Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಂಐಟಿಯಲ್ಲಿ ಕೆಸಿಟಿಯು ಬ್ಯುಸಿನೆಸ್...

ಎಂಐಟಿಯಲ್ಲಿ ಕೆಸಿಟಿಯು ಬ್ಯುಸಿನೆಸ್ ಇನ್‌ಕ್ಯೂಬೆಟರ್ ಕೇಂದ್ರ

ವಾರ್ತಾಭಾರತಿವಾರ್ತಾಭಾರತಿ4 Oct 2018 10:06 PM IST
share

ಉಡುಪಿ, ಅ.4: ಕುಂದಾಪುರ ತಾಲೂಕಿನ ಬಸ್ರೂರು ಸಮೀಪವಿರುವ ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯ (ಎಂಐಟಿ)ದಲ್ಲಿ ಭಾರತ ಸರಕಾರ ಮತ್ತು ಕರ್ನಾಟಕ ಸರಕಾರ ಹಾಗೂ ಕೈಗಾರಿಕ ಸಂಘಗಳ ಸಹಯೋಗದಲ್ಲಿ ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ತಿನ (ಕೆಸಿಟಿಯು) ಆರ್ಥಿಕ ನೆರವಿನಿಂದ ಬ್ಯುಸಿನೆಸ್ ಇನ್‌ಕ್ಯೂಬೆಟರ್ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದೆ ಎಂದು ಕಾಲೇಜಿನ ಸಂಶೋಧನ ಕೇಂದ್ರದ ನಿದೇರ್ಶಕ ಡಾ.ಅಬ್ದುಲ್ ಕರೀಮ್ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬ್ಯುಸಿನೆಸ್ ಇನ್‌ಕ್ಯೂಬೆಟರ್’ ಕೇಂದ್ರದ ಪ್ರಮುಖ ಉದ್ದೇಶ ಹೊಸ ಉದ್ಯಮವನ್ನು ಪ್ರಾರಂಭಿಸಲು ಮುಂದೆ ಬರುವವರಿಗೆ ಬೇಕಾದ ಮಾಹಿತಿ, ಮಾರ್ಗದರ್ಶನ, ಸಹಾಯ ಒದಗಿಸುವುದಾಗಿದೆ ಎಂದರು.

ಹೊಸ ಉದ್ದಿಮೆ, ಕಂಪೆನಿಗಳ ಪ್ರಾರಂಭ, ಬೆಳವಣಿಗೆ ಮತ್ತು ವ್ಯಾಪಾರಾಭಿ ವೃದ್ಧಿಗೆ ಸಹಾಯಕವಾಗಿರುವ ಸೇವೆಗಳನ್ನು ಒದಗಿಸುವುದಾಗಿದೆ. ಕಛೇರಿಗೆ ಸ್ಥಳ ಹಂಚಿಕೆ, ನಿರ್ವಹಣಾ ತರಬೇತಿ ಹಾಗೂ ಆರಂಭಿಕ ಹಂತದಲ್ಲಿ ತಾಂತ್ರಿಕ ಮಾಹಿತಿ, ಮಾರ್ಗದರ್ಶನವನ್ನು ನೀಡಲಾಗುತ್ತದೆ ಎಂದರು.

ತಂತ್ರಜ್ಞಾನ ಆಧಾರಿತ ಉದ್ಯಮಗಳಿಗೆ ಬಹುಮುಖ್ಯವಾದ ವೃತ್ತಿಪರ ಸೇವೆಗಳನ್ನು ಒದಗಿಸಲಾಗುತ್ತದೆ. ಇನ್‌ಕ್ಯೂಬೆಟರ್ ಕೇಂದ್ರದಲ್ಲಿ 5000 ಚದರ ಅಡಿ ಜಾಗದಲ್ಲಿ 20 ಕ್ಯೂಬಿಕಲ್‌ಗಳು, ಸುಸಜ್ಜಿತ ಪ್ಯಾಬ್ ಲ್ಯಾಬ್ ಮತ್ತು ಟೆಸ್ಟಿಂಗ್ ಲ್ಯಾಬ್‌ಗಳು ಇರುತ್ತವೆ. ಪ್ರತಿ ವರ್ಷ ಕನಿಷ್ಟ 20 ಉದ್ದಿಮೆಗಳ ಆರಂಭದ ಗುರಿಯನ್ನು ಹೊಂದಲಾಗಿದೆ.

ಹೊಸದಾಗಿ ಉದ್ಯಮ ಆರಂಭಿಸಲು ಆಸಕ್ತರಾಗಿರುವವರು ಹಾಗೂ ಈಗಾಗಲೇ ಉದ್ಯಮ ನಡೆಸುತಿದ್ದು, ಅದನ್ನು ಅಪ್‌ಗ್ರೇಡ್ ಮಾಡಲಿಚ್ಚಿ ಸುವವರು ಸಹ ಈ ಕೇಂದ್ರದ ಸಹಾಯವನ್ನು ಪಡೆದುಕೊಳ್ಳಬಹುದು. ಅರ್ಹ ಮತ್ತು ಅನುಭವಿ ತಜ್ಞರು ಕೇಂದ್ರದಲ್ಲಿ ತರಬೇತಿ ನೀಡಲಿದ್ದಾರೆ. ಈ ಇನ್‌ಕ್ಯೂಬೆಟರ್ ಕೇಂದ್ರ ಇನ್ನೆರಡು ತಿಂಗಳಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಡಾ. ಅಬ್ದುಲ್ ಕರೀಮ್ ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಕಾಟಯ್ಯ ಜಿ.ಎಸ್, ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗ ಮುಖ್ಯಸ್ಥ ಪ್ರೊ.ಮೆಲ್ವಿನ್ ಡಿಸೋಜ, ಮತ್ತು ಎಚ್.ಆರ್. ಮ್ಯಾನೇಜರ್ ಪ್ರಶಾಂತ ಎನ್.ಕೆ. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X