ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು
ಚಾಮರಾಜನಗರ, ಅ. 03: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ, ಅತ್ಯಾಚಾರ ಎಸಗಿದ ಆರೋಪಿಗೆ ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಗುಂಡ್ಲುಪೇಟೆ ತಾಲೂಕಿನ ತೊಂಡವಾಡಿ ಗ್ರಾಮದ ವೆಂಕಟೇಶ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ.
ಅಪ್ರಾಪ್ತ ಬಾಲಕಿ ಒಂದು ಗಂಡು ಮಗುವಿಗೆ ಜನ್ಮ ನೀಡಿದ್ದು, ಪ್ರಕರಣ ದಾಖಲಾಗಿತ್ತು. ಆರೋಪ ಸಾಭೀತಾದ ಕಾರಣ ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರಾದ ಬಸವರಾಜ ಅವರು ವೆಂಕಟೇಶನಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ, 5 ಸಾವಿರ ರೂ. ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೊಜಕರಾದ ಕೆ. ಯೋಗೇಶ್ ವಾದ ಮಂಡಿಸಿದ್ದರು.
Next Story