ಮಂಡ್ಯ: ರಸ್ತೆ ಅಪಘಾತಕ್ಕೆ ಬೈಕ್ ಸವಾರ ಬಲಿ

ಮಂಡ್ಯ, ಅ.3: ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿ ಬುಲೆಟ್ ಬೈಕ್‍ನಿಂದ ಬಿದ್ದ ಯುವಕನ ಮೇಲೆ ಅಪರಿಚಿತ ವಾಹನ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಳೇ ಬೂದನೂರು ಗ್ರಾಮದ ಬಳಿ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ.
ತಾಲೂಕಿನ ಶಿವಾರ ಗ್ರಾಮದ ಪ್ರದೀಪ್ ಸಾವನ್ನಪ್ಪಿದ್ದು, ಶಿವು ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





