ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಯುವತಿಯ ವಿರುದ್ಧ ಪ್ರಕರಣ ದಾಖಲಿಸದ ಪೊಲೀಸರು!

ಹೊಸದಿಲ್ಲಿ, ಅ. 3: ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಯುವತಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ನಿರಾಕರಿಸಿದ ಘಟನೆ ಹೊಸದಿಲ್ಲಿಯಲ್ಲಿ ನಡೆದಿದೆ. ಸಲಿಂಗ ಕಾಮ ಅಪರಾಧ ಅಲ್ಲ ಎಂದು ಸುಪ್ರೀಂ ಕೋರ್ಟ್ ಚಾರಿತ್ರಿಕ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಈ ಪ್ರಕರಣ ಪ್ರಾಮುಖ್ಯತೆ ಪಡೆದುಕೊಂಡಿದೆ.
19 ವರ್ಷದ ಯುವತಿ ತನ್ನ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾರೆ ಎಂದು ಕೆಲಸಕ್ಕಾಗಿ ದಿಲ್ಲಿಗೆ ವಲಸೆ ಬಂದಿರುವ 25 ವರ್ಷದ ಮಹಿಳೆ ಆರೋಪಿಸಿದ್ದಾರೆ. ತನ್ನ ಮೇಲೆ ಯುವತಿ ಅತ್ಯಾಚಾರ ಎಸಗಿದ್ದಾಳೆ ಎಂದು ಆರೋಪಿಸಿ 25 ವರ್ಷದ ಮಹಿಳೆ ಪ್ರಕರಣ ದಾಖಲಿಸಲು ಇಲ್ಲಿನ ಸೀಮಾಪುರಿ ಪೊಲೀಸ್ ಠಾಣೆ ಸಂಪರ್ಕಿಸಿದ್ದಾರೆ. ಆದರೆ, ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ.
‘‘ಆಕೆಯ ವಿರುದ್ಧ ಪ್ರಕರಣ ದಾಖಲಿಸಲು ನಾನು ಸೀಮಾಪುರಿ ಪೊಲೀಸ್ ಠಾಣೆಯ ಪೊಲೀಸರಲ್ಲಿ ಮನವಿ ಮಾಡಿದ್ದೆ. ಆದರೆ, ಅವರು ದೂರು ದಾಖಲಿಸಿಕೊಳ್ಳಲು ನಿರಾ ಕರಿಸಿದರು. ಮ್ಯಾಜಿಸ್ಟ್ರೇಟರ್ ಮುಂದೆ ಕೂಡ ಉಲ್ಲೇಖಿಸದಂತೆ ಅವರು ತಿಳಿಸಿದ್ದರು. ಆದರೆ, ನಾನು ಕೇಳಲಿಲ್ಲ’’ ಎಂದು ದೂರುದಾರೆ ಹೇಳಿದ್ದಾಳೆ.
ಮಹಿಳೆ ದೂರು ನೀಡಿದ ಬಳಿಕ ಕಾರ್ಕೋರ್ಡೋಮಾ ಜಿಲ್ಲಾ ನ್ಯಾಯಾಲಯದಲ್ಲಿ ಆರೋಪಿ ಮಹಿಳೆಯ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ.







