Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಳ್ಳಿಗಳ ನೈರ್ಮಲ್ಯ ಕಾಪಾಡಲು ಸಂಘಟಿತ...

ಹಳ್ಳಿಗಳ ನೈರ್ಮಲ್ಯ ಕಾಪಾಡಲು ಸಂಘಟಿತ ಪ್ರಯತ್ನ ಅಗತ್ಯ: ಸಚಿವ ಕೃಷ್ಣ ಭೈರೇಗೌಡ

ವಾರ್ತಾಭಾರತಿವಾರ್ತಾಭಾರತಿ5 Oct 2018 8:30 PM IST
share
ಹಳ್ಳಿಗಳ ನೈರ್ಮಲ್ಯ ಕಾಪಾಡಲು ಸಂಘಟಿತ ಪ್ರಯತ್ನ ಅಗತ್ಯ: ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು, ಅ. 5: ಗ್ರಾಮೀಣ ಭಾಗಗಳಲ್ಲಿ ಸ್ವಚ್ಛತೆಯನ್ನು ಸುಸ್ಥಿರವಾಗಿ ಕಾಪಾಡಲು ಸಂಘಟಿತ ಪ್ರಯತ್ನದಿಂದ ಮಾತ್ರ ಸಾಧ್ಯ. ಇದಕ್ಕಾಗಿ ಹಳ್ಳಿಗಳಲ್ಲಿ ಮೊಬೈಲ್ ಬಳಕೆದಾರರ ಒಂದು ವ್ಯವಸ್ಥಿತ ನೆಟ್‌ವರ್ಕ್ ರೂಪಿಸಬೇಕಾಗಿದೆ ಎಂದು ಗ್ರಾಮೀಣಾಭಿವೃದ್ದಿಮ ಸಚಿವ ಕೃಷ್ಣ ಭೈರೇಗೌಡ ಸಲಹೆ ಮಾಡಿದ್ದಾರೆ.

ಶುಕ್ರವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಯೂನಿಸೆಫ್ ಸಹಯೋಗದೊಂದಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಆಯೋಜಿಸಲಾಗಿದ್ದ ‘ಬಯಲು ಬರ್ಹಿದೆಸೆ ಮುಕ್ತ- ಸುಸ್ಥಿರತೆ’ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ಮುಂದಿನ ಒಂದು ತಿಂಗಳಲ್ಲಿ ಸಂಪೂರ್ಣ ಬಯಲು ಬಹಿರ್ದೆಸೆ ಮುಕ್ತ ಗುರಿಯನ್ನು ಸಾಧಿಸಲಿದೆ ಎಂದರು.

ನಮ್ಮ ಗುರಿಗೆ ಅನುಗುಣವಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ, ಅದನ್ನು ಬಳಸುವುದು ಬಹಳ ಮುಖ್ಯ. ಜನತೆ ಶೌಚಾಲಯಗಳ ಬಳಕೆಯನ್ನು ಆರಂಭಿಸಿದಾಗ ಮಾತ್ರ ಯೋಜನೆ ಸಾರ್ಥಕ ಆಗುತ್ತದೆ. ಆ ದಿಸೆಯಲ್ಲಿ ಜನರ ಆಲೋಚನೆ ಮತ್ತು ಜೀವನ ಶೈಲಿ ಬದಲಾವಣೆ ಆಗಬೇಕಾಗಿದೆ. ಈ ಬದಲಾವಣೆ ತರಲು ಒಂದು ಜಾಗೃತಿ ಆಂದೋಲನವನ್ನು ಆಯೋಜಿಸುವುದು ಬಹಳ ಮುಖ್ಯ ಎಂದರು.

ಇಂದು ಗ್ರಾಮೀಣ ಪ್ರದೇಶಗಳಲ್ಲಿ ಮೊಬೈಲ್ ಬಳಕೆದಾರರ ಸಂಖ್ಯೆ ಗಮನಾರ್ಹ ಪ್ರಮಾಣದಲ್ಲಿ ಹೆಚ್ಚಾಗಿದೆ. ರಾಜ್ಯದ ಅಷ್ಟೂ ಗ್ರಾಮ ಪಂಚಾಯಿತ್ ಸದಸ್ಯರು ಹಾಗೂ ಅವರ ಸಂಪರ್ಕದಲ್ಲಿರುವ ಮೊಬೈಲ್ ಬಳಕೆದಾರರು ಈ ಸ್ವಚ್ಛತೆಯ ಅಭಿಯಾನದಲ್ಲಿ ಮೊಬೈಲ್ ಮಾಹಿತಿ ಮೂಲಕ ಪಾಲುಗೊಂಡರೆ ದೊಡ್ಡ ಪ್ರಮಾಣದಲ್ಲಿ ನಾವು ಜನರನ್ನು ತಲುಪಬಹುದಾಗಿದೆ. ಅದಕ್ಕೆ ವ್ಯವಸ್ಥಿತ ನೆಟ್‌ವರ್ಕ್ ರೂಪಿಸಬೇಕಾಗಿದೆ ಎಂದು ಅವರು ಹೇಳಿದರು.

ಸಮಾರಂಭದಲ್ಲಿ ಮಾತನಾಡಿದ ಯೂನಿಸೆಫ್ ಪ್ರತಿನಿಧಿ ಮಿಟಲ್ ರೂಸಾಡಿಯಾ, ಯೂನಿಸೆಫ್ ಕರ್ನಾಟಕ ಸರಕಾರದ ಬಯಲು ಬಹಿರ್ದೆಸೆ ಮುಕ್ತ ಕಾರ್ಯಕ್ರಮಕ್ಕೆ ಎಲ್ಲ ರೀತಿಯ ನೆರವನ್ನು ನೀಡಲು ಸಿದ್ಧವಿದೆ. ಶೌಚಾಲಯಗಳ ನಿರ್ಮಾಣದ ಜೊತೆಗೆ ಅವುಗಳ ನಿರ್ವಹಣೆಗೂ ಗಮನಹರಿಸಬೇಕು ಎಂದು ಸೂಚಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ದಿ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್. ಕೆ.ಅತೀಕ್, ಯೂನಿಸೆಫ್‌ನ ಪ್ರತಿನಿಧಿ ಸುಜೊಯ್ ಮುಜುಂದಾರ್, ಆಯುಕ್ತ ಡಾ.ಆರ್.ವಿಶಾಲ್ ಸೇರಿ ವಿವಿಧ ಜಿಲ್ಲೆಗಳ ಜಿ.ಪಂ. ಸಿಇಓಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X