Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಕಳ ಮೂಲದ ನಿರ್ದೇಶಕರಿಂದ ಹಾಲಿವುಡ್...

ಕಾರ್ಕಳ ಮೂಲದ ನಿರ್ದೇಶಕರಿಂದ ಹಾಲಿವುಡ್ ಸಿನೆಮಾ

ವಾರ್ತಾಭಾರತಿವಾರ್ತಾಭಾರತಿ4 Oct 2018 10:14 PM IST
share

ಮಂಗಳೂರು, ಅ.4: ಹಾಲಿವುಡ್‌ನಲ್ಲಿ  ‘ಹಿ ಈಸ್ ಬ್ಯಾಕ್’ ಹೆಸರಿನ ಈ ಸಿನೆಮಾ 100 ಕೋ.ರೂ.ಬಜೆಟ್‌ನಲ್ಲಿ ನಿರ್ಮಾಣಗೊಳ್ಳಲಿದೆ. ಸಿನೆಮಾಕ್ಕೆ ಇತ್ತೀಚೆಗೆ ಮುಹೂರ್ತ ನಡೆದಿದೆ. 2019ರ ಫೆಬ್ರವರಿಯಲ್ಲಿ ಚಿತ್ರೀಕರಣ ಆರಂಭಗೊಳ್ಳಲಿದ್ದು, 2019ರ ಡಿಸೆಂಬರ್‌ನಲ್ಲಿ ವಿಶ್ವಾದ್ಯಂತ ‘ಹಿ ಈಸ್ ಬ್ಯಾಕ್’ ಬಿಡುಗಡೆಗೊಳ್ಳಲಿದೆ ಎಂದು ಮಾರ್ಷಲ್ ಆರ್ಟ್ ಖ್ಯಾತಿಯ ಕಾರ್ಕಳ ಮೂಲದ ಸಿನೆಮಾ ನಿರ್ದೇಶಕ ಚೀತಾ ಯಜ್ಞೇಶ್ ಶೆಟ್ಟಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹಾಲಿವುಡ್‌ನ ಪ್ರಖ್ಯಾತ ನಟ ಬ್ರೂಸ್ಲಿ ಅವರ ಪ್ರೇರಣೆಯಿಂದ ಬದಲಾಗುವ ಯುವಕನೊಬ್ಬನ ಕಥೆಯಾಧಾರಿತವಾಗಿ ‘ಹಿ ಈಸ್ ಬ್ಯಾಕ್’ ಸಿನೆಮಾ ರೂಪುಗೊಳ್ಳಲಿದೆ. ಥಾಯ್‌ಲ್ಯಾಂಡ್, ರಷ್ಯಾ, ಯುಎಸ್‌ಎಯಲ್ಲಿ ಈ ಸಿನೆಮಾ ಶೂಟಿಂಗ್ ನಡೆಯಲಿದೆ. ಅಪಘಾನಿಸ್ತಾನದ ಅಬ್ಬಾಸ್ ಆಲಿಝಾದಾ ಅವರು ಬ್ರೂಸ್ಲಿ ರೀತಿಯಲ್ಲಿ ಅಭಿನಯಿಸಲಿದ್ದು, ರಷ್ಯಾದ ಪ್ರಖ್ಯಾತ ಮನೆತನದವರ ಪುತ್ರಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಲಿದ್ದಾರೆ. ಬಾಹುಬಲಿ ಸಿನೆಮಾದಲ್ಲಿ ತಾಂತ್ರಿಕ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ಕೆಲವರನ್ನು ಬಿಟ್ಟು ಉಳಿದಂತೆ ಚಿತ್ರತಂಡದಲ್ಲಿ ಪೂರ್ಣ ಹಾಲಿವುಡ್‌ನ ಟೀಮ್ ಇರಲಿದೆ ಎಂದರು.

ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ದುಬೈನ ಬುರ್ಜ್ ಖಲೀಫಾದಲ್ಲಿ ನಡೆದಿದ್ದು, ಡಾ.ಬಿ.ಆರ್.ಶೆಟ್ಟಿ, ರಾಕ್‌ಲೈನ್ ವೆಂಕಟೇಶ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.

ಬ್ರೂಸ್ಲಿ ಕಥಾನಕವನ್ನು ವಿಭಿನ್ನ ನೆಲೆಯಲ್ಲಿ ತೆರೆಯ ಮೇಲೆ ತರಲು ಪ್ರಯತ್ನಿಸಲಾಗುವುದು. ಬ್ರೂಸ್ಲಿ ಅವರಿಂದ ಪ್ರೇರಣೆ ಪಡೆದ ಅಭಿಮಾನಿಯೊಬ್ಬ ಬ್ರೂಸ್ಲಿ ರೀತಿಯಲ್ಲಿ ಬದಲಾಗುವ ಕಥೆಯನ್ನು ಸಿನೆಮಾವಾಗಿ ಮಾಡಲಾಗುತ್ತಿದೆ. ಬಾಲಿವುಡ್‌ನಲ್ಲಿ ಈಗಾಗಲೇ ಹಲವು ಸಿನೆಮಾ ಮಾಡಿರುವ ತನಗೆ ಹಾಲಿವುಡ್ ಸಿನೆಮಾ ಮಾಡಬೇಕು ಎಂಬ ತುಡಿತವಿದ್ದ ಹಿನ್ನೆಲೆಯಲ್ಲಿ ಹೊಸ ಅವಕಾಶ ದೊರೆತಿದೆ. ಹಾಲಿವುಡ್‌ನಲ್ಲಿ ಈಗಾಗಲೇ ಸಿನೆಮಾವು ಹೊಸ ನಿರೀಕ್ಷೆ ಮೂಡಿಸಿದ್ದು, ಚೀನಾ ಸೇರಿದಂತೆ ಜಗತ್ತಿನಾದ್ಯಂತ ರಿಲೀಸ್ ಆಗಲಿದೆ ಎಂದು ಚೀತಾ ಯಜ್ಞೇಶ್ ಶೆಟ್ಟಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X