ಬಾರ್‌ಗಳ ಮೇಲೆ ಸಿಸಿಬಿ ದಾಳಿ: 57 ಮಂದಿಯ ವಿಚಾರಣೆ
ಬೆಂಗಳೂರು, ಅ.4: ನಗರದ ವಿವಿಧೆಡೆಗಳಲ್ಲಿ ಸುಮಾರು 25 ಕ್ಕೂ ಹೆಚ್ಚು ಬಾರ್‌ಗಳ ಮೇಲೆ ದಾಳಿ ನಡೆಸಿರುವ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ಸುಮಾರು 57ಮಂದಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.
ನಗರದ ಹಲಸೂರು, ಶಿವಾಜಿನಗರ, ಇಂದಿರಾನಗರ, ಬೊಮ್ಮನಹಳ್ಳಿ, ಕೋರಮಂಗಲ, ಎಚ್‌ಎಸ್‌ಆರ್ ಲೇಔಟ್, ಆಡುಗೋಡಿ, ಮೈಕೋ ಲೇಔಟ್, ಯಲಹಂಕ, ಕೊತ್ತನೂರು, ಕೊಡಿಗೆಹಳ್ಳಿ, ವಿದ್ಯಾರಣ್ಯಾಪುರ ಸೇರಿ ಒಟ್ಟು 25 ಬಾರ್‌ಗಳ ಮೇಲೆ ದಾಳಿ ನಡೆಸಿ, ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ಡಿಸಿಪಿ ಗಿರೀಶ್ ತಿಳಿಸಿದ್ದಾರೆ.
ಸರ ಅಪಹರಣ, ಮನೆಗಳವು, ಸುಲಿಗೆ, ದರೋಡೆ ಸೇರಿದಂತೆ ಇನ್ನಿತರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಶಂಕೆಯ ಮೇಲೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ. ಅಪರಾಧ ಕೃತ್ಯಗಳನ್ನು ಎಸಗುವವರಿಗೆ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ ಎಂದು ಅವರು ಹೇಳಿದರು.
Next Story





