Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇನ್ನು ಮುಂದೆ ದೇಶದ ಒಳಗೆ ವಿಮಾನದಲ್ಲಿ...

ಇನ್ನು ಮುಂದೆ ದೇಶದ ಒಳಗೆ ವಿಮಾನದಲ್ಲಿ ಪ್ರಯಾಣಿಸಲು ಮುಖವೇ ಗುರುತು ಪತ್ರ

ಪಾಸ್‌ಪೋರ್ಟ್, ಐಡಿಯ ಅಗತ್ಯವಿಲ್ಲ

ವಾರ್ತಾಭಾರತಿವಾರ್ತಾಭಾರತಿ4 Oct 2018 9:13 PM IST
share
ಇನ್ನು ಮುಂದೆ ದೇಶದ ಒಳಗೆ ವಿಮಾನದಲ್ಲಿ ಪ್ರಯಾಣಿಸಲು ಮುಖವೇ ಗುರುತು ಪತ್ರ

ಹೊಸದಿಲ್ಲಿ, ಅ. 3: ದೇಶದ ವಿಮಾನ ನಿಲ್ದಾಣಗಳಿಗೆ ಪ್ರವೇಶ ಪಡೆಯಲು ಹಾಗೂ ವಿಮಾನದಲ್ಲಿ ಪ್ರಯಾಣಿಸಲು ಪ್ರಯಾಣಿಕರ ಮುಖ ಗುರುತಿಸಬಲ್ಲ ಬಯೋಮೆಟ್ರಿಕ್ ವ್ಯವಸ್ಥೆಯನ್ನು ‘ಡಿಜಿ ಯಾತ್ರೆ’ ಅಡಿಯಲ್ಲಿ ಕೇಂದ್ರ ಸರಕಾರ ಅತಿ ಶೀಘ್ರದಲ್ಲಿ ಆರಂಭಿಸಲಿದೆ. ಇದರಿಂದ ಇನ್ನು ಮುಂದೆ ದೇಶದ ಒಳಗೆ ವಿಮಾನದಲ್ಲಿ ಪ್ರಯಾಣಿಸಲು ಪ್ರಯಾಣಿಕರಿಗೆ ಯಾವುದೇ ಐಡಿ, ಪಾಸ್‌ಪೋರ್ಟ್ ಅಥವಾ ಬೋರ್ಡಿಂಗ್ ಕಾರ್ಡ್‌ಗಳ ಅಗತ್ಯತೆ ಇರುವುದಿಲ್ಲ.

ಈ ಸೌಲಭ್ಯ ಸದ್ಯ 6 ವಿಮಾನ ನಿಲ್ದಾಣಗಳಲ್ಲಿ ಅಸ್ತಿತ್ವಕ್ಕೆ ಬರಲಿದೆ. ಮುಂದಿನ ಫೆಬ್ರವರಿ ಅಂತ್ಯದ ಒಳಗೆ ಹೈದರಾಬಾದ್ ಹಾಗೂ ಬೆಂಗಳೂರು ವಿಮಾನ ನಿಲ್ದಾಣಗಳಲ್ಲಿ ಹಾಗೂ ಎಪ್ರಿಲ್ ಅಂತ್ಯದ ಒಳಗೆ ವಾರಣಾಸಿ, ಕೋಲ್ಕತ್ತಾ, ಪುಣೆ ಹಾಗೂ ವಿಜಯವಾಡ ವಿಮಾನ ನಿಲ್ದಾಣಗಳಲ್ಲಿ ಈ ಸೌಲಭ್ಯ ಆರಂಭವಾಗಲಿದೆ. ಈ 6 ವಿಮಾನ ನಿಲ್ದಾಣಗಳ ಬಳಿಕ ಭಾರತದ ಅತಿ ದೊಡ್ಡ ವಿಮಾನ ನಿಲ್ದಾಣಗಳಾದ ಮುಂಬೈ, ದಿಲ್ಲಿ ಹಾಗೂ ಇತರ ಎಎಐ ವಿಮಾನ ನಿಲ್ದಾಣಗಳಲ್ಲಿ ಈ ಸೌಲಭ್ಯ ಅನುಷ್ಠಾನಗೊಳ್ಳಲಿದೆ. ಪ್ರಸ್ತುತ ಇರುವ ವ್ಯವಸ್ಥೆಯೊಂದಿಗೆ ಈ ವ್ಯವಸ್ಥೆಯೂ ಇರುತ್ತದೆ. ಇದು ಕಡ್ಡಾಯ ಅಲ್ಲ. ಅಲ್ಲದೆ ಇದು ದೇಶದ ಒಳಗೆ ವಿಮಾನದಲ್ಲಿ ಪ್ರಯಾಣಿಸುವವರಿಗೆ ಮಾತ್ರ ಅನ್ವಯವಾಗುತ್ತದೆ. ಡಿಜಿಟಲ್ ಯಾತ್ರೆ ಆಯ್ಕೆ ಮಾಡಲು ಬಯಸುವ ಆಕೆ ಅಥವಾ ಆತ ವೈಮಾನಿಕ ಸಚಿವಾಲಯದ ಪೋರ್ಟಲ್‌ಗೆ ವಿವರ ನೀಡಿ ವಿಶಿಷ್ಟ ‘ಡಿಜಿ ಯಾತ್ರಾ’ ಐಡಿ ಪಡೆದುಕೊಳ್ಳುವ ಅಗತ್ಯತೆ ಇದೆ.

ಅನಂತರ ಈ ವಿಶಿಷ್ಟ ಗುರುತಿನ ಸಂಖ್ಯೆಯನ್ನು ವಿಮಾನ ಟಿಕೆಟ್ ಮಂಗಡ ಕಾಯ್ದಿರಿಸುವಾಗ ನೀಡಬೇಕು. ಡಿಜಿಟಲ್ ನಂಬರ್ ಜೋಡಿಸಿದ ವಿಮಾನ ಟಿಕೆಟ್ ಪಡೆಯಲು ಮೊದಲ ಬಾರಿಗೆ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದಾಗ ಪ್ರಯಾಣಿಕರು ಐಡಿ ಕಾರ್ಡ್ ಅನ್ನು ಪರಿಶೀಲನೆಗೆ ನೀಡಬೇಕಾಗುತ್ತದೆ. ಆಧಾರ್ ನಂಬರ್ ನೀಡಲು ಬಯಸುವವರು ತಮ್ಮ ಪರಿಶೀಲನೆಯನ್ನು ಆನ್‌ಲೈನ್ ಮೂಲಕ ನಡೆಸಬಹುದು. ಪರಿಶೀಲನೆ ನಡೆದ ಬಳಿಕ ಸುರಕ್ಷಿತ ಕೇಂದ್ರ ಡಾಟಾ ಬೇಸ್‌ನಲ್ಲಿರುವ ‘ಡಿಜಿ ಯಾತ್ರೆ’ಯ ಪ್ರೊಫೈಲ್‌ಗೆ ಪ್ರಯಾಣಿಕರ ಭಾವಚಿತ್ರ ಅಳವಡಿಸಲಾಗುತ್ತದೆ. ಈ ಪ್ರಕ್ರಿಯೆ ಬಳಿಕ ದೇಶದ ಒಳಗೆ ವಿಮಾನ ಪ್ರಯಾಣಕ್ಕೆ ಮಖವೇ ಗುರುತಾಗಿ ಬದಲಾಗುತ್ತದೆ.

ಮುಖದ ಗುರುತಿನ ದಾಖಲೆಗಳನ್ನು ಗೌಪ್ಯವಾಗಿ ಇರಿಸಿಸಲಾಗುತ್ತದೆ. ಇದಕ್ಕಾಗಿ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಸ್ಥೆಯ ತಾಂತ್ರಿಕ ಸೇವಾ ಪೂರೈಕೆದಾರರ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ.

ವಿಮಾನ ನಿಲ್ದಾಣಗಳಲ್ಲಿ, ವಿಮಾನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರನ್ನು ಮುಖದ ಮೂಲಕ ಗುರುತಿಸಲು ಈ ಬಯೋಮೆಟ್ರಿಕ್ ತಂತ್ರಜ್ಞಾನವು ನೆರವಾಗಲಿದೆ. ಇದರಿಂದ ಬೋರ್ಡಿಂಗ್ ಪಾಸ್, ಪಾಸ್‌ಪೋರ್ಟ್ ಅಥವಾ ಇನ್ನಿತರ ಗುರುತು ಪತ್ರಗಳನ್ನು ಅಧಿಕಾರಿಗಳಿಗೆ ತೋರಿಸುವ ಅಗತ್ಯತೆ ಇರುವುದಿಲ್ಲ ಎಂದು ಬೆಂಗಳೂರು ಅಂತಾಷ್ಟ್ರೀಯ ವಿಮಾನ ನಿಲ್ದಾಣ ಸಂಸ್ಥೆ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X