Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ವಚ್ಛತೆ, ಶಾಂತಿಗೆ ಪ್ರಥಮ ಆದ್ಯತೆ:...

ಸ್ವಚ್ಛತೆ, ಶಾಂತಿಗೆ ಪ್ರಥಮ ಆದ್ಯತೆ: ಶಾಸಕ ರಾಜೇಶ್ ನಾಯ್ಕ್

ವಾರ್ತಾಭಾರತಿವಾರ್ತಾಭಾರತಿ2 Oct 2018 10:22 PM IST
share
ಸ್ವಚ್ಛತೆ, ಶಾಂತಿಗೆ ಪ್ರಥಮ ಆದ್ಯತೆ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ, ಅ. 2: ತಾಲೂಕು ಕೇಂದ್ರವಾದ ಬಂಟ್ವಾಳದಲ್ಲಿ ಶುಚಿತ್ವಕ್ಕೆ ಹೆಚ್ಚು ಮಹತ್ವ ನೀಡಬೇಕಾದ ಅಗತ್ಯವಿದ್ದು, ಪೊಳಲಿ ದ್ವಾರದಿಂದ ನಾರಾಯಣಗುರು ವೃತ್ತದವರೆಗೆ ಇಡೀ ಬಿ.ಸಿ.ರೋಡ್ ಅನ್ನು ಸುಂದರಗೊಳಿಸುವ ಕಾರ್ಯ ನಡೆಯಲಿದೆ. ಅದೇ ರೀತಿ ಬಂಟ್ವಾಳ ಪರಿಸರದಲ್ಲಿ ಸ್ವಚ್ಛತೆಯಷ್ಟೇ ಅಲ್ಲ, ಶಾಂತಿ ಸಹಭಾಳ್ವೆಗೆ ನಾವು ಪ್ರಥಮ ಆದ್ಯತೆ ನೀಡಬೇಕಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದ್ದಾರೆ.

ಬಂಟ್ವಾಳ ಪುರಸಭೆ, ರೋಟರಿ ಕ್ಲಬ್ ಬಂಟ್ವಾಳ, ಲಯನ್ಸ್ ಕ್ಲಬ್ ಬಂಟ್ವಾಳ, ಜೇಸಿ ಬಂಟ್ವಾಳ, ಜೋಡುಮಾರ್ಗ ನೇತ್ರಾವತಿ ಜೇಸಿ, ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್, ಎಸ್‍ವಿಎಸ್ ಕಾಲೇಜು ಬಂಟ್ವಾಳ, ಮೊಡಂಕಾಪು ಕಾರ್ಮೆಲ್ ಶಿಕ್ಷಣ ಸಂಸ್ಥೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಿತ ನಾನಾ ಸಂಘ, ಸಂಸ್ಥೆಗಳ ಸಹಯೋಗದೊಂದಿಗೆ ಸ್ವಚ್ಛತೆಯ ಅರಿವು, ಪ್ಲಾಸ್ಟಿಕ್ ಮುಕ್ತ ಬಂಟ್ವಾಳದ ಕುರಿತು ಜಾಗೃತಿ ಮೂಡಿಸುವ ಜಾಥಾದ ಬಳಿಕ ಬಂಟ್ವಾಳದ ಸ್ಪರ್ಶ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಹಾತ್ಮಾ ಗಾಂಧೀಜಿಯವರ 150ನೆ ಜನ್ಮ ದಿನಾಚರಣೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಂದ ಮೊದಲ್ಗೊಂಡು ಇಡೀ ದೇಶವೇ ಆಚರಿಸುತ್ತಿದೆ. ಈ ಸಂದರ್ಭ ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡಬೇಕು. ನಮ್ಮ ಮನೆ, ನಮ್ಮ ಪರಿಸರವನ್ನು ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರಾದ ನಾವೂ ಸ್ವಚ್ಛತೆಯ ಕುರಿತು ಅರಿವು ಮೂಡಿಸಿಕೊಳ್ಳಬೇಕು ಎಂದು ಹೇಳಿದ ಶಾಸಕರು, ಕಳೆದ ಕೆಲ ವರ್ಷಗಳಲ್ಲಿ ಬಂಟ್ವಾಳ ಕಸದ ಕೊಂಪೆಯಾಗಿ ಮಾರ್ಪಟ್ಟಿರುವುದು ನೋವು ತಂದಿದ್ದು, ಹೀಗಾಗಿ ಬಂಟ್ವಾಳವನ್ನು ತ್ಯಾಜ್ಯಮುಕ್ತವಾಗಿಸಲು ಅಧಿಕಾರಿಗಳು ಕ್ರಿಯಾಶೀಲರಾಗಬೇಕು ಎಂದು ಸೂಚಿಸಿದರು.

ಬಂಟ್ವಾಳ ಪುರಸಭೆಯ ಸ್ವಚ್ಛತಾ ರಾಯಭಾರಿಯಾಗಿರುವ ಪ್ರೊ. ತುಕಾರಾಮ ಪೂಜಾರಿ ಮಾತನಾಡಿ, ಗಾಂಧೀಜಿಯವರ ಆದರ್ಶಗಳ ಜೊತೆಗೆ ಲಾಲ್ ಬಹದ್ದೂರ್ ಶಾಸ್ತ್ರಿಯವರ ಛಲವನ್ನೂ ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಪುರಸಭೆ ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ, ಬಂಟ್ವಾಳ ಪ್ರ.ದರ್ಜೆ ಕಾಲೇಜಿನ ಎನ್ನೆಸ್ಸೆಸ್ ಅಧಿಕಾರಿ ಪ್ರೊ.  ಹೈದರಾಲಿ, ಎಸ್.ವಿಎಸ್ ಕಾಲೇಜು ಪ್ರಾಚಾರ್ಯ ಪ್ರೊ. ಪಾಂಡುರಂಗ ನಾಯಕ್, ಕಾರ್ಮೆಲ್ ಕಾನ್ವೆಂಟ್ ವಿದ್ಯಾಸಂಸ್ಥೆಯ ಸಿ. ಸುಪ್ರಿಯಾ, ಎನ್ನೆಸ್ಸೆಸ್ ಆಫೀಸರ್ ಮಧುರಾ, ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷ ಮಂಜುನಾಥ ಆಚಾರ್ಯ, ಲಯನ್ಸ್ ಕ್ಲಬ್ ಬಂಟ್ವಾಳ ಅಧ್ಯಕ್ಷ ಸುಧಾಕರ ಆಚಾರ್ಯ, ಜೋಡುಮಾರ್ಗ ಜೇಸಿ ಅಧ್ಯಕ್ಷೆ ಸವಿತಾ ನಿರ್ಮಲ್, ವರ್ತಕರ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಜೈನ್, ಪ್ರಮುಖರಾದ ಕಿಟ್ಟು ರಾಮಕುಂಜ, ಎಸ್ಕೆಎಸ್ಸೆಸ್ಸೆಫ್ ಪ್ರಮುಖರಾದ ಮುಹಮ್ಮದ್ ರಫೀಕ್, ಅಂಗನ ವಾಡಿಯ ಪ್ರಮುಖರಾದ ವಸಂತಿ ಗಂಗಾಧರ್ ವೇದಿಕೆಯಲ್ಲಿದ್ದರು.

ಪುರಸಭೆ ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ ಸ್ವಾಗತಿಸಿದರು. ಸಮುದಾಯ ಅಭಿವೃದ್ಧಿ ಅಧಿಕಾರಿ ಮತ್ತಡಿ ಕಾರ್ಯಕ್ರಮ ನಿರೂಪಿಸಿದರು.

ವಾಹನ ಜಾಥಾ:

ಇದಕ್ಕೂ ಮುನ್ನ ಮೇಲ್ಕಾರ್, ಕೈಕಂಬದ ಪೂಂಜ ಮೈದಾನ ಹಾಗೂ ಬಂಟ್ವಾಳ ವಿದ್ಯಾಗಿರಿಯಿಂದ ವಿದ್ಯಾರ್ಥಿಗಳು, ಎನ್ನೆಸ್ಸೆಸ್, ಎನ್‍ಸಿಸಿ ತಂಡ, ಕಲ್ಲಡ್ಕದ ಶಿಲ್ಪಾ ಗೊಂಬೆ ಬಳಗದ ಜಾಥಾ ನಡೆಯಿತು.

ಪ್ಲಾಸ್ಟಿಕ್ ಜಾಗೃತಿ ಮೂಡಿಸುವ ಹಲವು ಫಲಕಗಳನ್ನು ಹೊತ್ತುಕೊಂಡು ಅಂಗಡಿ ಮುಂಗಟ್ಟುಗಳಿಗೆ ವಿದ್ಯಾರ್ಥಿಗಳು ಪ್ಲಾಸ್ಟಿಕ್ ದುಷ್ಪರಿಣಾಮಗಳ ಸಂದೇಶವನ್ನು ನೀಡಿದರು.

ಮೇಲ್ಕಾರಿನ ಎಮಿನೆಂಟ್ ಎಜುಕೇಶನ್ ಇನ್ಸ್ಟಿಟ್ಯೂಟ್, ಬಂಟ್ವಾಳ ಎಸ್‍ವಿಸ್ ಶಿಕ್ಷಣ ಸಂಸ್ಥೆ, ಬಿಆರ್‍ಎಂಪಿ ಶಾಲೆ, ಮೊಡಂಕಾಪು ಕಾರ್ಮೆಲ್ ಕಾನ್ವೆಂಟ್ ಶಾಲೆ, ಜೋಡುಮಾರ್ಗ ಜೇಸಿ, ಎಸ್ಕೆಎಸ್ಸೆಸ್ಸೆಫ್ ಸದಸ್ಯರು, ಸರಕಾರಿ ಪ್ರಥಮ ದರ್ಜೆ ಕಾಲೇಜು, ಲಯನ್ಸ್ ಕ್ಲಬ್, ರೋಟರಿ ಕ್ಲಬ್, ಜೇಸಿಯ ಸದಸ್ಯರು ಜಾಥಾದಲ್ಲಿ ಪಾಲ್ಗೊಂಡರು. ಪುರಸಭೆ ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ ಜಾಥಾ ನೇತೃತ್ವ ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X