Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯವುಟ್ಟದ ಟೇಬಲ್ ಟೆನಿಸ್ ಟೂರ್ನಿ...

ರಾಜ್ಯವುಟ್ಟದ ಟೇಬಲ್ ಟೆನಿಸ್ ಟೂರ್ನಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ6 Oct 2018 10:27 PM IST
share
ರಾಜ್ಯವುಟ್ಟದ ಟೇಬಲ್ ಟೆನಿಸ್ ಟೂರ್ನಿ ಉದ್ಘಾಟನೆ

ಕಲ್ಯಾಣಪುರ, ಅ.6: ರಾಜಕಾರಣದಲ್ಲಿ ಅದೃಷ್ಟದ ಪಾತ್ರ ಮುಖ್ಯವಾಗಿ ರುತ್ತದೆ. ಆದರೆ ಕ್ರೀಡೆಯಲ್ಲಿ ಪರಿಶ್ರಮದಿಂದ ಮಾತ್ರ ಔನತ್ಯ ಸಾಧ್ಯ. ವೃತ್ತಿಪರ ವಾಗಿ ಈ ಕ್ಷೇತ್ರದಲ್ಲಿ ತೊಡಗಿಸಿಕೊಂಡರೆ ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ಶಾಸಕ ಕೆ.ರಘುಪತಿ ಭಟ್ ಹೇಳಿದ್ದಾರೆ.

ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ ವಲಯ ಹಾಗೂ ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆ ಕಲ್ಯಾಣಪುರ ಇವರ ಸಂಯುಕ್ತ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯುವ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳ ರಾಜ್ಯಮಟ್ಟದ ಟೇಬಲ್ ಟೆನಿಸ್ ಪಂದ್ಯಾಟವನ್ನು ಕಲ್ಯಾಣಪುರದ ಮಿಲಾಗ್ರಿಸ್ ತ್ರಿಶತಮಾನೋತ್ಸವ ಸಭಾಭವನದಲ್ಲಿ ಶನಿವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಮುಂದಿನ ದಿನಗಳಲ್ಲಿ ಇಲ್ಲಿನ ಕ್ರೀಡಾಪಟುಗಳಲ್ಲಿ ಕೆಲವರಾದರೂ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಬಹುದು. ಹೀಗಾಗಿ ಕನಸು ಮತ್ತು ಗುರಿ ಮುಟ್ಟುವ ಛಲದೊಂದಿಗೆ ಈ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಿ ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮುಂದಿನ ದಿನಗಳಲ್ಲಿ ಇಲ್ಲಿನ ಕ್ರೀಡಾಪಟುಗಳಲ್ಲಿ ಕೆಲವರಾದರೂ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಬಹುದು. ಹೀಗಾಗಿ ಕನಸು ಮತ್ತು ಗುರಿ ಮುಟ್ಟುವ ಛಲದೊಂದಿಗೆ ಈ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಿ ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಆರ್ಶೀವಚನ ನೀಡಿದ ಉಡುಪಿ ಕೆಥೋಲಿಕ್ ಧರ್ಮಪ್ರಾಂತದ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೋ, ಉನ್ನತ ಧ್ಯೇಯ ಮತ್ತು ಅವಿರತ ಶ್ರಮದಿಂದ ಜೀವನದಲ್ಲಿ ಹಾಗೂ ಕ್ರೀಡಾಕ್ಷೇತ್ರದಲ್ಲಿ ಯಶಸ್ಸು ಗಳಿಸಲು ಸಾಧ್ಯ. ಕ್ರೀಡಾಕೂಟದಲ್ಲಿ ಎಲ್ಲರೂ ಗೆಲ್ಲಲು ಸಾಧ್ಯವಿಲ್ಲ. ಆದರೆ ಪಾಲ್ಗೊಳ್ಳುವಿಕೆ ಯಿಂದ ಬೆಳವಣಿಗೆಗೆ ಅವಕಾಶ ಲಭಿಸುತ್ತದೆ. ಇದೇ ಹಾದಿಯಲ್ಲಿ ಶ್ರದ್ಧೆಯಿಂದ ಮುಂದುವರಿದರೆ ಮುಂದೊಂದು ದಿನ ಉನ್ನತಮಟ್ಟ ತಲುಪಬಹುದು ಎಂದರು.

2010ರ ಕಾಮನ್‌ವೆಲ್ತ್ ಗೇಮ್ಸ್‌ನ ಟೇಬಲ್ ಟೆನಿಸ್‌ನಲ್ಲಿ ಪದಕ ವಿಜೇತ ಅಂತಾರಾಷ್ಟ್ರೀಯ ಆಟಗಾರ ಅಭಿಷೇಕ್, ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿಪಂ ಸದಸ್ಯ ಜನಾರ್ದನ ತೋನ್ಸೆ, ಶಾಲೆ ಸಂಚಾಲಕ ಫಾ.ಲಾರೆನ್ಸ್ ಡಿಸೋಜಾ, ಕಲ್ಯಾಣಪುರ ಗ್ರಾಪಂ ಅಧ್ಯಕ್ಷೆ ಪುಷ್ಪಕೋಟಿಯಾನ್, ಶಿಕ್ಷಣ ಇಲಾಖೆ ಉಪನಿರ್ದೇಶಕ ಶೇಷಶಯನ ಕಾರಿಂಜ, ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಮಧುಕರ್ ಎಸ್., ಶಾಲಾ ಮುಖ್ಯೋಪಾಧ್ಯಾಯ ವಂ.ಲ್ಯಾನ್ಸಿ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ರಾಜ್ಯದ 30 ಜಿಲ್ಲೆಗಳಿಂದ 120 ಕ್ರೀಡಾ ತಂಡ ಭಾಗವಹಿಸಿವೆ. ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ವಿಭಾಗ, ಪ್ರೌಢಶಾಲಾ ಬಾಲಕ-ಬಾಲಕಿಯರ ವಿಭಾಗದಲ್ಲಿ ಪಂದ್ಯಾಟಗಳು ನಡೆಯುತ್ತಿವೆ. ಎಂಟು ಟೇಬಲ್‌ಗಳಲ್ಲಿ ಸ್ಪರ್ಧೆಗಳನ್ನು ನಡೆಸಲಾಗುತ್ತಿವೆ.

ಟೂರ್ನಿಯ ಕೊನೆಯಲ್ಲಿ ಆಗ್ರಾದಲ್ಲಿ ನಡೆಯುವ ರಾಷ್ಟ್ರೀಯ ಟೇಬಲ್ ಟೆನಿಸ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಕರ್ನಾಟಕ ತಂಡವನ್ನು ಪ್ರತಿನಿಧಿಸುವ ನಾಲ್ಕು ತಂಡಗಳನ್ನು ಆಯ್ಕೆ ಮಾಡಲಾಗುತ್ತೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X