ಅ.1ರಿಂದ ಬ್ಯಾಂಕ್ ಆಫ್ ಬರೋಡಾದಿಂದ ರೈತ ಜಾಗೃತಿ ಕಾರ್ಯಕ್ರಮ
ಬೆಂಗಳೂರು, ಅ.8: ರೈತರಿಗೆ ಕೃಷಿಯನ್ನು ಲಾಭದಾಯಕ ಮಾಡುವ ನಿಟ್ಟಿನಲ್ಲಿ ರೈತರಲ್ಲಿ ಜಾಗೃತಿ ಮೂಡಿಸಲು ಬ್ಯಾಂಕ್ ಆಫ್ ಬರೋಡಾ ವತಿಯಿಂದ ಉಜ್ವಲ ರೈತ, ಉಜ್ವಲ ಭಾರತ ಶೀರ್ಷಿಕೆಯಡಿ ಅ.1ರಿಂದ 16ರವರೆಗೆ ಕಿಸಾನ್ ಪಾಕ್ಷಿಕದಡಿ ಬ್ಯಾಂಕ್‌ನ ಶಾಖೆಗಳಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಸರಕಾರ 2022ರ ವೇಳೆಗೆ ರೈತರ ಆದಾಯದಲ್ಲಿ ದ್ವಿಗುಣಗೊಳಿಸಲು ಹಾಕಿಕೊಂಡಿರುವ ಗುರಿಯನ್ನು ಬೆಂಬಲಿಸಿ ಹಾಗೂ ಅಂತರ್‌ರಾಷ್ಟ್ರೀಯ ಆಹಾರ ದಿನಾಚರಣೆ ಅಂಗವಾಗಿ ಕಿಸಾನ್ ಪಾಕ್ಷಿಕದಡಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಬ್ಯಾಂಕ್ ಆಫ್ ಬರೋಡಾದ ವಿವಿಧ ಯೋಜನೆಗಳನ್ನು ಬಳಸಿಕೊಂಡು ಕೃಷಿ ಉತ್ಪಾದನೆ ಹೆಚ್ಚಳ, ರಾಸುಗಳ ಆರೋಗ್ಯ, ಮಣ್ಣು ಪರೀಕ್ಷೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ, ರೈತರಲ್ಲಿ ಅರಿವನ್ನು ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Next Story





