ಕೆಲಸ ಆಗುವವರೆಗೂ ಸರಕಾರಿ ಕಾರು ಹತ್ತಲ್ಲ: ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ, ಅ. 7: ‘ನಾನು ದೇವರ ವಿಚಾರದಲ್ಲಿ ನಂಬಿಕೆ ಇಟ್ಟಿದ್ದು, ಅದೊಂದು ಕೆಲಸ ಆಗುವವರೆಗೂ ಸರಕಾರಿ ಕಾರನ್ನು ಹತ್ತುವುದಿಲ್ಲ ಎಂದು ಸಚಿವ ರಮೇಶ್ ಜಾರಕಿಹೊಳಿ ಇಂದಿಲ್ಲಿ ಸ್ಪಷ್ಟಣೆ ನೀಡಿದ್ದಾರೆ.
ರವಿವಾರ ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನಾನೂ ಐದು ಬಾರಿ ನಡೆದ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದೇನೆ. ಮುಂದಿನ ಸಚಿವ ಸಂಪುಟ ಸಭೆಗೂ ಗೈರುಹಾಜರಾಗುತ್ತೇನೆ ಎಂದು ಅವರು ಇದೇ ವೇಳೆ ತಿಳಿಸಿದರು.
ನನಗೆ ನೀಡಿರುವ ಖಾತೆಯ ಬಗ್ಗೆ ಯಾವುದೇ ಅಸಮಾಧಾನವಿಲ್ಲ. ಗ್ರಂಥಾಲಯ ಖಾತೆ ಕೊಟ್ಟರು ನಡೆಸಲು ಸಿದ್ಧವಾಗಿದ್ದೇನೆ. ಕೆಲ ವಿಚಾರವನ್ನು ಮಾಧ್ಯಮಗಳ ಮುಂದೆ ಹೇಳೋಕೆ ಆಗುವುದಿಲ್ಲ. ದೇವರನ್ನು ನಂಬುತ್ತೇನೆ. ನನಗೆ ಸಚಿವ ಸ್ಥಾನಕ್ಕಿಂತ ಧಾರ್ಮಿಕ ನಂಬಿಕೆ ಮಹತ್ವದ್ದು ಎಂದರು.
Next Story





