Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅ.17 ರಂದು ಮಡಿಕೇರಿಗೆ ಮುಖ್ಯಮಂತ್ರಿ...

ಅ.17 ರಂದು ಮಡಿಕೇರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ

ವಾರ್ತಾಭಾರತಿವಾರ್ತಾಭಾರತಿ15 Oct 2018 7:00 PM IST
share
ಅ.17 ರಂದು ಮಡಿಕೇರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ

ಮಡಿಕೇರಿ, ಅ.15 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅ.17 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅಂದು ಬೆಳಗ್ಗೆ ನಗರದ ಗಾಂಧಿ ಮೈದಾನದಲ್ಲಿ ಸಂತ್ರಸ್ತರ ಜೊತೆ ಸಂವಾದ, ನಂತರ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಆದ್ದರಿಂದ ಪುನರ್ವಸತಿ ಸಂಬಂಧ ಇದುವರೆಗೆ ಕೈಗೊಳ್ಳಲಾಗಿರುವ ಕಾರ್ಯಗಳು ಹಾಗೂ ಕಾಮಗಾರಿಗಳ ಬಗ್ಗೆ ನಿಖರ ಮಾಹಿತಿ ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬು ಕುಮಾರ್ ತಿಳಿಸಿದ್ದಾರೆ. 

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 
ಪುನರ್ವಸತಿ ಸಂಬಂಧಿಸಿದಂತೆ ಈಗಾಗಲೇ ನಿವೇಶನದ ಭೂಮಿ ಸಮತಟ್ಟು ಮಾಡಿ, ಬಡಾವಣೆ ನಿರ್ಮಾಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಾಗೆಯೇ ಅತಿವೃಷ್ಟಿಯಿಂದಾಗಿ ರಸ್ತೆ, ಶಾಲಾ ಕಟ್ಟಡಗಳು, ಅಂಗನವಾಡಿ ಕಟ್ಟಡಗಳ ಹಾನಿಯಾಗಿದ್ದು, ಈ ಕಾಮಗಾರಿಗಳ ಪ್ರಗತಿ, ಮತ್ತಿತರ ಬಗ್ಗೆ ನಿಖರ ಮಾಹಿತಿ ಒದಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸೂಚನೆ ನೀಡಿದರು.     

ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು, ನಿರ್ದೇಶನಗಳು ಕ್ಷೇತ್ರದಲ್ಲಿ ಕಾರ್ಯರೂಪಕ್ಕೆ ಬರಬೇಕು. ಪ್ರಕೃತಿ ವಿಕೋಪದ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದ ಕುಟುಂಬಗಳಿಗೆ ಜಿಲ್ಲಾಡಳಿತದಿಂದ ಕೈಗೊಳ್ಳಲಾಗಿರುವ ಕಾರ್ಯಗಳ ಬಗ್ಗೆ ರಾಜಧಾನಿಯವರೆಗೂ ತಿಳಿಯುವಂತಾಗಬೇಕು. ಆ ನಿಟ್ಟಿನಲ್ಲಿ ವೆಬ್‍ಸೈಟ್, ಟ್ವೀಟರ್, ಪೇಸ್‍ಬುಕ್ ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ಅಪ್‍ಡೇಟ್ ಮಾಹಿತಿ ಒದಗಿಸುವಂತೆ ಅನ್ಬುಕುಮಾರ್ ಅವರು ನಿರ್ದೇಶನ ನೀಡಿದರು. 

ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ರಸ್ತೆಗಳು ಗುಂಡಿ ಮುಚ್ಚುವುದು, ಟಾರ್ ಹಾಕುವುದು ಮತ್ತಿತರ  ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ವೈಜ್ಞಾನಿಕವಾಗಿ ಕಾಮಗಾರಿ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಹೇಳಿದರು. ಅತಿವೃಷ್ಟಿಯಿಂದ ಉಂಟಾದ ಬೆಳೆ ನಷ್ಟ ಸಂಬಂಧ ಈಗಾಗಲೇ ಸರ್ವೆ ಕಾರ್ಯ ಪೂರ್ಣಗೊಂಡಿದ್ದು, ಕೂಡಲೇ ಪರಿಹಾರ ವಿತರಣೆ ಮಾಡುವಂತೆ ಸೂಚಿಸಿದರು. 

ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಮಾತನಾಡಿ ಪುನರ್ವಸತಿಯನ್ನು ತ್ವರಿತವಾಗಿ ಕಲ್ಪಿಸಬೇಕು. ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಸೆಸ್ಕ್ ಹೀಗೆ ಆಯಾಯ ಇಲಾಖೆಗಳಿಗೆ ಸರ್ಕಾರ ಹಣ ಬಿಡುಗಡೆ ಮಾಡಿದ್ದು, ಪ್ರಕೃತಿ ವಿಕೋಪದ ಕಾಮಗಾರಿಗಳನ್ನು ಆದ್ಯತೆ ಮೇಲೆ ನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.  

ಮುಖ್ಯಮಂತ್ರಿಯವರು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಶಿಷ್ಟಾಚಾರ ಪಾಲನೆ ಮಾಡುವುದು, ಗಾಂಧೀ ಮೈದಾನದಲ್ಲಿ ವೇದಿಕೆ ನಿರ್ಮಾಣ, ಆಸನ ವ್ಯವಸ್ಥೆ, ಸಂವಾದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವುದು ಮತ್ತಿತರ ಬಗ್ಗೆ ಸೂಚನೆ ನೀಡಲಾಯಿತು.   

ಹೆಚ್ಚುವರಿ ವಿಶೇಷ ಜಿಲ್ಲಾಧಿಕಾರಿ ಜಗದೀಶ್ ಅವರು ನಿರಾಶ್ರಿತರಿಗಾಗಿ ಈಗಾಗಲೇ ಜಾಗ ಗುರುತಿಸಿ ಭೂಮಿ ಸಮತಟ್ಟು ಮಾಡಿ ಮನೆ ನಿರ್ಮಾಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರು ಮಾತನಾಡಿ, ಮುಖ್ಯಮಂತ್ರಿ ಆಗಮನ ಹಿನ್ನೆಲೆ ಸೂಕ್ತ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ ಎಂದರು.  

ಜಿ.ಪಂ.ಸಿಇಒ ಲಕ್ಷ್ಮೀ ಪ್ರಿಯ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರವೀಣ್ ಕುಮಾರ್, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ನಾನಾ ಇಲಾಖೆ ಅಧಿಕಾರಿಗಳು ಹಲವು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X