ಮಂಡ್ಯ: ವಿದ್ಯುತ್ ತಂತಿ ತಗುಲಿ ವೃದ್ಧ ಸಾವು

ಮಂಡ್ಯ, ಅ.4: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವೃದ್ದರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲೂಕು ಬಿದರಹಳ್ಳಿ ಬಳಿ ಗುರುವಾರ ನಡೆದಿದೆ.
ಗ್ರಾಮದ ಮಾದೇಗೌಡ(75) ಸಾವನ್ನಪ್ಪಿದವರು. ಇವರು ಗ್ರಾಮದ ಪಂಚಾಯತ್ ಆವರಣದಲ್ಲಿ ತೆರಳುತಿದ್ದಾಗ ಸಮೀಪದಲ್ಲಿದ್ದ ತುಂಡಾಗಿ ಬಿದ್ದಿದ್ದ ಟ್ರಾನ್ಸ್‍ಫಾರ್ಮರ್ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಸೆಸ್ಕ್ ಇಲಾಖೆಯ ಅಧಿಕಾರಿಗಳು ಘಟನೆಯ ಬಗ್ಗೆ ಮಾಹಿತಿ ಪಡೆದರು. ಸೆಸ್ಕ್ ಇಲಾಖೆಯ ಇಇ ರವಿಶಂಕರ್ ಅವರು ಮೃತ ವ್ಯಕ್ತಿ ಮಾದೇಗೌಡ ಕುಟುಂಬಕ್ಕೆ 3 ಲಕ್ಷ ರೂ. ಪರಿಹಾರದ ಚೆಕ್ ನೀಡಿದರು. ಉಳಿದ 2 ಲಕ್ಷ ರೂ. ನೀಡಲಾಗುವುದು ಎಂದು ಭರವಸೆ ನೀಡಿದ ನಂತರ ಗ್ರಾಮಸ್ಥರು ಶವವನ್ನು ಪಂಚನಾಮೆಗೆ ಆಸ್ಪತ್ರೆಗೆ ಸಾಗಿಸಲು ಅನುವು ಮಾಡಿಕೊಟ್ಟರು.
ಕೆ.ಎಂ.ದೊಡ್ಡಿ ಠಾಣೆಯ ಸಹಾಯಕ ಸಬ್‍ಇನ್ಸ್‍ಪೆಕ್ಟರ್ ಗೋವಿಂದಪ್ಪ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





