Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ಮಣ್: ಟೋಲ್‌ಗೇಟ್ ನಿರ್ಮಾಣದ ವಿರುದ್ಧ...

ಬೆಳ್ಮಣ್: ಟೋಲ್‌ಗೇಟ್ ನಿರ್ಮಾಣದ ವಿರುದ್ಧ ಇಂದು ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ6 Oct 2018 6:31 PM IST
share
ಬೆಳ್ಮಣ್: ಟೋಲ್‌ಗೇಟ್ ನಿರ್ಮಾಣದ ವಿರುದ್ಧ ಇಂದು ಬೃಹತ್ ಪ್ರತಿಭಟನೆ

ಉಡುಪಿ, ಅ.6: ರಾಜ್ಯ ಸರಕಾರ ನಾಲ್ಕು ವರ್ಷಗಳ ಹಿಂದೆ ನಿರ್ಮಿಸಿದ ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ಇದೀಗ ಬೆಳ್ಮಣ್ ಸಮೀಪ ಟೋಲ್ ಗೇಟ್ ನಿರ್ಮಿಸಿ ವಾಹನ ಚಾಲಕರಿಂದ ಸುಂಕ ವಸೂಲು ಮಾಡುವ ರಾಜ್ಯ ಸರಕಾರದ ನಿರ್ಧಾರವನ್ನು ಖಂಡಿಸಿ ನಾಳೆ ಬೆಳ್ಮಣ್‌ನಲ್ಲಿ ಸಾರ್ವಜನಿಕರಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಳ್ಮಣ್‌ನ ಟೋಲ್ ಗೇಟ್-ಸುಂಕ ವಸೂಲಾತಿ ಕೇಂದ್ರ ಹೋರಾಟ ಸಮಿತಿಯ ಅಧ್ಯಕ್ಷ ಎಸ್. ಸುಹಾಸ್ ಹೆಗ್ಡೆ ತಿಳಿಸಿದ್ದಾರೆ.

ಬೆಳ್ಮಣ್ ಆಸುಪಾಸಿನ 40ಕ್ಕೂ ಅಧಿಕ ಹಳ್ಳಿಗಳ 10,000ಕ್ಕೂ ಅಧಿಕ ಮಂದಿ ಪಕ್ಷಾತೀತವಾಗಿ, ಧರ್ಮಾತೀತವಾಗಿ ನಡೆಯುವ ಈ ಹೋರಾಟದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಶನಿವಾರ ಇಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಸುಹಾಸ್ ಹೆಗ್ಡೆ ತಿಳಿಸಿದರು.

ರಾಜ್ಯ ಸರಕಾರ ಖಾಸಗಿ ಗುತ್ತಿಗೆದಾರರಾದ ಆರ್‌ಎನ್‌ಎಸ್ ಸಂಸ್ಥೆಯ ಮೂಲಕ ಕಾರ್ಕಳ-ಪಡುಬಿದ್ರಿಯನ್ನು ಸಂಪರ್ಕಿಸುವ ಈ ರಾಜ್ಯ ಹೆದ್ದಾರಿಯನ್ನು ನಾಲ್ಕು ವರ್ಷಗಳ ಹಿಂದೆ ಅಗಲೀಕರಣಗೊಳಿಸಿದೆ. ಆದರೆ ಇದೀಗ ಏಕಾಏಕಿಯಾಗಿ ಮೈಸೂರಿನ ಮಿತ್ರ ಇನ್ಫೋ ಸೊಲ್ಯೂಷನ್ ಎಂಬ ಖಾಸಗಿ ಸಂಸ್ಥೆಗೆ ಬೆಳ್ಮಣ್ ಪರಿಸರದ ಸರಕಾರಿ ಪದವಿ ಪೂರ್ವ ಕಾಲೇಜು ಮುಂಭಾಗದಲ್ಲಿ ಸುಂಕ ವಸೂಲಾತಿ ಕೇಂದ್ರ (ಟೋಲ್‌ಗೇಟ್) ನಿರ್ಮಿಸಿ ಸುಂಕ ವಸೂಲು ಮಾಡಲು ಗುತ್ತಿಗೆಯನ್ನು ನೀಡಿದೆ ಎಂದವರು ವಿವರಿಸಿದರು.

30 ಕಿ.ಮೀ.ನಲ್ಲಿ 3 ಟೋಲ್:  ಈಗ ರಾಜ್ಯ ಹೆದ್ದಾರಿ ನಂ.1 ಎಂದು ಕರೆಯಲಾಗುವ ಕಾರ್ಕಳ-ಪಡುಬಿದ್ರಿ ಹೆದ್ದಾರಿ ಬೆಳ್ಮಣ್ ಮೂಲಕ ಹಾದುಹೋಗುತ್ತದೆ. ಆಸುಪಾಸಿನ ಸುಮಾರು 40ಕ್ಕೂ ಅಧಿಕ ಹಳ್ಳಿಗಳನ್ನು ಸಂಪರ್ಕಿಸುವ, ಬೆಸೆಯುವ ಮುಖ್ಯ ರಸ್ತೆ ಇದಾಗಿದೆ. ಹೀಗಾಗಿ ಇಲ್ಲಿ ಟೋಲ್ ಗೇಟ್ ನಿರ್ಮಾಣದಿಂದ ಜನಸಾಮಾನ್ಯರಿಗೆ ತೀವ್ರ ತೊಂದರೆಯಾಗಲಿದೆ. ಅಲ್ಲದೇ ಇದರಿಂದ ಮಂಗಳೂರಿನಿಂದ ಬರುವಾಗ ಕೇವಲ 30 ಕಿ.ಮೀ. ಅಂತರದಲ್ಲಿ ಮೂರು ಕಡೆಗಳಲ್ಲಿ (ಸುರತ್ಕಲ್, ಹೆಜಮಾಡಿ, ಬೆಳ್ಮಣ್) ನಾವು ದುಬಾರಿ ಟೋಲ್ ನೀಡಬೇಕಾಗುತ್ತದೆ ಎಂದು ಸುಹಾಸ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದರು.

ಸರಕಾರ ಸ್ಥಳೀಯರಿಗೆ ಯಾವುದೇ ಮಾಹಿತಿಯನ್ನು ನೀಡದೇ ಟೋಲ್‌ಗೇಟ್ ನಿರ್ಮಾಣಕ್ಕೆ ಮುಂದಾಗಿದೆ. ರಾಜ್ಯ ಹೆದ್ದಾರಿಯನ್ನು ರಾಜ್ಯ ಸರಕಾರ ಚತುಷ್ಪಥಗೊಳಿಸಿದರೂ ಎಲ್ಲೂ ಟೋಲ್ ಸಂಗ್ರಹಿಸುವ ಪದ್ಧತಿ ಇಲ್ಲ. ಆದರೆ ಬೆಳ್ಮಣ್‌ನಲ್ಲಿ ಮಾತ್ರ ಏಕಾಏಕಿಯಾಗಿ ಟೋಲ್ ಸಂಗ್ರಹಕ್ಕೆ ಗುತ್ತಿಗೆದಾರರನ್ನು ನೇಮಿಸಿದ್ದು, ಆ ಸಂಸ್ಥೆ ಬೆಳ್ಮಣ್‌ನಲ್ಲಿ ಸುಂಕ ವಸೂಲಾತಿ ಕೇಂದ್ರ ನಿರ್ಮಿಸಲು ಬೆಳ್ಮಣ್ ಗ್ರಾಪಂಗೆ ಪ್ರಸ್ತಾವನೆಯನ್ನು ಸಲ್ಲಿಸಿದೆ ಎಂದವರು ನುಡಿದರು.

ಸಂಸ್ಥೆ ಟೋಲ್‌ಗೇಟ್ ನಿರ್ಮಿಸಲು ಉದ್ದೇಶಿಸಿರುವ ಸ್ಥಳದಲ್ಲಿ ಸರಕಾರಿ ಪ. ಪೂ.ಕಾಲೇಜು, ಬ್ಯಾಂಕ್, ಗ್ರಾಪಂ ಇದ್ದು, ಸ್ಥಳೀಯ ರೋಟರಿ ಸಂಸ್ಥೆ ಸ್ಥಳೀಯರ ಸಹಭಾಗಿತ್ವದಲ್ಲಿ ಸಾರ್ವಜನಿಕರಿಗೆ ಶಾಶ್ವತ ಪಾರ್ಕಿಂಗ್ ವ್ಯವಸ್ಥೆಗಾಗಿ ಜಾಗವನ್ನು ಸಮತಟ್ಟುಗೊಳಿಸಿ, ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ. ಇದೀಗ ಇಲ್ಲೇ ಟೋಲ್‌ಗೇಟ್ ನಿರ್ಮಾಣಕ್ಕೆ ಮುಂದಾಗಿರುವುದು ಸ್ಥಳೀಯರಲ್ಲಿ ಆಕ್ರೋಶ ಮೂಡಿಸಿದೆ ಎಂದು ಹೆಗ್ಡೆ ಹೇಳಿದರು.

ಯಾವುದೇ ಕಾರಣಕ್ಕೂ ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ಟೋಲ್‌ಗೇಟ್ ಬೇಡವೇ ಬೇಡ ಎಂಬುದು ನಮ್ಮ ಖಚಿತ ನಿರ್ಧಾರ. ಇದಕ್ಕಾಗಿ ಬೆಳ್ಮಣ್ ಹಾಗೂ ಆಸುಪಾಸಿನ 40 ಹಳ್ಳಿಗಳ ಜನಸಾಮಾನ್ಯರು ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಹೋರಾಡಕ್ಕೆ ಸಜ್ಜಾಗಿದ್ದಾರೆ. ಈ ಹೋರಾಟಕ್ಕೆ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ಧರ್ಮಗುರುಗಳು, ಉದ್ಯಮಿಗಳು, ವರ್ತಕರು, ಎಲ್ಲಾ ಸಂಘಸಂಸ್ಥೆಗಳು, ಬಸ್, ರಿಕ್ಷಾ, ಟ್ಯಾಕ್ಸಿ ಚಾಲಕ-ಮಾಲಕರು, ರೈತರು ಹಾಗೂ ಮಹಿಳೆಯರು ಸೇರಿದಂತೆ ಜನಸಾಮಾನ್ಯರು ಸಂಪೂರ್ಣ ಬೆಂಬಲವನ್ನು ಸೂಚಿಸಿದ್ದಾರೆ.

ರವಿವಾರ ಬೆಳಗ್ಗೆ 9:30ರಿಂದ ಅಪರಾಹ್ನ 3 ಗಂಟೆಯವರೆಗೆ ನಡೆಯುವ ಪ್ರತಿಭಟನಾ ಹೋರಾಟದಲ್ಲಿ 10,000ಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆ ಇದೆ. ಶಾಂತಿಯುತವಾಗಿ ನಡೆಯುವ ಈ ಹೋರಾಟ ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ಸುಂಕ ವಸೂಲಾತಿ ಕೇಂದ್ರ ಸ್ಥಾಪನೆಯ ಪ್ರಸ್ತಾಪದಿಂದ ರಾಜ್ಯ ಸರಕಾರ ಹಿಂದೆ ಸರಿಯುವವರೆಗೂ ಮುಂದುವರಿಯಲಿದೆ ಎಂದು ಅವರು ಸಮಿತಿಯ ಪರವಾಗಿ ಎಚ್ಚರಿಕೆ ನೀಡಿದರು.

ರಾಜ್ಯ ಹೆದ್ದಾರಿಯಲ್ಲಿ ಒಟ್ಟು ಎಂಟು ಕಡೆಗಳಲ್ಲಿ ಸುಂಕ ಸಂಗ್ರಹಿಸುವ ಉದ್ದೇಶ ಸರಕಾರಕ್ಕಿದ್ದು, ಬೆಳ್ಮಣ್‌ನಲ್ಲಿ ಪ್ರಾಯೋಗಿಕವಾಗಿ ಇದನ್ನು ಅನುಷ್ಠಾನಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದ ಸಮಿತಿಯ ಸರ್ವಜ್ಞ ತಂತ್ರಿ, ಸುಂಕ ಸಂಗ್ರಹದ ವಿರುದ್ಧ ಬೆಳ್ಮಣ್ ಗ್ರಾಪಂ ಈಗಾಗಲೇ ನಿರ್ಣಯ ಕೈಗೊಂಡಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಸದಸ್ಯರಾದ ಶಶಿಧರ ಶೆಟ್ಟಿ ನಂದಳಿಕೆ, ಶರದ್ ಶೆಟ್ಟಿ ಕೆ., ಹರಿಪ್ರಸಾದ್ ನಂದಳಿಕೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X