Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ.3: ಪುತ್ತೂರು ತಾಲೂಕು ತುಳು ಸಾಹಿತ್ಯ...

ನ.3: ಪುತ್ತೂರು ತಾಲೂಕು ತುಳು ಸಾಹಿತ್ಯ ಸಮ್ಮೇಳನ `ತುಳು ಪರ್ಬ-2018'

ಸಮ್ಮೇಳನಾಧ್ಯಕ್ಷತೆ ವಿಶ್ರಾಂತ ಕುಲಪತಿ ಡಾ. ಬಿ.ಎ. ವಿವೇಕ್ ರೈ

ವಾರ್ತಾಭಾರತಿವಾರ್ತಾಭಾರತಿ13 Oct 2018 10:34 PM IST
share

ಪುತ್ತೂರು, ಅ. 13: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಪುತ್ತೂರು ತಾಲೂಕು ತುಳು ಸಾಹಿತ್ಯ ಸಮ್ಮೇಳನ ಸಮಿತಿಯ ವತಿಯಿಂದ ತುಳು ಸಾಹಿತ್ಯ ಸಮ್ಮೇಳನ `ತುಳು ಪರ್ಬ -2018' ನ. 3ರಂದು ಮಂಜಲ್ಪಡ್ಪು ಸುದಾನಾ ವಸತಿಯುತ ಶಾಲೆಯ ವಠಾರದಲ್ಲಿ ನಡೆಯಲಿದ್ದು, ಸಮ್ಮೇಳನಾಧ್ಯಕ್ಷತೆ ಯನ್ನು ಕರ್ನಾಟಕ ಮುಕ್ತ ವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಬಿ.ಎ. ವಿವೇಕ್ ರೈ ವಹಿಸಲಿದ್ದಾರೆ ಎಂದು ಪುತ್ತೂರು ತಾಲೂಕು ತುಳು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಸವಣೂರು ಕೆ. ಸೀತಾರಾಮ ರೈ ತಿಳಿಸಿದ್ದಾರೆ.

ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರಾಜ್ಯ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕನ್ನಡ ಸಂಸ್ಕೃತಿ ಇಲಾಖಾ ಸಚಿವೆ ಡಾ. ಜಯಮಾಲ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.

ತುಳು ಸಾಹಿತ್ಯ ಸಮೇಳನದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. 'ಕೋಟಿ-ಚೆನ್ನಯ ಆನೆ ಬಾಕಿಲ್'ನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ.  ಶ್ರೀಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.

ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು `ಅಗೋಳಿ ಮಂಞಣ ಗೊಬ್ಬುದ ಕಲ'ವನ್ನು ಉದ್ಘಾಟಿಸಲಿದ್ದು,  ಸಂಸದ ನಳಿನ್ ಕುಮಾರ್ ಕಟೀಲ್ `ಬೂಕ್ ತೂಪರಿಕೆ'ಯನ್ನು ಉದ್ಘಾಟಿಸಲಿದ್ದಾರೆ.  ಶಾಸಕ ಸಂಜೀವ ಮಠಂದೂರು ಹಳೆ ಕಾಲದ ವಸ್ತುಗಳ ಮಳಿಗೆ `ಪಿರಾಕ್‍ದ ಸೊತ್ತುಲೆ ತೂಪರಿಕೆ' ಯನ್ನು ಉದ್ಘಾಟಿಸಲಿದ್ದು, ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್ `ತುಳುವೆರೆ ಕುಲಕಸುಬು' ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿಯ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ, ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಸೇರಿದಂತೆ ವಿವಿಧ ಗಣ್ಯರು ಸಮ್ಮೇಳನದಲ್ಲಿ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. 

ನ. 2ರಂದು ಬೆಳಿಗ್ಗೆ ಮಂಗಳೂರು ಯುವವಾಹಿನಿಯ ಕೇಂದ್ರ ಸಮಿತಿ ಅಧ್ಯಕ್ಷ ಜಯಂತ ನಡುಬೈಲು ತುಳುವೆರೆ ದಿಬ್ಬಣ ಉದ್ಘಾಟಿಸಲಿದ್ದಾರೆ. ತುಳು ಪರ್ಬದಲ್ಲಿ ಕಬಿ ದುನಿಪು-ನಲಿಪು, ಪಾತೆರಕತೆ-ತುಳು ಸಾಹಿತ್ಯ ಮರ್ಗಿಲ್ ನಡೆಯಲಿದ್ದು, ಹಿರಿಯ ಯಕ್ಷಗಾನ ಕಲಾವಿದ ಕೆ.ಎಚ್. ದಾಸಪ್ಪ ರೈ ಯಕ್ಷಗಾನ, ಚಲನಚಿತ್ರ ನಟ ಶಿವಧ್ವಜ್ ಸಿನಿಮಾ, ಹಿರಿಯ ರಂಗಕರ್ಮಿ ತಾರನಾಥ ಪಿ ನಾಟಕ ಹಾಗೂ ತುಳು ಸಂಘಟಕ ಸೇಸಪ್ಪ ರೈ ರಾಮಕುಂಜ ತುಳುಪಠ್ಯದ ಕುರಿತು ಉಪನ್ಯಾಸ ಮಾಡಲಿದ್ದಾರೆ. 

ಮಧ್ಯಾಹ್ನ ಕಬಿಕೂಟ ಪುತ್ತೂರು ಕರ್ನಾಟಕ ಸಂಘದ ಅಧ್ಯಕ್ಷ ಹಾಗೂ ಹಿರಿಯ ನ್ಯಾಯವಾದಿ ಬಿ. ಪುರಂದರ ಭಟ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಬಳಿಕ ಕಬಿ ದುನಿಪು-ನಲಿಪು ಪ್ರದರ್ಶನಗೊಳ್ಳಲಿದೆ. ಚಾವಡಿ ಚರ್ಚೆ- ದೈವ ನಿಲೆ ಚರ್ಚಾಕೂಟ, ಸಂಜೆ ತುಳು-ತುಲಿಪು ವಿಚಾರಗೋಷ್ಠಿ ನಡೆಯಲಿದೆ. ಪುತ್ತೂರು ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಉಪನ್ಯಾಸಕ ಡಾ. ನರೇಂದ್ರ ರೈ ದೇರ್ಲ ಮಣ್ಣಿನ ಕುರಿತು, ವಿವೇಕಾನಂದ ಮಹಾವಿದ್ಯಾಲಯದಉಪನ್ಯಾಸಕ ಡಾ. ಎಂ.ಕೆ. ಶ್ರೀಶ ಕುಮಾರ್ ಬೆನ್ನಿಯ ಕುರಿತು ಹಾಗೂ ಪ್ರಗತಿಪರ ಕೃಷಿಕ ಸೇಡಿಯಾಪು ಜನಾರ್ದನ ಭಟ್ ಬೆನ್ನಿಯ ಕುರಿತು ಉಪನ್ಯಾಸ ನೀಡಲಿದ್ದಾರೆ.

ಸಂಜೆ ಪರ್ಬೊದ ಪೊಲಬು- ಮುಗಿತಲದ ಲೇಸ್ ನಡೆಯಲಿದೆ. ಈ ಸಮಾರೋಪ ಸಮಾರಂಭದಲ್ಲಿ ಹಾವೇರಿ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಕೆ. ಚಿನ್ನಪ್ಪ ಗೌಡ ಸಮಾರೋಪ ಭಾಷಣ ಮಾಡಲಿದ್ದಾರೆ. ವಿದ್ಯಾಂಸ ಹಾಗೂ ವಿಶ್ರಾಂತ ಕುಲಪತಿ ಡಾ. ಬಿ.ಎ. ವಿವೇಕ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಶಾಸಕರಾದ ಉರಿಮಜಲು ರಾಮ ಭಟ್ ಮತ್ತು ಮಲ್ಲಿಕಾ ಪ್ರಸಾದ್ ಸನ್ಮಾನಿತರನ್ನು ಗೌರವಿಸಲಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ತಾಲೂಕು ಪಂಚಾಯತ್ ಅಧ್ಯಕ್ಷೆ ಭವಾನಿ ಚಿದಾನಂದ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್. ಸುಧಾಕರ ಶೆಟ್ಟಿ, ಪುತ್ತೂರು ಸಹಾಯಕ ಕಮೀಷನರ್ ಎಚ್.ಕೆ. ಕೃಷ್ಣಮೂರ್ತಿ, ನ್ಯಾಯವಾದಿ ಮೋಹನ ಗೌಡ ಇಡ್ಯಡ್ಕ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ 15 ಮಂದಿ ಸಾಧಕರನ್ನು ಸನ್ಮಾನಿಸಲಾಗುತ್ತದೆ. 

ಬಳಿಕ ಸುಂದರ ರೈ ಮಂದಾರ ಸಂಯೋಜನೆಯಲ್ಲಿ ತುಳು ರಂಗ್ ರಂಗಿತೊ: ತೆಲಿಕೆ ನಲಿಕೆ- ಬಾಯಿ ನಿಲಿಕೆ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದ್ದು, ಬಳಿಕ ಬೊಳುವಾರು ಮಹಿಳಾ ಯಕ್ಷಗಾನ ಸಂಘದ ವತಿಯಿಂದ ಪೊಂಜೊವುಲೆ ಯಕ್ಷಗಾನ ತಾಳಮದ್ದಳೆ ಕೃಪನ ಮದಿಪು ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಪುತ್ತೂರು ತಾಲೂಕು ತುಳು ಸಾಹಿತ್ಯ ಸಮ್ಮೇಳನದ ಕಾರ್ಯದರ್ಶಿ ನಿರಂಜನ್ ರೈ ಮಠಂತಬೆಟ್ಟು, ಆರ್ಥಿಕ ಸಮಿತಿ ಸಂಚಾಲಕ ಶಶಿಕುಮಾರ್ ರೈ ಬಾಲ್ಯೋಟ್ಟು, ಪ್ರಚಾರಕೂಟದ ಸಂಚಾಲಕ ರಾಜೇಶ್ ಬನ್ನೂರು ಮತ್ತು ಎಚ್. ಶ್ರೀಧರ್ ರೈ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X