Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರಾಂಶುಪಾಲರಿಗೆ ವಿದ್ಯಾರ್ಥಿಯಿಂದ...

ಪ್ರಾಂಶುಪಾಲರಿಗೆ ವಿದ್ಯಾರ್ಥಿಯಿಂದ ಹಲ್ಲೆ; ಆರೋಪ ಸಾಬೀತು

ವಾರ್ತಾಭಾರತಿವಾರ್ತಾಭಾರತಿ9 Oct 2018 10:08 PM IST
share

ಮಂಗಳೂರು, ಅ.9: ನಗರದ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಿಗೆ 2 ವರ್ಷದ ಹಿಂದೆ ವಿದ್ಯಾರ್ಥಿಯೋರ್ವ ಹಲ್ಲೆ ನಡೆಸಿದ ಆರೋಪ ಮಂಗಳೂರಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಮಂಗಳವಾರ ಸಾಬೀತಾಗಿದೆ.

ಮೂರನೇ ವರ್ಷದ ಬಿಬಿಎ ವಿದ್ಯಾರ್ಥಿಯಾಗಿದ್ದ ಮುಹಮ್ಮದ್ ಶಾ ನವಾಝ್ (22) ಅಪರಾಧಿ.

ಈತ 2016 ಅ.20ರಂದು ಮಧ್ಯಾಹ್ನ ಪ್ರಾಂಶುಪಾಲ ರೆ.ಫಾ.ಮೈಕಲ್ ಸಾಯಮಯರೊ ಮೇಲೆ ಹಲ್ಲೆ ನಡೆಸಿದ್ದ ಎಂದು ಆರೋಪಿಸಿ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಹಿನ್ನೆಲೆ

ಮುಹಮ್ಮದ್ ಶಾ ನವಾಝ್ ಪ್ರತಿದಿನ ವಿಳಂಬವಾಗಿ ತರಗತಿಗೆ ಹಾಜರಾಗುತ್ತಿದ್ದ. ಈ ಬಗ್ಗೆ ಆತನಿಗೆ ಉಪನ್ಯಾಸಕರು ಹಾಗೂ ಪ್ರಾಂಶುಪಾಲರು ಎಚ್ಚರಿಕೆ ನೀಡಿದ್ದರು. ತಡವಾಗಿ ಬಂದ ಕಾರಣಕ್ಕೆ ಉಪನ್ಯಾಸಕರು ಹಾಜರಿ ನೀಡಿರಲಿಲ್ಲ. ಸಿಟ್ಟುಗೊಂಡ ಈತ ತರಗತಿಯಲ್ಲಿ ಉಪನ್ಯಾಸಕರ ಎದುರಿನಲ್ಲೇ ಹಾಜರಿ ಪುಸ್ತಕ ಹರಿದು ಹಾಕಿದ್ದ. ಈ ಬಗ್ಗೆ ದೂರು ಬಂದ ಹಿನ್ನೆಲೆ ಪ್ರಾಂಶುಪಾಲರು ಹೆತ್ತವರನ್ನು ಕರೆದುಕೊಂಡು ಬರಲು ಹೇಳಿದ್ದರು.

ಆದರೆ ಮುಹಮ್ಮದ್ ಪ್ರಾಂಶುಪಾಲರ ಮಾತಿಗೆ ಮನ್ನಣೆ ನೀಡದೆ ಹೆತ್ತವರನ್ನೂ ಕರೆ ತಂದಿರಲಿಲ್ಲ. ಈ ಬಗ್ಗೆ ಪ್ರಾಂಶುಪಾಲರು ವಿಚಾರಿಸಿ, ವಿವಿ ನಿಯಮಾವಳಿಯಂತೆ ಪರೀಕ್ಷೆಗೆ ಹಾಜರಾಗಲು ಸಾಧ್ಯವಿಲ್ಲ ಎಂದಿದ್ದರು. ಇದರಿಂದ ಸಿಟ್ಟುಗೊಂಡ ಮುಹಮ್ಮದ್ ಪ್ರಾಂಶುಪಾಲರು ಊಟಕ್ಕೆ ಹೋಗುತ್ತಿದ್ದಾಗ ಅವರನ್ನು ಹಿಂಬಾಲಿಸಿಕೊಂಡು ಹೋಗಿ ಕೊಲೆ ಮಾಡುವ ಉದ್ದೇಶದಿಂದ ಕುತ್ತಿಗೆ ಬಿಗಿಯಾಗಿ ಹಿಡಿದು, ಪುಸ್ತಕವನ್ನು ಸುರುಳಿಯಾಗಿಸಿ ಕಿವಿ ಹಾಗೂ ತಲೆಯ ಹಿಂಭಾಗಕ್ಕೆ ಹಲ್ಲೆ ನಡೆಸಿದ್ದ. ಈ ಬಗ್ಗೆ ಬಂದರು ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಅಂದಿನ ಪಿಎಸ್ಸೈ ಮದನ್ ಪ್ರಕರಣದ ವಿಚಾರಣೆ ನಡೆಸಿ, ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ನೇರಳೆ ವೀರಭದ್ರಯ್ಯ ಭವಾನಿ ತೀರ್ಪು ಪ್ರಕಟಿಸಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ಹರಿಶ್ಚಂದ್ರ ಉದ್ಯಾವರ ವಾದಿಸಿದ್ದರು.

ನಡತೆ ಆಧಾರದಲ್ಲಿ ಶಿಕ್ಷೆ

ಅಪರಾಧಿಯ ಮುಂದಿನ ಭವಿಷ್ಯವನ್ನು ಪರಿಗಣಿಸಿ ಆತನ ನಡತೆ ಆಧಾರದಲ್ಲಿ ಶಿಕ್ಷೆಯ ಬಗ್ಗೆ ಅ.22ರಂದು ತೀರ್ಪು ಪ್ರಕಟವಾಗಲಿದೆ. ನಡತೆಯ ಬಗ್ಗೆ ವರದಿ ನೀಡಲು ನ್ಯಾಯಾಧೀಶರು ಪರಿವೀಕ್ಷಣಾಧಿಕಾರಿ ಅವರನ್ನು ನೇಮಕ ಮಾಡಿದ್ದಾರೆ. ಅವರು ಅಪರಾಧಿಯ ಮನೆ, ಪರಿಸರ, ಆತನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆಯೇ ಎನ್ನುವ ಮೊದಲಾದ ವಿಷಯಗಳಿಗೆ ಸಂಬಂಧಿಸಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ವರದಿ ನೀಡಲಿದ್ದಾರೆ. ವರದಿಯ ಆಧಾರದಲ್ಲಿ ಶಿಕ್ಷೆ ಪ್ರಕಟವಾಗಲಿದೆ.

ಸನ್ನಡತೆ ಆಧಾರದಲ್ಲಿ ಶಿಕ್ಷೆಯಾಗದೇ ಇದ್ದರೆ ಬಾಂಡ್ ಪಡೆದು, ಒಂದು ವರ್ಷ ಕಾಲ ನಿಗಾ ಇಡಲಾಗುತ್ತದೆ. ಮತ್ತೆ ಪ್ರಕರಣ ದಾಖಲಾದರೆ ಈ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಬೇಕಾಗುತ್ತದೆ. ಈಗಾಗಲೇ ಆರೋಪಿ ವಿರುದ್ಧ ಠಾಣೆಯಲ್ಲಿ ಕೊಲೆ ಯತ್ನ, ಜೀವ ಬೆದರಿಕೆ ಪ್ರಕರಣ ದಾಖಲಾಗಿದ್ದರೂ, ಹಲ್ಲೆ, ತಡೆದು ನಿಲ್ಲಿಸಿರುವುದು, ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣ ಮಾತ್ರ ಸಾಬೀತಾಗಿದೆ ಎಂದು ಹರಿಶ್ಚಂದ್ರ ಉದ್ಯಾವರ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X