Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಶಕ್ತರ ನೋವಿಗೆ ಧ್ವನಿಯಾದ ಮುಖ್ಯಮಂತ್ರಿ...

ಅಶಕ್ತರ ನೋವಿಗೆ ಧ್ವನಿಯಾದ ಮುಖ್ಯಮಂತ್ರಿ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ14 Oct 2018 10:36 PM IST
share
ಅಶಕ್ತರ ನೋವಿಗೆ ಧ್ವನಿಯಾದ ಮುಖ್ಯಮಂತ್ರಿ ಕುಮಾರಸ್ವಾಮಿ

ಮಂಗಳೂರು, ಅ.14: ದ.ಕ. ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರವಿವಾರ ಆಗಮಿಸಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಜಿಲ್ಲೆಯ ಹಲವು ನಾಗರಿಕರ ಅಹವಾಲುಗಳನ್ನು ಆಲಿಸಿ, ಅವರ ನೋವುಗಳಿಗೆ ಪರಿಹಾರ ಒದಗಿಸಿದರು.

ಮುಖ್ಯಮಂತ್ರಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಹೊರಹೋಗುವಾಗ ಕಾದು ಕುಳಿತಿದ್ದ ಹಿರಿಯ ನಾಗರಿಕರು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ಹಲವು ನಾಗರಿಕರಿಂದ ನೇರವಾಗಿ ಅಹವಾಲು ಆಲಿಸಿದರು.

ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಬಹುದಾದ ಹಲವು ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಲು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು. ಇನ್ನೂ ಕೆಲವು ನಾಗರಿಕರಿಗೆ ಅವರ ಸಮಸ್ಯೆಗಳಿಗೆ ಬೆಂಗಳೂರಿಗೆ ಬಂದು ತನ್ನನ್ನು ಭೇಟಿಯಾಗುವಂತೆ ಸೂಚಿಸಿದರು.

ಪ್ರಸ್ತುತ ಮಂಗಳೂರು ಆಕಾಶಭವನದಲ್ಲಿ ನೆಲೆಸಿರುವ ಕೊಪ್ಪಳ ಜಿಲ್ಲೆಯ ಮೂಲದ ಪುಷ್ಪಾ ಎಂಬವರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತನ್ನ ಮಗಳು ಸುಷ್ಮಿತಾಳ ಚಿಕಿತ್ಸೆಗೆ ಸಾಕಷ್ಟು ವೆಚ್ಚವಿದ್ದು, ನೆರವು ನೀಡಲು ಸಿಎಂಗೆ ಮನವಿ ಸಲ್ಲಿಸಿದರು.

ಪ್ರಸಕ್ತ ಬೆಸೆಂಟ್ ಕಾಲೇಜ್‌ನಲ್ಲಿ ಪಿಯುಸಿ ಕಲಿಯುತ್ತಿರುವ ಸುಷ್ಮಿತಾ ಕ್ರೀಡೆಯಲ್ಲಿ ಸಾಕಷ್ಟು ಬಹುಮಾನ ಪಡೆದಿದ್ದು, ಅದರ ಸರ್ಟಿಫಿಕೇಟ್‌ಗಳನ್ನು ತಾಯಿ ಸಿಎಂಗೆ ತೋರಿಸಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ, ಕೂಡಲೇ ಸುಷ್ಮಿತಾಳ ಚಿಕಿತ್ಸೆ ವೆಚ್ಚದ ಅಂದಾಜು ಪಟ್ಟಿ ಪಡೆದು ಕಳುಹಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು.

ಬಂಟ್ವಾಳ ತಾಲೂಕಿನ ಮೇರೆಮಜಲು ಗ್ರಾಮದ ವಿಜಯಾ ಎಂಬ ಮಹಿಳೆಯು ತನ್ನ ವಾಸದ ಮನೆಯನ್ನು ಸ್ಥಳೀಯ ಗ್ರಾಮ ಪಂಚಾಯತ್ ಕೆಡವಿ ಹಾಕಿದ್ದು, ತನಗೆ ಯಾವುದೇ ನಿವೇಶನ ನೀಡದೆ ಬೀದಿಗೆ ಬಿದ್ದಿರುವುದಾಗಿ ಮುಖ್ಯಮಂತ್ರಿಗೆ ಮೊರೆ ಇಟ್ಟರು. ಈ ಬಗ್ಗೆ ತಕ್ಷಣವೇ ಕ್ರಮಕೈಗೊಳ್ಳಲು ಸಿಎಂ ಅಧಿಕಾರಿಗಳಿಗೆ ನಿರ್ದೇಶಿಸಿದರು.

ನಿವೃತ್ತ ಶಿಕ್ಷಕರೊಬ್ಬರು ತನ್ನ ಮಗನಿಗೆ ಸೂಕ್ತ ಉದ್ಯೋಗ ಒದಗಿಸಲು ಮನವಿ ಮಾಡಿದರು.

ಕದ್ರಿ ಶಿವಭಾಗ್‌ನಲ್ಲಿ ನಡೆದ ಶಾಸಕ ಭೋಜೇಗೌಡ ಅವರ ಕಚೇರಿ ಉದ್ಘಾಟನೆ ಬಳಿಕ ಮುಖ್ಯಮಂತ್ರಿ ನೇರವಾಗಿ ಸಾರ್ವಜನಿಕರನ್ನು ಭೇಟಿಯಾಗಿ, ಸಾವಧಾನದಿಂದಲೇ ಅಹವಾಲು ಆಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X