ಖಾಸಗಿ ಕಂಪೆನಿ ಉದ್ಯೋಗಿ ಆತ್ಮಹತ್ಯೆ

ಬೆಂಗಳೂರು, ಅ.3: ಖಾಸಗಿ ಕಂಪೆನಿಯ ಉದ್ಯೋಗಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವೈಟ್‌ಫೀಲ್ಡ್‌ನ ನಾಗಗೊಂಡನಹಳ್ಳಿ ನಿವಾಸಿ ವಿನಯ್ ಕುಮಾರ್ (26) ಆತ್ಮಹತ್ಯೆ ಮಾಡಿಕೊಂಡ ಖಾಸಗಿ ಕಂಪೆನಿಯ ಉದ್ಯೋಗಿ ಎಂದು ತಿಳಿದುಬಂದಿದೆ.
ಚಿತ್ರದುರ್ಗ ಮೂಲದ ವಿನಯ್‌ಕುಮಾರ್, ಮನೆಯ ಚಾವಣಿ ಮೇಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಡರಾತ್ರಿ ಮನೆಯವರು ಚಾವಣಿ ಮೇಲೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಈ ಸಂಬಂಧ ವೈಟ್‌ಫೀಲ್ಡ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವೈದೇಹಿ ಆಸ್ಪತ್ರೆಗೆ ರವಾನಿಸಿದ್ದಾರೆ.
Next Story





