಸಿಟಿ ಪೊಲೀಸ್ ತಂಡ ರೋಹಿತ್ ಮ್ಯಾನ್ ಆಫ್ ದಿ ಸೀರಿಸ್ ಪ್ರಶಸ್ತಿ ತಮ್ಮದಾಗಿಸಿಕೊಂಡರು. ಅತೀ ಹೆಚ್ಚು ಸಿಕ್ಸರ್ ಬಾರಿಸಿದ ಧೀರಜ್ ಅವರಿಗೆ ಹಾಗೂ ಅತಿಹೆಚ್ಚು ವಿಕೆಟ್ ಪಡೆದ ರಂಜನ್ ಅವರಿಗೆ ‘ಸುದ್ದಿ ಬಿಡುಗಡೆ’ ವತಿಯಿಂದ ವಿಶೇಷ ಬಹುಮಾನ ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X