Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೃತ ಮುಸ್ತಕೀಂ, ನೌಷಾದ್ ಕುಟುಂಬ...

ಮೃತ ಮುಸ್ತಕೀಂ, ನೌಷಾದ್ ಕುಟುಂಬ ಸದಸ್ಯರಿಗೆ ಗೃಹಬಂಧನ: ಪತ್ರಕರ್ತರು, ಹೋರಾಟಗಾರರ ಭೇಟಿಗೆ ನಿಷೇಧ

ಅಲಿಗಡ ಎನ್‌ಕೌಂಟರ್

ವಾರ್ತಾಭಾರತಿವಾರ್ತಾಭಾರತಿ6 Oct 2018 8:03 PM IST
share
ಮೃತ ಮುಸ್ತಕೀಂ, ನೌಷಾದ್ ಕುಟುಂಬ ಸದಸ್ಯರಿಗೆ ಗೃಹಬಂಧನ: ಪತ್ರಕರ್ತರು, ಹೋರಾಟಗಾರರ ಭೇಟಿಗೆ ನಿಷೇಧ

# ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ: ಆರೋಪ

# ಇಂದಿಗೂ ಮನೆಗೆ ಮರಳಿಲ್ಲ ಮುಸ್ತಕೀಂ ತಂದೆ

ಅಲಿಗಡ/ಹೊಸದಿಲ್ಲಿ.ಅ.6: ಸೆ.16ರಂದು ಪೊಲೀಸರು ವಶಕ್ಕೆ ತೆಗೆದುಕೊಂಡ ಬಳಿಕ ಸೆ.20ರಂದು ನಕಲಿ ಎಂದು ಆರೋಪಿಸಲಾಗಿರುವ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಮುಸ್ತಕೀಂ(22) ಮತ್ತು ನೌಷಾದ್(17) ಅವರ ಕುಟುಂಬ ಸದಸ್ಯರು ಗೃಹಬಂಧನಕ್ಕೊಳಗಾಗಿದ್ದಾರೆ. ದಿನವಿಡೀ ಅವರ ಒಂದು ಕೋಣೆಯ ಬಾಡಿಗೆ ಮನೆಗಳನ್ನು ಕಾಯುವ ಮಫ್ತಿಯಲ್ಲಿರುವ ಪೊಲೀಸರು ರಾತ್ರ್ರಿ ಅಲ್ಲಿಂದ ಹೊರಡುವ ಮುನ್ನ ಬೀಗ ಹಾಕುತ್ತಿದ್ದಾರೆ ಎಂದು ಪತ್ರಕರ್ತ ಹಸನ್ ಖಾಲಿದ್ ಅವರು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

 ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಲು ಪ್ರಯತ್ನಿಸುವ ಬಂಧುಗಳು ಮತ್ತು ನೆರೆಕರೆಯವರಿಗೂ ಅಲ್ಲಿರುವ ಪೊಲೀಸರು ಕಿರುಕುಳಗಳನ್ನು ನೀಡುತ್ತಿದ್ದಾರೆ ಮತ್ತು ಬೆದರಿಕೆಗಳನ್ನು ಒಡ್ಡುತ್ತಿದ್ದಾರೆ. ಮಾನವ ಹಕ್ಕು ಹೋರಾಟಗಾರರು ಅಥವಾ ಮಾಧ್ಯಮ ಪ್ರತಿನಿಧಿಗಳು ಈ ಕುಟುಂಬದ ಸದ್ಯರನ್ನು ಭೇಟಿಯಾಗಲು ಬಂದರೆ ಪೊಲೀಸರು ಅವರ ಗುರುತಿನ ಚೀಟಿಗಳನ್ನು ಕೇಳುತ್ತಾರೆ. ಇದೇ ವೇಳೆ ಇತರ ಪೊಲೀಸ್ ಸಿಬ್ಬಂದಿಗಳಿಂದ ಮಾಹಿತಿ ಪಡೆಯುವ ಬಜರಂಗ ದಳದ ಗೂಂಡಾಗಳು ಅಲ್ಲಿಗೆ ಬಂದು ಅವರ ಮೇಲೆ ಹಲ್ಲೆ ನಡೆಸುತ್ತಾರೆ ಎಂದು ಖಾಲಿದ್ ಆರೋಪಿಸಿದ್ದಾರೆ.

 ಕಳೆದ ವಾರ ಅತ್ರ್‌ಲಿ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಲು ಪ್ರಯತ್ನಿಸಿದ್ದ ಯುನೈಟೆಡ್ ಅಗೇನ್‌ಸ್ಟ್ ಹೇಟ್(ಯುಎಎಚ್) ತಂಡದ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದ ಬಜರಂಗಿಗಳು ಅವರಿಗೆ ಬೆದರಿಕೆಯನ್ನೂ ಒಡ್ಡಿದ್ದರು.

 ಐದೇ ನಿಮಿಷಗಳಲ್ಲಿ ಎಂತಹ ವಾತಾವರಣ ಅಲ್ಲಿ ಸೃಷ್ಟಿಯಾಗಿತ್ತೆಂದರೆ ನಾವು ಇನ್ನೂ ಕೆಲವು ನಿಮಿಷಗಳ ಕಾಲ ಅಲ್ಲಿದ್ದರೆ ಅವರು ನಮ್ಮನ್ನು ಕೊಲ್ಲುತ್ತಿದ್ದರು ಎಂದು ಯುಎಎಚ್‌ನ ನದೀಂ ಖಾನ್ ನೆನಪಿಸಿಕೊಂಡರು.

ಮುಸ್ತಕೀಂ ಮತ್ತು ನೌಷಾದ್ ಜೊತೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದ ನಫೀಸ್ ಎಂಬಾತ ಕಳೆದ 21 ದಿನಗಳಿಂದಲೂ ಅತ್ರ್‌ಲಿ ಪೊಲೀಸ್ ಠಾಣೆಯ ಲಾಕಪ್‌ನಲ್ಲಿ ಕೊಳೆಯುತ್ತಿದ್ದಾನೆ.

ಈ ಮೂವರನ್ನೂ ವಶಕ್ಕೆ ತೆಗೆದುಕೊಂಡ ದಿನವೇ ನಾಪತ್ತೆಯಾಗಿರುವ ಮುಸ್ತಕೀಂ ತಂದೆ ಫುರ್ಖಾನ್ ಅವರು ಈವರೆಗೂ ಮನೆಗೆ ಮರಳಿಲ್ಲ. ಅವರು ಎಲ್ಲಿದ್ದಾರೆಂಬ ಸುಳಿವುಗಳೂ ಲಭಿಸಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X