Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಿರಿಯ ಹೋರಾಟಗಾರ ಸುಬ್ಬಣ್ಣ ಶೆಟ್ಟಿ ನಿಧನ

ಹಿರಿಯ ಹೋರಾಟಗಾರ ಸುಬ್ಬಣ್ಣ ಶೆಟ್ಟಿ ನಿಧನ

ವಾರ್ತಾಭಾರತಿವಾರ್ತಾಭಾರತಿ2 Oct 2018 10:41 PM IST
share
ಹಿರಿಯ ಹೋರಾಟಗಾರ ಸುಬ್ಬಣ್ಣ ಶೆಟ್ಟಿ ನಿಧನ

ಬಂಟ್ವಾಳ, ಅ. 2: ತಾಲೂಕಿನ ಹಿರಿಯ ರಾಜಕೀಯ, ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ, ಸಹಕಾರಿ ರಂಗದ ಧುರೀಣ, ಹೋರಾಟಗಾರ ಸರಪಾಡಿ ಸುಬ್ಬಣ್ಣ ಶೆಟ್ಟಿ (74) ಅವರು ಮಂಗಳವಾರ ಅನಾರೋಗ್ಯದಿಂದ ಸರಪಾಡಿಯಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು.

ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಜನಸಾಮಾನ್ಯರ ಮೂಲಭೂತ ಸೌಲಭ್ಯವನ್ನು ಹೋರಾಟದ ಮೂಲಕವೇ ಪಡೆಯುವಲ್ಲಿ ಅವರು ಯಶಸ್ವಿಯಾಗುತ್ತಿದ್ದು, ಹೋರಾಟಗಾರನೆಂದೇ ಗುರುತಿಸಿಕೊಂಡಿದ್ದರು. ಸರಪಾಡಿ ಗ್ರಾಮ ಪಂಚಾಯತ್‍ನ ಸದಸ್ಯನಾಗಿ, ಬಂಟ್ವಾಳ ತಾಲೂಕು ಪಂಚಾಯತ್‍ನ ಸದಸ್ಯನಾಗಿ ಕಾರ್ಯನಿರ್ವಹಿಸಿದ್ದ ಅವರು ಬಂಟ್ವಾಳ ಕ್ಷೇತ್ರ ಬಿಜೆಪಿಯ ಮುಖಂಡರಾಗಿದ್ದರು.

ಆರಂಭಿಕ ದಿನಗಳಲ್ಲಿ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದ ಅವರು ಬಳಿಕ ಜೆಡಿಎಸ್ ಪಕ್ಷವನ್ನು ಸೇರಿದ್ದರು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಜೆಡಿಎಸ್‍ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಅವರು 2004ರಲ್ಲಿ ಮರಳಿ ಮಾತೃಪಕ್ಷ ಬಿಜೆಪಿಯನ್ನು ಸೇರ್ಪಡೆಯಾಗಿದ್ದರು.

ಪ್ರಸ್ತುತ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿದ್ದು, ಈ ದೇವಸ್ಥಾನವು ಸಾರ್ವಜನಿಕ ದೇವಸ್ಥಾನವಾಗಿ ಪರಿಗಣಿಸುವಲ್ಲಿ ಸುಬ್ಬಣ್ಣ ಶೆಟ್ಟಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಸಾರ್ವಜನಿಕ ಶ್ರೀ ಗಣೇಶೋತ್ಸವ, ಶ್ರೀ ಶಾರದೋತ್ಸವವನ್ನು ಆಯೋಜಿಸುತ್ತಾ ಬಂದಿದ್ದ ಸುಬ್ಬಣ್ಣ ಶೆಟ್ಟಿ ಅವರು ಶ್ರೀಶರಭೇಶ್ವರ ಯಕ್ಷಗಾನ ಸಂಘವನ್ನು ಸ್ಥಾಪಿಸಿ ವೃತ್ತಿಪರ ಮತ್ತು ಹವ್ಯಾಸಿ ಕಲಾವಿದರ ಮೂಲಕ ತಾಳಮದ್ದಳೆಯನ್ನು ಸಂಘಟಿಸುತ್ತಿದ್ದರಲ್ಲದೆ ಸ್ವತ: ಅರ್ಥಧಾರಿಯಾಗಿ ತನ್ನನ್ನು ತೊಡಗಿಸಿಕೊಂಡಿದ್ದರು.

ಸರಪಾಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ, ಮಣಿನಾಲ್ಕೂರು ಸೇವಾ ಸಹಕಾರಿ ಸಂಘದಲ್ಲಿ ದೀರ್ಘಕಾಲದಿಂದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಪ್ರಗತಿಪರ ಕೃಷಿಕರಾಗಿದ್ದ ಅವರು ಕಬ್ಬು ಬೆಳೆಗಾರರಾಗಿದ್ದು ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆ ಆಯೋಜಿಸಿದ್ದ ಕಬ್ಬು ಬೆಳೆಯುವ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದರು.

ಸರಪಾಡಿ ಅಣೆಕಟ್ಟು ಸಂತ್ರಸ್ತರ ಹೋರಾಟ ಸಮಿತಿಯ ಮೂಲಕ ಪ್ರತಿಭಟನೆ ನಡೆಸಿ ಬೃಹತ್ ಅಣೆಕಟ್ಟು ನಿರ್ಮಾಣವನ್ನು ತಡೆಯುವಲ್ಲಿ ಅವರು ಯಶಸ್ವಿಯಾಗಿದ್ದರು. ನೇತ್ರಾವತಿ ನದಿ ನೀರು ಮತ್ತು ವಿದ್ಯುತ್ ಬಳಕೆದಾರರರ ಸಂಘದ ಅಧ್ಯಕ್ಷರಾಗಿ ನದಿ ತೀರದ ರೈತರ ಪಂಪ್ ಸೆಟ್‍ಗಳನ್ನು ತೆರವುಗೊಳಿಸಿದ ಮತ್ತು ಅನಿಯಮಿತ ವಿದ್ಯುತ್ ಕಡಿತದ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಸರಪಾಡಿಗೆ ಸರಕಾರಿ ಬಸ್, ಸರಕಾರಿ ಶಾಲೆಗಳು ಸಹಿತ ಮೂಲಭೂತ ಸೌಲಭ್ಯಗಳು ಬರುವಲ್ಲಿ ಸರಪಾಡಿ ಸುಬ್ಬಣ್ಣ ಶೆಟ್ಟಿ ಅವರು ಹೋರಾಟದ ಮುಂಚೂಣಿಯಲ್ಲಿದ್ದರು.

ಸರಪಾಡಿ ಯುವಕ ಮಂಡಲದ ಸಕ್ರಿಯ ಸದಸ್ಯರಾಗಿದ್ದು, ಕ್ರೀಡಾಕೂಟ, ವೈದ್ಯಕೀಯ ಶಿಬಿರ ಸಹಿತ ಹಲವಾರು ಕಾರ್ಯಕ್ರಮಗಳನ್ನು ಸಂಘಟಿಸಿದ್ದರು.

ಅಂತಿಮ ದರ್ಶನ:

ಸುಬ್ಬಣ್ಣ ಶೆಟ್ಟಿ ಅವರ ನಿಧನದ ಹಿನ್ನೆಯಲ್ಲಿ ಸರಪಾಡಿ ಗ್ರಾಮ ಶೋಕಸಾಗರದಲ್ಲಿ ಮುಳುಗಿದ್ದು, ಗ್ರಾಮಸ್ಥರು ಸಂಜೆಯವರೆಗೂ ಆಗಮಿಸಿ ಮೃತರ ಅಂತಿಮ ದರ್ಶನ ಪಡೆದರು.

ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಮಾಜಿ ಸಚಿವ ಬಿ.ರಮಾನಾಥ ರೈ, ಹರಿಯ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ, ಜಿಪಂ ಸದಸ್ಯರಾದ ಎಂ.ತುಂಗಪ್ಪ ಬಂಗೇರ, ಬಿ.ಪದ್ಮಶೇಖರ ಜೈನ್, ಚಂದ್ರಪ್ರಕಾಶ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ್, ಬಂಟ್ವಾಳ ಕ್ಷೇತ್ರ ಅಧ್ಯಕ್ಷ ದೇವುದಾಸ ಶೆಟ್ಟಿ, ಸರಪಾಡಿ ಗ್ರಾ. ಪಂ. ಅಧ್ಯಕ್ಷೆ ಲೀಲಾವತಿ ಮತ್ತಿತರ ಪ್ರಮುಖರು ಅಂತಿಮ ದರ್ಶನ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X