Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಾನಮುಕ್ತದಿಂದ ಗಾಂಧಿ ಕನಸಿನ ಭಾರತ...

ಪಾನಮುಕ್ತದಿಂದ ಗಾಂಧಿ ಕನಸಿನ ಭಾರತ ನಿರ್ಮಾಣ ಸಾಧ್ಯ: ಸುಕುಮಾರ್ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ7 Oct 2018 10:25 PM IST
share
ಪಾನಮುಕ್ತದಿಂದ ಗಾಂಧಿ ಕನಸಿನ ಭಾರತ ನಿರ್ಮಾಣ ಸಾಧ್ಯ: ಸುಕುಮಾರ್ ಶೆಟ್ಟಿ

ಕುಂದಾಪುರ, ಅ.7: ಹಳ್ಳಿಗಳ ಪ್ರಗತಿಯಿಂದ ಸುಸ್ಥಿರ ಸಮಾಜ ಹಾಗೂ ಪ್ರತಿಯೊಬ್ಬರು ಪಾನಮುಕ್ತರಾಗುವುದರಿಂದ ಗಾಂಧಿ ಕನಸಿನ ಭಾರತ ನಿರ್ಮಾಣ ಮಾಡಲು ಸಾಧ್ಯ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುಂದಾಪುರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ-ಉಡುಪಿ-ಕುಂದಾಪುರ, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ 150ನೇ ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ತ್ರಾಸಿಯ ಕೊಂಕಣ ಖಾರ್ವಿ ಸಮುದಾಯ ಭವನದಲ್ಲಿ ರವಿವಾರ ಆಯೋಜಿಸಲಾದ ಜನಜಾಗೃತಿ ಜಾಥಾ ಮತ್ತು ಗಾಂಧಿ ಸ್ಮೃತಿ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಅಂಕಣಕಾರ ಕೋ.ಶಿವಾನಂದ ಕಾರಂತ ದಿಕ್ಸೂಚಿ ಭಾಷಣ ಮಾಡಿ, ಮದ್ಯ ಪಾನದಿಂದ ಕೇವಲ ಒಬ್ಬನ ಬದುಕು ಮಾತ್ರ ದಿಕ್ಕು ತಪ್ಪುವುದಲ್ಲ. ಬದಲಾಗಿ ಆತನ ಕುಟುಂಬ, ಈ ಸಮಾಜದ ಸ್ವಾಸ್ಥ್ಯವು ಕೆಡುತ್ತದೆ. ಇಂತಹ ದುಶ್ಚಟಗಳಿಂದ ದೂರವಿರಲು ಮೊದಲಿಗೆ ನಮ್ಮ ಬಗ್ಗೆ ನಮಗೆ ಆತ್ಮವಿಶ್ವಾಸವಿರಬೇಕು. ಪರಿಸರದ ಸ್ವಚ್ಛತೆ ಜತೆಗೆ ಮನಸ್ಸಿನ ಸ್ವಚ್ಛತೆಗೂ ಾವು ಮುಂದಾಗಬೇಕಾಗಿದೆ ಎಂದರು.

ಕುಂದಾಪುರ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಬಿ.ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪುರುಷೋತ್ತಮ್ ಶೆಟ್ಟಿ, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ನವೀನ್ ಅಮೀನ್ ಶಂಕರಪುರ, ಜಿಪಂ ಸದಸ್ಯೆ ಶೋಭಾ ಜಿ.ಪುತ್ರನ್, ತಾಪಂ ಸದಸ್ಯರಾದ ಶ್ಯಾಮಲಾ ಕುಂದರ್, ನಾರಾಯಣ ಗುಜ್ಜಾಡಿ, ಗ್ರಾಪಂ ಅಧ್ಯಕ್ಷ ತ್ರಾಸಿಯ ಸುಧಾಕರ ಆಚಾರ್ಯ, ಹೊಸಾಡುವಿನ ಚಂದ್ರಶೇಖರ ಪೂಜಾರಿ, ಗಂಗೊಳ್ಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಮಂಜು ಬಿಲ್ಲವ, ಅಖಿಲ ಭಾರತ ಕೊಂಕಣ ಖಾರ್ವಿ ಮಹಾಜನ ಸಭಾದ ಅಧ್ಯಕ್ಷ ಕೆ.ಬಿ.ಖಾರ್ವಿ, ಗಂಗೊಳ್ಳಿ ಪೊಲೀಸ್ ಉಪನಿರೀಕ್ಷಕ ವಾಸಪ್ಪ ನಾಯ್ಕಿ, ಜನಜಾಗೃತಿ ವೇದಿಕೆಯ ತ್ರಾಸಿ ವಲಯದ ಅಧ್ಯಕ್ಷ ರಾಜು ದೇವಾಡಿಗ, ಪ್ರಗತಿ ಬಂಧು ಸ್ವಸಹಾಯ ಸಂಘದ ಒಕ್ಕೂಟದ ಅಧ್ಯಕ್ಷ ಎಚ್.ಎಂ.ಕೃಷ್ಣ ಪೂಜಾರಿ ಉಪಸ್ಥಿತರಿದ್ದರು.

ಗಾಂಧಿ ಜಯಂತಿ ಪ್ರಯುಕ್ತ ಗಾಂಧಿ ಕಲ್ಪನೆಯಲ್ಲಿ ಪಾನಮುಕ್ತ ಸಮಾಜ ಎಂಬ ವಿಷಯದ ಕುರಿತ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ವಡೇರ ಹೋಬಳಿಯ ಸರಕಾರಿ ಪ್ರೌಢಶಾಲೆಯ ಸರಸ್ವತಿ ಪ್ರಥಮ, ಕಂಡ್ಲೂರಿನ ರಾಮಸನ್ ಪ್ರೌಢಶಾಲೆಯ ಸುಜಯ ದ್ವಿತೀಯ ಹಾಗೂ ಗೋಳಿಯಂಗಡಿ ಸರಕಾರಿ ಪ್ರೌಢಶಾಲೆಯ ಪವಿತ್ರಾ ತೃತೀಯ ಬಹುಮಾನವನ್ನು ಪಡೆದಿದ್ದು, ಇವರಿಗೆ ಈ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು.

ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಬೈಂದೂರಿನ ಶಶಿರೇಖಾ ಪಿ. ಸ್ವಾಗತಿಸಿದರು. ಕುಂದಾಪುರದ ಮುರಳೀಧರ್ ಶೆಟ್ಟಿ ವಂದಿಸಿದರು. ಕೃಷಿ ಅಧಿಕಾರಿ ಚೇತನ್ ಹಾಗೂ ಚಿತ್ತೂರು ವಲಯದ ಮೇಲ್ವಿಚಾರಕಿ ಪ್ರೇಮಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X