ಬೆಂಗಳೂರು : ನೂರಾರು ರೌಡಿಗಳ ವಿಚಾರಣೆ ನಡೆಸಿದ ಪೊಲೀಸರು
ಬೆಂಗಳೂರು, ಅ.14: ನೂರಕ್ಕೂ ಅಧಿಕ ರೌಡಿಶೀಟರ್‌ಗಳನ್ನು ಕರೆತಂದು ನಗರದ ದಕ್ಷಿಣ ವಿಭಾಗದ ಪೊಲೀಸರು ವಿಚಾರಣೆ ನಡೆಸಿ, ಮಾಹಿತಿಗಳನ್ನು ದಾಖಲು ಮಾಡಿದರು.
ರವಿವಾರ ಡಿಸಿಪಿ ಡಾ.ಶರಣಪ್ಪ ಅವರ ನೇತೃತ್ವದಲ್ಲಿ ವಿವಿ ಪುರಂ ಉಪ ವಿಭಾಗದ ಪೊಲೀಸರು, 120 ರೌಡಿಗಳ ಮನೆ ಮೇಲೆ ದಾಳಿ ನಡೆಸಿ ರೌಡಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಅಪರಾಧ ಚಟುವಟಿಕೆಗಳನ್ನು ತೊಡಗಬಾರದೆಂದು ಎಚ್ಚರಿಕೆ ನೀಡಿದರು
ವಿವಿ ಪುರಂ ಪೊಲೀಸ್ ಠಾಣೆಯ ಆವರಣಕ್ಕೆ ರೌಡಿಗಳನ್ನು ಕರೆತಂದು ವಿಚಾರಣೆ ನಡೆಸಿರುವ ಪೊಲೀಸರು, ಯಾವುದೇ ರೌಡಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ಸೂಚನೆ ನೀಡಿದ್ದಾರೆ.
ವಿವಿಪುರಂ, ಶಂಕರಪುರ, ಕೆ.ಜಿ.ಹಳ್ಳಿ, ಹನುಮಂತನಗರ, ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಗಳ ಸುಮಾರು 120 ರೌಡಿಗಳ ಮನೆ ಮೇಲೆ ದಾಳಿ ನಡೆದಿದೆ. ಪ್ರಸ್ತುತ ರೌಡಿಗಳು ನಡೆಸುತ್ತಿರುವ ಕೆಲಸ, ಕುಟುಂಬದ ಹಿನ್ನೆಲೆಗಳ ಬಗ್ಗೆ ಮಾಹಿತಿ ಪಡೆದ ಡಾ.ಶರಣಪ್ಪ ಅವರು, ರೌಡಿ ಚಟುವಟಿಕೆಗಳಲ್ಲಿ ಪಾಲ್ಗೊಂಡರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸೂಕ್ತ ಸಮಯಕ್ಕೆ ಠಾಣೆಗೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ.





