Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗು ಪ್ರಾಕೃತಿಕ ವಿಕೋಪ: ಸೂಕ್ತ...

ಕೊಡಗು ಪ್ರಾಕೃತಿಕ ವಿಕೋಪ: ಸೂಕ್ತ ಪುನರ್ವಸತಿಗೆ ಆಗ್ರಹಿಸಿ ಹಾಲೇರಿ ಗ್ರಾಮಸ್ಥರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ15 Oct 2018 6:19 PM IST
share
ಕೊಡಗು ಪ್ರಾಕೃತಿಕ ವಿಕೋಪ: ಸೂಕ್ತ ಪುನರ್ವಸತಿಗೆ ಆಗ್ರಹಿಸಿ ಹಾಲೇರಿ ಗ್ರಾಮಸ್ಥರಿಂದ ಪ್ರತಿಭಟನೆ

ಮಡಿಕೇರಿ, ಅ.15 :ಇತ್ತೀಚೆಗೆ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಸೋಮವಾರಪೇಟೆ ತಾಲೂಕಿನ ಹಾಲೇರಿ ಗ್ರಾಮದಲ್ಲಿ ಸಾಕಷ್ಟು ಮನೆಗಳು ಹಾನಿಗೊಳಗಾಗಿದ್ದು, ಸೂಕ್ತ ಪುನರ್ವಸತಿ ಕಲ್ಪಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಕೆಲಕಾಲ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ತಮ್ಮ ಗ್ರಾಮದ ಸ್ಥಿತಿಗತಿಯನ್ನು ಖುದ್ದು ಪರಿಶೀಲಿಸಿ, ಪುನರ್ವಸತಿ ಕಲ್ಪಿಸಬೇಕೆಂದು ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭ ಮಾತನಾಡಿದ ಹಾಲೇರಿ ಗ್ರಾಮಸ್ಥ ಬಿದ್ದಪ್ಪ, ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಹೋಬಳಿಯ ಕೆದಕಲ್ ಗ್ರಾ.ಪಂ.ಗೆ ಒಳಪಟ್ಟ ಹಾಲೇರಿ ಗ್ರಾಮವು ಕಳೆದ ಆಗಸ್ಟ್ ನಲ್ಲಿ ಸಂಭವಿಸಿದ ಪ್ರ್ರಾಕೃತಿಕ ವಿಕೋಪದಿಂದ ನಲುಗಿಹೋಗಿದ್ದು, ಭಾರೀ ಮಳೆ ಹಾಗೂ ಭೂಕುಸಿತದಿಂದ 5 ಮನೆಗಳು ಸಂಪೂರ್ಣ ನಾಶವಾಗಿದೆ. ಇದರಿಂದ 55 ರಿಂದ 60 ಕುಟುಂಬಗಳು ಸಂಕಷ್ಟದಲ್ಲಿ ಜೀವನ ಸಾಗಿಸುವಂತಾಗಿದೆ ಎಂದು ಹೇಳಿದರು.

ಹಾಲೇರಿ ಗ್ರಾಮವು ಹೆಮ್ಮೆತ್ತಾಳು, ಮೇಘತ್ತಾಳು ಹಾಗೂ ತಂತಿಪಾಲದ ಬಳಿಯ ಗುಡ್ಡದ ಇನ್ನೊಂದು ಭಾಗದಲ್ಲಿದ್ದು, ಇಡೀ ಗ್ರಾಮದ ಮೇಲ್ಭಾಗದಲ್ಲಿರುವ ಗುಡ್ಡದಲ್ಲಿ 2 ಇಂಚಿನಿಂದ 2 ಅಡಿಗಳವರೆಗೆ ಬಿರುಕು ಬಿಟ್ಟು ಭೂಮಿ ಕುಸಿಯುವ ಹಂತವನ್ನು ತಲುಪಿದೆ. ಈಗಾಗಲೇ ಹಾಲೇರಿ ಗ್ರಾಮದ 1737 ಏಕರೆಗಳಲ್ಲಿ 150 ಎಕರೆಯಷ್ಟು ಕುಸಿದು ಹೋಗಿದ್ದು, ಹೆಚ್ಚಿನ ಮಳೆ ಬಂದಲ್ಲಿ ಹಾಲೇರಿ ಗ್ರಾಮವೇ ಕೊಚ್ಚಿ ಹೋಗುವ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇಲ್ಲಿಯವರೆಗೂ ತಮ್ಮ ಗ್ರಾಮಕ್ಕೆ ಯಾವುದೇ ಅಧಿಕಾರಿಗಳು ಭೇಟಿ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಹಾಲೇರಿ ಗ್ರಾಮವು ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಾಲೋನಿಯನ್ನು ಒಳಗೊಂಡಿದೆ. ಅಲ್ಲದೆ, ಈ ಗ್ರಾಮದ ನಿವಾಸಿಗಳು ಸಣ್ಣ ರೈತರಾಗಿದ್ದು, ಕೂಲಿ ಕೆಲಸವನ್ನೆ ನಂಬಿಕೊಂಡು ಬದುಕುತ್ತಿದ್ದಾರೆ. ಆದ್ದರಿಂದ ಜಿಲ್ಲಾಧಿಕಾರಿಗಳು ಹಾಲೇರಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದ ಸ್ಥಿತಿಗತಿಯನ್ನು ಖುದ್ದು ಪರಿಶೀಲಿಸಿ ಪುನರ್ವಸತಿ ಕಲ್ಪಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಹಾಲೇರಿ ಗ್ರಾಮ ವ್ಯಾಪ್ತಿಯ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X