ರಾಜ್‌ಘಾಟ್‌ನಲ್ಲಿ ಮಹಾತ್ಮಾ ಗಾಂಧಿಗೆ ಗೌರವ ಸಲ್ಲಿಸಿದ ಪ್ರಧಾನಿ, ರಾಷ್ಟ್ರಪತಿ

ಹೊಸದಿಲ್ಲಿ, ಸೆ. 2: ಮಹಾತ್ಮಾ ಗಾಂಧಿ ಅವರ 149 ಜನ್ಮ ದಿನಾಚರಣೆಯಾದ ಮಂಗಳವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ ಹಾಗೂ ಪ್ರಧಾನಿ ನರೇಂದ್ರ ಮೋದಿ ರಾಜ್‌ಘಾಟ್‌ಗೆ ತೆರಳಿ ಗಾಂಧೀಜಿ ಅವರ ಪ್ರತಿಮೆಗೆ ಪುಷ್ಪಗಳನ್ನು ಅರ್ಪಿಸಿ ಗೌರವ ವಂದನೆ ಸಲ್ಲಿಸಿದರು.
ಗಾಂಧೀಜಿ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ ಕಾರ್ಯದರ್ಶಿ ಆ್ಯಂಟಾನಿಯೋ ಗುಟೆರೆಸ್ ಸೋಮವಾರ ದಿಲ್ಲಿಗೆ ಆಗಮಿಸಿದ್ದರು. ‘‘ಅಹಿಂಸೆ ಚರಿತ್ರೆಯನ್ನು ಬದಲಿಸಬಲ್ಲುದು ಎಂಬುದನ್ನು ಅವರು ಮತ್ತೊಮ್ಮೆ ತೋರಿಸಿಕೊಟ್ಟಿದ್ದಾರೆ ಎಂಬುದನ್ನು ಮಹಾತ್ಮಾ ಗಾಂಧಿ ಅವರ ಸ್ಮಾರಕದಲ್ಲಿ ನಾನು ಮತ್ತೊಮ್ಮೆ ನೆನಪಿಸಿಕೊಂಡಿ.’’ ಎಂದು ಗುಟೆರೆಸ್ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ರಾಜಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಅವರ ವಿಗ್ರಹಕ್ಕೆ ಪುಷ್ಪ ನಮನ ಸಲ್ಲಿಸಿದರು.
Next Story





