ಸಾಲಿಹಾತ್ ಕಾಲೇಜಿನಲ್ಲಿ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಅ.3: ತೋನ್ಸೆ ಹೂಡೆಯ ಸಾಲಿಹಾತ್ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾಲೇಜಿನ ಆಡಳಿತಾಧಿಕಾರಿ ಹಾಗೂ ಪ್ರಾಂಶುಪಾಲ ಅಸ್ಲಂ ಹೈಕಾಡಿ ಮಾರ್ಗದರ್ಶನದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನ ಸುತ್ತಮುತ್ತಲಿನ ಪ್ರದೇಶಗಳಿಗೆ ತೆರಳಿ ಸ್ವಚ್ಛತಾ ಕಾರ್ಯ ನಡೆಸಿದರು. ಸಾರ್ವಜನಿಕರಿಗೆ, ವ್ಯಾಪಾರಸ್ಥರಿಗೆ ಸ್ವಚ್ಛತೆಯ ಬಗ್ಗೆ ತಿಳಿ ಹೇಳಿದರು. ಇದರಲ್ಲಿ ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Next Story





