Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೆಲ,ಜಲ, ಪರಿಸರ ಸಂರಕ್ಷಣೆ ಎಲ್ಲರ...

ನೆಲ,ಜಲ, ಪರಿಸರ ಸಂರಕ್ಷಣೆ ಎಲ್ಲರ ಹೊಣೆ-ಸಂಜೀವ ಮಠಂದೂರು

'ನಮ್ಮ ಕಸ ನಮ್ಮ ಜವಾಬ್ದಾರಿ ಕಾರ್ಯಾಗಾರ'

ವಾರ್ತಾಭಾರತಿವಾರ್ತಾಭಾರತಿ5 Oct 2018 8:56 PM IST
share
ನೆಲ,ಜಲ, ಪರಿಸರ ಸಂರಕ್ಷಣೆ ಎಲ್ಲರ ಹೊಣೆ-ಸಂಜೀವ ಮಠಂದೂರು

ಪುತ್ತೂರು, ಅ. 5: ನಮ್ಮ ದೇಶದ ರಕ್ಷಣೆಯ ಜತೆಗೆ ನೆಲ, ಜಲ ಹಾಗೂ ಪರಿಸರ ರಕ್ಷಣೆ ಪ್ರಜೆಗಳಾದ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ಪ್ರತಿಯೊಬ್ಬ ನಾಗರಿಕ ತನ್ನ ಸಾಮಾಜಿಕ ಹೊಣೆಗಾರಿಕೆಯನ್ನು ಅರಿತುಕೊಂಡು ಕಾರ್ಯ ನಿರ್ವಹಿಸಬೇಕಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. 

ಅವರು ಪುತ್ತೂರಿನ ಮಹಾಲಿಂಗೇಶ್ವರ ದೇವಳದ ಸಭಾಭವನದಲ್ಲಿ ಶುಕ್ರವಾರ ಪುತ್ತೂರು ರೋಟರಿ ಕ್ಲಬ್ ವತಿಯಿಂದ ನಡೆದ  'ನಮ್ಮ ಕಸ -ನಮ್ಮ ಜವಾಬ್ದಾರಿ' ಯೋಜನೆಯ ಕಾರ್ಯಗಾರ ಮತ್ತು ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಾಗತಿಕವಾಗಿ ಎಲ್ಲರೂ ಅಭಿವೃದ್ಧಿಯ ವೇಗವನ್ನು ಹೆಚ್ಚಿಸಿಕೊಂಡಿದ್ದಾರೆ. ನಮ್ಮಲ್ಲಿನ ಆಹಾರ ಮತ್ತು ಜೀವನ ಪದ್ಧತಿಯೂ ಬದಲಾಗಿದೆ. ಬದಲಾದ ಈ ಸಂದರ್ಭದಲ್ಲಿ ನಾವು ಸ್ವಚ್ಛತೆಗೆ ಪ್ರಧಾನ ಆಧ್ಯತೆ ನೀಡುವ ಅಗತ್ಯವಿದೆ ಎಂದು ತಿಳಿಸಿದರು.

ನಗರಸಭಾ ಪೌರಾಯುಕ್ತೆ ರೂಪಾ ಶೆಟ್ಟಿ ಮಾತನಾಡಿ ಪುತ್ತೂರು ನಗರಸಭೆ ಸ್ವಚ್ಛತಾ ಕಾರ್ಯಕ್ಕಾಗಿ ವಾರ್ಷಿಕ ರೂ. 2 ಕೋಟಿ ವ್ಯಯ ಮಾಡುತ್ತಿದೆ. 50ಸಾವಿರ ಜನಸಂಖ್ಯೆ ದಾಟಿರುವ ಪುತ್ತೂರು ನಗರದಲ್ಲಿ ಸ್ವಚ್ಛತೆ ಮತ್ತು ಪರಿಸರ ನೈರ್ಮಲ್ಯ ಕಾಪಾಡುವುದು ಇಲ್ಲಿನ ಎಲ್ಲಾ ನಾಗರಿಕರ ಸಾಮೂಹಿಕ ಜವಾಬ್ದಾರಿಯಾಗಿದ್ದು, ನಗರಸಭೆಯ ಈ ಪ್ರಯತ್ನಕ್ಕೆ ನಾಗರಿಕರ ಸಹಕಾರ ಅಗತ್ಯವಿದೆ ಎಂದರು.  

ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎನ್. ಸುಧಾಕರ ಶೆಟ್ಟಿ ಅವರು ಮಾತನಾಡಿ ಶುಚಿತ್ವ ಮಾನವ ಧರ್ಮವಾಗಿದೆ. ಸ್ವಚ್ಛತೆ ಮತ್ತು ಪರಿಸರ ನೈರ್ಮಲ್ಯ ನಮ್ಮ ಮನೆಯಿಂದಲೇ ಆರಂಭವಾಗಬೇಕು. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಕಂಡ ರಾಮರಾಜ್ಯದ ಕನಸು ನನಸಾಗುವ ಕಾಲಘಟ್ಟದಲ್ಲಿ ಈ ದೇಶ ಇದೆ. ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ ಕಲ್ಪನೆಯನ್ನು ಸಾಕಾರಗೊಳಿಸಲು ಮುಂದಾಗಿದ್ದಾರೆ ಎಂದರು.

ಬೆಂಗಳೂರು 'ಸಾಹಸ್' ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿವ್ಯಾ ತಿವಾರಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಾಗಾರವನ್ನು ನಡೆಸಿಕೊಟ್ಟರು. ರೋಟರಿ ಕ್ಲಬ್ ಪದಾಧಿಕಾರಿಗಳಾದ ಎ.ಜೆ. ರೈ, ಆಸ್ಕರ್ ಆನಂದ್ ಉಪಸ್ಥಿತರಿದ್ದರು. ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ ಪಿ. ವಾಮನ ಪೈ ಸ್ವಾಗತಿಸಿದರು. ರೋಟರಿ ಕ್ಲಬ್ ಸಮುದಾಯ ಸೇವಾ ನಿರ್ದೇಶಕ ಜೈರಾಜ್ ಭಂಡಾರಿ ವಂದಿಸಿದರು. ನಿವೃತ್ತ ಶಿಕ್ಷಕ ಸುರೇಶ್ ಶೆಟ್ಟಿ ಮತ್ತು ಡಾ. ಗಾಯತ್ರಿ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X