Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿವಮೊಗ್ಗ ಲೋಕಸಭಾ ಉಪಚುನಾವಣೆ: ಉಡುಪಿ...

ಶಿವಮೊಗ್ಗ ಲೋಕಸಭಾ ಉಪಚುನಾವಣೆ: ಉಡುಪಿ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ ಪ್ರಿಯಾಂಕ

ವಾರ್ತಾಭಾರತಿವಾರ್ತಾಭಾರತಿ7 Oct 2018 7:47 PM IST
share
ಶಿವಮೊಗ್ಗ ಲೋಕಸಭಾ ಉಪಚುನಾವಣೆ: ಉಡುಪಿ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ ಪ್ರಿಯಾಂಕ

ಉಡುಪಿ, ಅ.7: ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಈ ಲೋಕಸಭಾ ವ್ಯಾಪ್ತಿಯಲ್ಲಿ ಬರುವ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ನ.3ರಂದು ಮತದಾನ ನಡೆಯಲಿದೆ. ಆದುದರಿಂದ ಮಾದರಿ ಚುನಾವಣಾ ನೀತಿ ಸಂಹಿತೆಯು ಉಡುಪಿ ಜಿಲ್ಲೆಯಾದ್ಯಂತ ತಕ್ಷಣದಿಂದ ಜಾರಿಯಾಗಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ರವಿವಾರ ನಡೆದ ಪತ್ರಿಕಾಗೋಷ್ಠಿ ಯಲ್ಲಿ ಅವರು ಈ ವಿಷಯ ಪ್ರಕಟಿಸಿದರು. ನಾಮಪತ್ರ ಸಲ್ಲಿಸಲು ಅ.16 ಕೊನೆಯ ದಿನಾಂಕವಾಗಿದ್ದು, ಅ.17ರಂದು ನಾಮಪತ್ರಗಳ ಪರಿಶೀಲನೆ, ನಾಮಪತ್ರಗಳ ಹಿಂತೆಗೆದುಕೊಳ್ಳಲು ಅ.20ರಂದು ಕೊನೆಯ ದಿನ, ನ.6ರಂದು ಮತ ಎಣಿಕೆ ನಡೆಯಲಿದೆ. ನೀತಿ ಸಂಹಿತೆಯು ನ.8ರ ವ ರೆಗೆ ಜಾರಿಯಲ್ಲಿರು ತ್ತದೆ ಎಂದರು.

ಬೈಂದೂರು ವಿಧಾನ ಸಭಾ ಕ್ಷೆತ್ರದಲ್ಲಿ 221972 ಮತದಾರರಿದ್ದು, 1786 ವಿಕಲಚೇತನ ಮತದಾರರು ಮತ್ತು 33 ಸೇವಾ ಮತದಾರರಿದ್ದಾರೆ. 243 ಮತ ಗಟ್ಟೆಗಳನ್ನು ಮತ್ತು 3 ಹೆಚ್ಚುವರಿ ಮತಗಟ್ಟೆಗಳನ್ನು ತೆರೆಯಲಾಗಿದೆ. ಅರ್ಹತಾ ದಿನಾಂಕ 2018ರ ಜ.1ಕ್ಕೆ 18ವರ್ಷ ತುಂಬಿದವರು ಮತದಾರರ ಪಟ್ಟಿಗೆ ಹೆಸರು ನೊಂದಾವಣೆ ಹಾಗೂ ತಿದ್ದುಪಡಿಯನ್ನು ಬೈಂದೂರು ತಾಲೂಕು ಕಚೇರಿ ಯಲ್ಲಿ ಅ.9ರೊಳಗೆ ಮಾಡಬುದಾಗಿದೆ ಎಂದು ಅವರು ಹೇಳಿದರು.

ಸಹಾಯಕ ಚುನಾವಣಾಧಿಕಾರಿಯಾಗಿ ಜಿಲ್ಲಾಧಿಕಾರಿಗಳ ಭೂಮಾಪನಾ ತಾಂತ್ರಿಕ ಸಹಾಯಕರು ಹಾಗೂ ಭೂದಾಖಲೆಗಳ ಉಪ ನಿರ್ದೇಶಕರು ಉಡುಪಿ ಇವರನ್ನು ನೇಮಕ ಮಾಡಲಾಗಿದ್ದು, ಬೈಂದೂರು ತಾಲೂಕು ಕಚೇರಿ ಯಲ್ಲಿರುವ ಸ್ತ್ರೀಶಕ್ತಿ ಕೇಂದ್ರದಲ್ಲಿ ಇವರ ಕಚೇರಿ ತೆರೆಯಲಾಗಿದೆ. ಈ ಚುನಾವಣೆಯಲ್ಲಿ ಎವಿಎಂ ಮತ್ತು ವಿವಿಪ್ಯಾಟ್ ಯಂತ್ರಗಳನ್ನು ಬಳಸಲಾಗು ತ್ತದೆ ಎಂದು ಅವರು ತಿಳಿಸಿದರು.

3 ವೀಡಿಯೊ ಸವೇಲಯನ್ಸ್ ತಂಡ, 3 ಪ್ಲೈಯಿಂಗ್ ಸ್ಕ್ವಾಡ್, 2 ಸ್ಟಾಟಿಕ್ ಸರ್ವೆಲೈನ್ಸ್ ತಂಡ, 3 ಸೆಕ್ಟರ್ ಅಧಿಕಾರಿ ತಂಡ, 3 ವಿಡಿಯೋ ವೀಕ್ಷಣಾ ತಂಡ, ಒಂದು ಮಾದರಿ ನೀತಿ ಸಂಹಿತೆ ತಂಡ ಮತ್ತು 1 ಲೆಕ್ಕಪತ್ರ ತಂಡವನ್ನು ರಚಿಸಲಾಗಿದೆ. ಚುನಾವಣೆ ಕರ್ತವ್ಯಕ್ಕೆ 246 ಮತಗಟ್ಟೆ ಅಧಿಕಾರಿಗಳು, 246 ಸಹಾಯಕ ಮತಗಟ್ಟೆ ಅಧಿಕಾರಿಗಳು, 738 ಮತಗಟ್ಟೆ ಅಧಿಕರಿಗಳು ಹಾಗೂ 123 ಮೀಸಲು ಸಿಬ್ಬಂದಿಗಳ ಅಗತ್ಯ ಇದೆ ಎಂದರು.

ಚುನಾವಣಾ ಸಂಬಂಧ ದೂರು ಸ್ವೀಕಾರಕ್ಕಾಗಿ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ದೂರು ಕೋಶ ತೆರೆಯಲಾಗಿದ್ದು, ಕಂಟ್ರೋಲ್ ರೂಂ ಟೋಲ್ ಫ್ರೀ ನಂ.1077, ದೂ.ಸಂ. 0820-2574920, ಬೈಂದೂರು ತಾಲೂಕು ಕಚೇರಿ ದೂ.ಸಂ. 08254-251657ನ್ನು ಸಂಪರ್ಕಿಸಬಹುದು. ಮತಯಂತ್ರ ಗಳ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಕಾರ್ಯಕ್ರಮವು ಬೈಂದೂರಿನಲ್ಲಿ ನಡೆಯಲಿದೆ. ಮತದಾನದ ನಂತರ ಮತಯಂತ್ರಗಳನ್ನು ಶಿವಮೊಗ್ಗಕ್ಕೆ ತಲುಪಿಸ ಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಕುಂದಾಪುರ ವಿಭಾಗದ ಸಹಾಯಕ ಆಯುಕ್ತ ಭೂಬಾಲನ್, ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.

ಅನಧಿಕೃತ ಕಟೌಟ್ ತೆರವು
ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ದೇವಸ್ಥಾನ ಸೇರಿದಂತೆ ಅನುಮತಿ ಇಲ್ಲದ ಕಟೌಟ್‌ಗಳನ್ನು ತೆರವುಗೊಳಿಸಲಾಗುವುದು. ಧಾರ್ಮಿಕ ಸ್ಥಳಗಳಲ್ಲಿ ಚುನಾವಣೆ ಪ್ರಚಾರ ಮಾಡಬಾರದು. ಸರಕಾರಿ ಕಾರ್ಯಕ್ರಮಗಳ ಕಟೌಟ್ ಗಳನ್ನು ತೆರವುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X