Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ: ಅಂಗವಿಕಲ ತಾಯಿ-ಮಗಳ ಚಿಕಿತ್ಸಾ...

ಬಂಟ್ವಾಳ: ಅಂಗವಿಕಲ ತಾಯಿ-ಮಗಳ ಚಿಕಿತ್ಸಾ ನೆರವಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ9 Oct 2018 10:59 PM IST
share
ಬಂಟ್ವಾಳ: ಅಂಗವಿಕಲ ತಾಯಿ-ಮಗಳ ಚಿಕಿತ್ಸಾ ನೆರವಿಗೆ ಮನವಿ

ಬಂಟ್ವಾಳ, ಅ. 9: ಇನ್ನು ಮುಂದೆ ತನ್ನಿಂದ ದುಡಿಯಲು ಸಾಧ್ಯವಾಗುತ್ತಿಲ್ಲ. ದಿನಂದಿಂದ ದಿನಕ್ಕೆ ತಾಯಿಯ ಆರೋಗ್ಯಯೂ ಕ್ಷೀಣಿಸುತ್ತಿದೆ. ತಮ್ಮ ಕಷ್ಟವನ್ನು ಕೇಳುವವರಾರೂ ಇಲ್ಲ. ತಮಗಿಬ್ಬರಿಗೆ ಈ ಜೀವನವೇ ಸಾಕಾಗಿದೆ...

ಬಂಟ್ವಾಳ ತಾಲೂಕಿನ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರಿನ ಬಾಡಿಗೆ ಮನೆಯೊಂದರಲ್ಲಿ ಕಷ್ಟದ ದಿನದೂಡುತ್ತಿರುವ ಅಂಗವಿಕಲ ಮಹಿಳೆಯೊಬ್ಬರು ತಮ್ಮ ಅಳಲನ್ನು ತೋಡಿಕೊಂಡಿದ್ದು ಹೀಗೆ.

ಸುಮಾರು 35 ವರ್ಷಗಳಿಂದ ಪಾಣೆಮಂಗಳೂರಿನ ಬಾಡಿಗೆ ಮನೆಯೊಂದರಲ್ಲಿ ಕಮಲಾಕ್ಷಿ ಹಾಗೂ 80ರ ಹರೆಯ ತಾಯಿ ಜಯಲಕ್ಷಿ ಅವರೊಂದಿಗೆ ವಾಸವಾಗಿದ್ದು, ತಿಂಗಳಿಗೆ 1,500 ಸಾವಿರ ಬಾಡಿಗೆ.

ಕಮಲಾಕ್ಷಿ ಅವರು ಹುಟ್ಟಿನಿಂದಲೇ ತನ್ನ ಕಾಲಿನ ನ್ಯೂನತೆಯಿಂದ ಅಂಗವಿಕಲರಾಗಿದ್ದರೆ, ತಾಯಿಗೆ ಒಂದು ಕಣ್ಣು ಕಾಣಿಸುವುದಿಲ್ಲ. ತಮ್ಮ ಹೊಟ್ಟೆಪಾಡಿಗಾಗಿ ಕಮಲಾಕ್ಷಿ ಅವರು ಇದುವರೆಗೂ ಹತ್ತಿರ ಹೊಟೇಲ್‍ವೊಂದರಲ್ಲಿ ಕೂಲಿ ಕೆಲಸ ಮಾಡಿಕೊಂಡು ತನ್ನ ತಾಯಿಯ ಚಿಕಿತ್ಸಾ ವೆಚ್ಚ ಹಾಗೂ ಮನೆಬಾಡಿಗೆ ವೆಚ್ಚವನ್ನು ಭರಿಸುತ್ತಿದ್ದರು. ಇದೀಗ ಕಮಲಾಕ್ಷಿ ಅವರ ಕಾಲಿನ ಬಲ ಮತ್ತಷ್ಟು ಹೀನಕೊಂಡಿದ್ದು, ನಡೆದಾಡದಂತಹ ಸ್ಥಿತಿ ಉಂಟಾಗಿದೆ.

ತಾಯಿಗೆ ವಯಸ್ಸಾಗಿದ್ದು, ಇತ್ತೀಚಿನ ದಿನಗಳಲ್ಲಿ ಅವರಿಗೆ ಸರಿಯಾಗಿ ಕಿವಿ ಕೇಳಿಸುದಿಲ್ಲ. ಅಲ್ಲದೆ, ಅವರು ಅನಾರೋಗ್ಯದಿಂದ ಮಾತನಾಡುವುದನ್ನು ಕೂಡಾ ಕಡಿಮೆ ಮಾಡಿ, ಕೈ ಸನ್ನೆ ಮೂಲಕ ತಿಳಿಸುತ್ತಾರೆ ಎಂದು ಕಮಲಾಕ್ಷಿ ಅವರು ಸ್ಥಿತಿಗತಿಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ಮೊದಲು ಮಂಗಳೂರಿನ ಆಸ್ಪತ್ರೆಯಲ್ಲಿ ತನ್ನ ಕಾಲಿನ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಈ ಚಿಕಿತ್ಸಾ ವೆಚ್ಚವನ್ನು ಶಾಸಕ ರಾಜೇಶ್ ನಾಯ್ಕ್ ಅವರು ಭರಿಸಿರುತ್ತಾರೆ. ಇದೀಗ ಮತ್ತೆ ಇನ್ನೊಂದು ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದು, ಭಯವಾಗುತ್ತಿದೆ. ಇದೆಲ್ಲಾ ನೋಡುವಾಗ ಜೀವನವೇ ಬೇಡವೆನಿಸುತ್ತಿದೆ ಎಂದು ಅಳಲನ್ನು ತೋಡಿಕೊಂಡರು.

ಮನೆ-ನಿವೇಶನ ಕೇಳಿ ಸಂಬಂಧಪಟ್ಟ ಜನಪ್ರತಿನಿಧಿಗಳಲ್ಲಿ ವಿನಂತಿಸಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ನಿಮ್ಮ ಮುಂದೆ ಈ ವಿಷಯವನ್ನು ತಿಳಿಸುತ್ತಿದ್ದೇನೆ ಎಂದು ತಮ್ಮನ್ನು ಭೇಟಿಯಾದ ಮಾಧ್ಯಮದ ಮುಂದೆ ವಿನಂತಿಸಿಕೊಂಡರು.

ಈ ತಾಯಿ ಮಗಳ ಜೀವನೋಪಾಯಕ್ಕಾಗಿ ಸರಕಾರ, ಜನಪ್ರತಿನಿಧಿಗಳು, ಪುರಸಭೆ ಅಥವಾ ಸಂಘ ಸಂಸ್ಥೆಗಳು ಸ್ಪಂದಿಸುವ ಮೂಲಕ ಅಂಗವಿಕಲ ಜೀವಕ್ಕೆ ಬೆಳಕಾಗಬೇಕಿದೆ. 

ಖಾತೆಯ ವಿವರ

ಈ ಎರಡು ಬಡ ಜೀವಗಳಿಗೆ ಸಹಾಯಧನ ನೀಡಲು ಬಯಸುವವರು. ಕಮಲಾಕ್ಷಿ, ಖಾತೆ ನಂ: 01352200125402. ಸಿಂಡಿಕೇಟ್ ಬ್ಯಾಂಕ್. ಪಾಣೆಮಂಗಳೂರು ಶಾಖೆ. (ಐಎಫ್‍ಎಸ್‍ಸಿ ಕೋಡ್: ಎಸ್‍ವೈಎನ್‍ಬಿ0000135). ಮೊಬೈಲ್: 9900927312.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X