Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾರಂಜಾ ಯೋಜನೆ ಮುಳುಗಡೆ ಸಂತ್ರಸ್ತರಿಗೆ...

ಕಾರಂಜಾ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಮಾನವೀಯ ದೃಷ್ಟಿಯಿಂದ ಪರಿಹಾರಕ್ಕೆ ಕ್ರಮ: ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ15 Oct 2018 8:27 PM IST
share
ಕಾರಂಜಾ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಮಾನವೀಯ ದೃಷ್ಟಿಯಿಂದ ಪರಿಹಾರಕ್ಕೆ ಕ್ರಮ: ಡಿ.ಕೆ. ಶಿವಕುಮಾರ್

ಬೆಂಗಳೂರು, ಅ. 15: ಬೀದರ್‌ನ ಕಾರಂಜಾ ಯೋಜನೆ ಮುಳುಗಡೆ ಸಂತ್ರಸ್ತರು 60 ದಿನಗಳಿಂದ ಕೈಗೊಂಡಿದ್ದ ಧರಣಿ ಸತ್ಯಾಗ್ರಹ ಕೈಬಿಟ್ಟಿದ್ದು, ಮಾನವೀಯತೆ ದೃಷ್ಟಿಯಿಂದ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಭರವಸೆ ನೀಡಿದ್ದಾರೆ.

ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ರೈತರೊಂದಿಗಿನ ಸಭೆ ಬಳಿಕ ಮಾತನಾಡಿದ ಅವರು, ಯೋಜನೆಯಿಂದ 29 ಸಾವಿರ ಎಕರೆಗೆ ನೀರಾವರಿ ಗುರಿಯಿದೆ. 2018ರ ವೇಳೆಗೆ 24 ಸಾವಿರ ಎಕರೆಗೆ ನೀರಾವರಿ ಕಲ್ಪಿಸಲಾಗಿದೆ ಎಂದರು.

ಯೋಜನೆ ಮುಳುಗಡೆಯಾದ ರೈತರ ಭೂಮಿಗೆ ಪರಿಹಾರ ಕೊಟ್ಟಿಲ್ಲ. ನಿರಾಶ್ರಿತರ ದೃಢೀಕರಣ ಪತ್ರ ಸಿಕ್ಕಿಲ್ಲ ಎಂಬ ಬೇಡಿಕೆ ಹಾಗೂ ಪರಿಹಾರ ಕಲ್ಪಿಸಲು 2005ರಲ್ಲಿ ಅಪರ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಉನ್ನತ ಅಧಿಕಾರಿ ಸಮಿತಿ ರಚಿಸಲಾಗಿತ್ತು. ಆ ಸಮಿತಿ ಒಟ್ಟು 55ಕೋಟಿ ರೂ.ಪರಿಹಾರ ಪಾವತಿಸುವಂತೆ ಶಿಫಾರಸು ಮಾಡಿತ್ತು. ಆದರೆ, ಆರ್ಥಿಕ ಇಲಾಖೆ ಸಮ್ಮತಿಸದ ಕಾರಣ ಸಂಪುಟ ಸಭೆ ವರದಿಯನ್ನು 2015ರಲ್ಲಿ ತಿರಸ್ಕರಿಸಿದೆ. ಇದೀಗ ಈ ಬಗ್ಗೆ ಮತ್ತೊಮ್ಮೆ ಪರಿಶೀಲಿಸಿ, ರೈತರ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು.

ಈ ಯೋಜನೆಯ ಪರಿಹಾರ ಪಾವತಿಯನ್ನು ಮುಂದಿಟ್ಟುಕೊಂಡು ಇತರೆ ಯೋಜನೆಗಳ ಸಂತ್ರಸ್ತರು ಕೋರ್ಟ್ ಮೆಟ್ಟಿಲೇರುವ ಆತಂಕವಿದ್ದು, ಸರಕಾರ ಅತ್ಯಂತ ಎಚ್ಚರಿಕೆಯಿಂದ ಕಾನೂನು, ಆರ್ಥಿಕ ಮತ್ತು ಸಾಮಾಜಿಕ ಪರಿಸ್ಥಿತಿ ಅವಲೋಕಿಸಿ ಕ್ರಮವಹಿಸಲಿದೆ ಎಂದರು.

ಹೋರಾಟ ನಿಲ್ಲದು: ಸಭೆಯಲ್ಲಿ ಪಾಲ್ಗೊಂಡಿದ್ದ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿಯ ಜಿಲಾನಿ ಪಟೇಲ್, ಮುಳುಗಡೆ ಸಂತ್ರಸ್ತರಿಗೆ 300ರೂ.ನಿಂದ ಪರಿಹಾರ ನೀಡಲಾಗಿದೆ. ಕೋರ್ಟ್ ಮೆಟ್ಟಿಲೇರಿದವರಿಗೆ ಬಡ್ಡಿ ಸಹಿತ ಎಕರೆಗೆ 88 ಸಾವಿರ ರೂ.ನೀಡಲು ಆದೇಶಿಸಿದೆ. ಅದೇ ರೀತಿ ಎಲ್ಲರಿಗೂ ಪರಿಹಾರ ನೀಡಬೇಕು. ರಾಜ್ಯ ಸರಕಾರ ಮೌಕಿಕ ಭರವಸೆ ನೀಡಿದೆ. ಆದರೆ, 50 ಸಾವಿರಕ್ಕೂ ಹೆಚ್ಚು ಮಂದಿ ರೈತರು ಭೂಮಿ ಕಳೆದುಕೊಂಡಿದ್ದು ನಿರಾಶ್ರಿತರಾಗಿದ್ದೇವೆ. ಹೀಗಾಗಿ ರಾಜ್ಯ ಸರಕಾರ ಕೂಡಲೇ ಕೋರ್ಟ್ ಆದೇಶದಂತೆ ಪರಿಹಾರ ಪಾವತಿಸಲು ಆದೇಶ ಹೊರಡಿಸಬೇಕು. ಅಲ್ಲಿಯ ವರೆಗೂ ನಮ್ಮ ಹೋರಾಟ ನಿಲ್ಲದು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ್, ಮುಜರಾಯಿ ಸಚಿವ ರಾಜಶೇಖರ್‌ ಪಾಟೀಲ್, ಶಾಸಕ ರಹೀಮ್ ಖಾನ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಬಿ.ಖಂಡ್ರೆ, ಪರಿಷತ್ ಸದಸ್ಯ ರಘುನಾಥ್ ಮಲ್ಕಾಪುರೆ ಸೇರಿದಂತೆ ಸ್ಥಳೀಯ ಮುಖಂಡರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X