Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲ: ಅ.7ರಂದು ಸಂಭ್ರಮ ಕಿರುಚಿತ್ರ...

ಮಣಿಪಾಲ: ಅ.7ರಂದು ಸಂಭ್ರಮ ಕಿರುಚಿತ್ರ ಸ್ಪರ್ಧೆ, ಪ್ರಶಸ್ತಿ ವಿತರಣೆ

ವಾರ್ತಾಭಾರತಿವಾರ್ತಾಭಾರತಿ3 Oct 2018 7:35 PM IST
share

ಉಡುಪಿ, ಅ.3: ಉಡುಪಿಯ ಸಂಭ್ರಮ ಕಲ್ಚರಲ್ ಟ್ರಸ್ಟ್ ಆಯೋಜಿಸಿದ ಕಿರುಚಿತ್ರಗಳ ಸ್ಪರ್ಧೆ 2018ರ ಪ್ರಶಸ್ತಿ ವಿತರಣಾ ಸಮಾರಂಭ ಅ.7ರ ರವಿವಾರ ಅಪರಾಹ್ನ 2 ರಿಂದ ರಾತ್ರಿ 9 ಗಂಟೆಯವರೆಗೆ ಮಣಿಪಾಲದ ಆರ್‌ಎಸ್‌ಬಿ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಭ್ರಮ ಕಲ್ಚರಲ್ ಟ್ರಸ್ಟ್‌ನ ಅಧ್ಯಕ್ಷ ಸಂದೀಪ್ ಕಾಮತ್ ತಿಳಿಸಿದ್ದಾರೆ.

ಉಡುಪಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರುಈ ಬಾರಿಯ ಪ್ರಶಸ್ತಿ ವಿತರಣಾ ಸಮಾರಂಭವನ್ನು ವಿಶಿಷ್ಟರೀತಿಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಸಲು ನಿರ್ಧರಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ತುಳು ಚಿತ್ರಗಳ ನಟ,ನಟಿಯರು, ನಿರ್ಮಾಪಕರು, ನಿರ್ದೇಶಕರು ಹಾಗೂ ಚಿತ್ರಪ್ರೇಮಿಗಳು ಭಾಗವಹಿಸಲಿದ್ದಾರೆ. ನಟ-ನಟಿಯರಾದ ರಕ್ಷಿತ್ ಶೆಟ್ಟಿ, ಅರವಿಂದ ಬೋಳಾರ್, ಅರ್ಜುನ್ ಕಾಪಿಕಾಡ್, ಪ್ರಕಾಶ್ ಶೆಟ್ಟಿ, ರಾಧಿಕಾ ರಾವ್, ಶ್ರೇಯಾ ಆಂಚನ್ ಸೇರಿದಂತೆ 25ಕ್ಕೂ ಅದಿಕ ಮಂದಿ ಭಾಗವಹಿಸಲಿದ್ದಾರೆ.

ಅಲ್ಲದೇ ಕನ್ನಡ ಮತ್ತು ತುಳು ಚಿತ್ರರಂಗದ ವಿವಿಧ ಚಿತ್ರತಂಡಗಳು ಇದರಲ್ಲಿ ಪಾಲ್ಗೊಂಡು ಕಾರ್ಯಕ್ರಮಗಳನ್ನು ನೀಡಲಿವೆ. ಬಾಯೋ ಕೊಂಕಣಿ ಚಿತ್ರತಂಡ, ಗಂಟ್ ಕಲ್ವೇರ್, ದೇಯಿ ಬೈದೆತಿ, ಭಟ್ರೆನ್ ಮಗಲ್, ಬಲಿಪೆ, ಗೋಲ್‌ಮಾಲ್ ಮುಂತಾದ ತುಳು ಚಿತ್ರ ತಂಡ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಕನ್ನಡ ಚಿತ್ರ ತಂಡ ಸಹ ಪಾಲ್ಗೊಳ್ಳಲಿವೆ ಎಂದರು.

ಕಾರ್ಯಕ್ರಮದಲ್ಲಿ ಉದಯ ಟಿವಿಯ ಭರ್ಜರಿ ಕಾಮಿಡಿ ಖ್ಯಾತಿಯ ಮಿಮಿಕ್ರಿ ಗೋಪಿ, ಕಾಪುವಿನ ಗ್ರಾವಿಟಿ ಡ್ಯಾನ್ಸ್ ಗ್ರೂಪ್, ಅಶೋಕ್ ಪೊಳಲಿ ಅವರ ವೈವಿಧ್ಯಮಯ ಡ್ಯಾನ್ಸ್, ವಿಶ್ವಾಸ್ ಗುರುಪುರ, ದಿವ್ಯಾ ರಾಮಚಂದ್ರಿಂದ ಗಾಯನ, ಬಹುಮಾನ ವಿತರಣೆ ಮುಂತಾದವು ನಡೆಯಲಿವೆ ಎಂದವರು ವಿವರಿಸಿದರು.

ಒಟ್ಟು 47 ಕಿರುಚಿತ್ರಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದು, ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಗುವುದು. ಕನ್ನಡ ಚಿತ್ರರಂಗದ ಹಿರಿಯ ನಟ ದಯಾನಂದ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಹಾಜಿ ಕೆ.ಅಬೂಬಕರ್, ಯೋಧರಾದ ನಾರಾಯಣ ಕಾಮತ್, ರಾಜೇಶ್ ಪ್ರಭು ಇವರಿಗೆ ಸನ್ಮಾನವೂ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಭುವನೇಶ್ ಪ್ರಭು, ಪ್ರಕಾಶ್ ಸುವರ್ಣ, ಸುಹಾಸ್ ಶೆಣೈ, ದಯಾನಂದ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X