Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆರೋಗ್ಯಕರ ವಾತಾವರಣ ಮೂಡಿಸಬೇಕಾದ...

ಆರೋಗ್ಯಕರ ವಾತಾವರಣ ಮೂಡಿಸಬೇಕಾದ ಜವಾಬ್ದಾರಿ ಯುವಜನತೆಯದ್ದು: ಎನ್.ಎ.ಹ್ಯಾರಿಸ್

ದೇರಳಕಟ್ಟೆ: ಮಂಗಳೂರು ಫುಟ್ಬಾಲ್ ಕ್ಲಬ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ5 Oct 2018 9:10 PM IST
share
ಆರೋಗ್ಯಕರ ವಾತಾವರಣ ಮೂಡಿಸಬೇಕಾದ ಜವಾಬ್ದಾರಿ ಯುವಜನತೆಯದ್ದು: ಎನ್.ಎ.ಹ್ಯಾರಿಸ್

ಉಳ್ಳಾಲ, ಅ. 5: ಯುವ ಜನತೆ ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಅತಿ ಮುಖ್ಯ. ಈ ದೇಶಕ್ಕೆ ಉತ್ತಮ ಆರೋಗ್ಯಕರ ವಾತಾವರಣ ಮೂಡಿಸಬೇಕಾದ ಜವಾಬ್ದಾರಿ ಯುವಜನತೆಯ ಮುಂದಿದೆ. ನಾವು ಇನ್ನೊಬ್ಬರ ಆರೋಗ್ಯವನ್ನು ಬಯಸಿದಾಗ ನಮ್ಮ ಆರೋಗ್ಯ ವೃದ್ಧಿಸುತ್ತದೆ. ಹೆಚ್ಚಿನ ಪರಿಕರಗಳ ಅವಶ್ಯಕತೆಗಳು ಇಲ್ಲದ ಕೇವಲ ಮೈದಾನ ಹಾಗೂ ಒಂದು ಚೆಂಡಿನ ಆಟವಾಗಿರುವ ಫುಟ್ಬಾಲ್ ಆಟದಲ್ಲಿ ಆಟಗಾರರಿಗೆ ಮಂಗಳೂರು ಫುಟ್ಬಾಲ್ ಕ್ಲಬ್ ಒಂದು ಉತ್ತಮ ವೇದಿಕೆಯಾಗಲಿದೆ ಎಂದು ಕರ್ನಾಟಕ ರಾಜ್ಯ ಫುಟ್ಬಾಲ್ ಎಸೋಸಿಯೇಷನ್ ಅಧ್ಯಕ್ಷ, ಶಾಂತಿನಗರ ಶಾಸಕ ಎನ್. ಎ. ಹ್ಯಾರಿಸ್ ಹೇಳಿದರು.

ದೇರಳಕಟ್ಟೆ ಯೆನೆಪೊಯ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಂಗಳೂರು ಫುಟ್ಬಾಲ್ ಕ್ಲಬ್ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. 

ಫುಟ್ಬಾಲ್ ಆಟಗಾರರಿಗೆ ಅವಕಾಶ ಸಿಗದಿದ್ದರೆ ಅವರಿಗೆ ತಮ್ಮ ಪ್ರತಿಭೆಯನ್ನು ತೋರಿಸಲು ಅಸಾಧ್ಯ. ನೂತನ ಫುಟ್ಬಾಲ್ ಕ್ಲಬ್‍ಗಳು ಆರಂಭವಾಗುವು ದರಿಂದ ಆಟಗಾರರು ಜೊತೆಗೆ ಫುಟ್ಬಾಲ್ ಮತ್ತಷ್ಟು ವಿಜೃಂಭಿಸಲಿದೆ.  ಕೆಲವೇ ಭಾಗಗಳಿಗೆ ಸೀಮಿತವಾಗಿದ್ದ ಫುಟ್ಬಾಲ್ ಈಗ ಕ್ರಿಕೆಟ್‍ನಂತೆ ಮಿಂಚುತ್ತಿದೆ. ಯೆನೆಪೊಯ ವಿವಿ ಯುವ ಆಟಗಾರರಿಗೆ ಅವಕಾಶ ಕೊಡುತ್ತಾ ಬಂದಿದ್ದು ಆಟಗಾರರು ಯಾವುದಾದರೂ ಕ್ಲಬ್‍ಗೆ ಸೇರಬೇಕು. ಮುಖ್ಯವಾಗಿ ಫುಟ್ಬಾಲ್‍ನಲ್ಲಿ ಒಂದೂವರೆ ಗಂಟೆಯ ಅವಧಿಯಲ್ಲಿ ಫಲಿತಾಂಶ ತಿಳಿಯಲು ಸಾಧ್ಯ. ಆದರೆ ಟೆಸ್ಟ್ ಕ್ರಿಕೆಟ್‍ನಲ್ಲಿ ಐದು ದಿನಗಳು ಬೇಕು. ಆ ನೆಲೆಯಲ್ಲಿ ಸಂಪೂರ್ಣ ವ್ಯಾಯಾಮ ಹಾಗೂ ಉತ್ತಮ ಆರೋಗ್ಯಕ್ಕಾಗಿ ಫುಟ್ಬಾಲ್ ಸಹಕಾರಿ ಎಂದರು.

ಯೆನೆಪೊಯ ಗ್ರೂಪ್ ಹಣಕಾಸು ನಿರ್ದೇಶಕ, ಫುಟ್ಬಾಲ್ ಕ್ಲಬ್ ಮಂಗಳೂರು ಅಧ್ಯಕ್ಷ ಫಹದ್ ಯೆನೆಪೊಯ ಮಾತನಾಡಿ  ಯೆನೆಪೊಯ ಸಂಸ್ಥೆ ಔದ್ಯಮಿಕವಾಗಿ ಮಾತ್ರವಲ್ಲದೆ ಸಮಾಜಮುಖಿಯಾಗಿ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಹೆಸರು ಸಂಪಾದಿಸಿದೆ. ಕ್ರೀಡೆಗೂ ಹೆಚ್ಚಿನ ಪ್ರೋತ್ಸಾಹ ಕೊಡುತ್ತಾ ಬಂದಿದೆ. ವಿವಿಯ ಫುಟ್ಬಾಲ್ ತಂಡ ಅತ್ಯುತ್ತಮವಾಗಿದೆ. ಮಂಗಳೂರು ಫುಟ್ಬಾಲ್ ಕ್ಲಬ್ ಆರಂಭದ ಬಳಿಕ ಫುಟ್ಬಾಲ್ ತರಬೇತಿ ಪ್ರಕ್ರಿಯೆ ಆರಂಭವಾಗಿದೆ. ಆ ಮೂಲಕ ಆಟಗಾರನೊಬ್ಬ ಸ್ಥಳೀಯ ಕ್ಲಬ್, ವಿಶ್ವವಿದ್ಯಾಲಯ, ಜಿಲ್ಲೆ, ರಾಜ್ಯ, ದೇಶ ಮಟ್ಟದಲ್ಲಿ ಮಿಂಚುವುದರ ಜೊತೆಗೆ 2030ರೊಳಗೆ ಫಿಫಾ ವಿಶ್ವಕಪ್ ಪಂದ್ಯದಲ್ಲಿ ಆಡುವ ಆಟಗಾರನೊಬ್ಬ ಯೆನೆಪೊಯ ವಿವಿಯ ವಿದ್ಯಾರ್ಥಿ ಆಗಿರಬೇಕು ಎಂಬ ಮಹದಾಸೆ ನಮ್ಮದಾಗಿದ್ದು ಅದಕ್ಕೆ ಬೇಕಾದ ಎಲ್ಲ ತರಬೇತಿ ಕೊಡಲಿದ್ದೇವೆ ಎಂದರು.

ಭಾರತೀಯ ಫುಟ್ಬಾಲ್ ತಂಡದ ಮಾಜಿ ಕಪ್ತಾನ ಐ.ಎಂ. ವಿಜಯನ್ ಮಾತನಾಡಿ ಯೆನೆಪೊಯ ವಿವಿಯ ಫುಟ್ಬಾಲ್ ತಂಡಕ್ಕೆ ಒಳ್ಳೆಯ ಹೆಸರು ಇದೆ. ಭವಿಷ್ಯವೂ ಇದೆ. ಫುಟ್ಬಾಲ್ ಆಟಕ್ಕೆ ಯೆನೆಪೊಯ ವಿವಿ ಆದ್ಯತೆ ನೀಡದ್ದು ಅತ್ಯುತ್ತಮ ಹುಲ್ಲುಹಾಸಿನಿಂದ  ಕೂಡಿದ ಕ್ರೀಡಾಂಗಣವಿದ್ದು ಆಟಗಾರರ ಪಾಲಿಗೆ ಸಿಕ್ಕಿದಂತಹ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.

ಯೆನೆಪೊಯ ವಿವಿ ಸಹ ಕುಲಸಚಿವ ಪ್ರೊ. ಸಿ. ವಿ. ರಘುವೀರ್ ಹಾಗೂ ಕುಲಸಚಿವ ಗಂಗಾಧರ್ ಸೋಮಯಾಜಿ ಉಪಸ್ಥಿತರಿದ್ದರು.  ಮಾಳವಿಕಾ ಆರ್.ಜೆ. ಸ್ವಾಗತಿಸಿದರು. ಫರ್ಹಾ ಮಹಮ್ಮದ್ ಕಾರ್ಯಕ್ರಮ ನಿರೂಪಿಸಿದರು. ರಕ್ಷಿತಾ ರಘುವರ್ಧನ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X