Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಹೀಗೊಂದು ಸಂವಿಧಾನದ ಸರಳ ಓದು....

ಹೀಗೊಂದು ಸಂವಿಧಾನದ ಸರಳ ಓದು....

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ16 Oct 2018 12:03 AM IST
share
ಹೀಗೊಂದು ಸಂವಿಧಾನದ ಸರಳ ಓದು....

ದೇಶದ ಸಂವಿಧಾನ ಹತ್ತು ಹಲವು ಸವಾಲುಗಳನ್ನು ಎದುರಿಸುತ್ತಿರುವ ದಿನಗಳು ಇವು. ಸಂವಿಧಾನ ಪರ ಮತ್ತು ವಿರೋಧ ಧ್ವನಿಗಳಾಗಿ ದೇಶ ಒಡೆಯುತ್ತಿದೆ. ಸಂವಿಧಾನದ ಹಕ್ಕುಗಳನ್ನು ಬಳಸಿಕೊಂಡೇ ಸಂವಿಧಾನ ವಿರೋಧಿ ನಿಲುವುಗಳನ್ನು ಅನುಷ್ಠಾನಗೊಳಿಸುವ ಪ್ರಯತ್ನ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಸಂವಿಧಾನಪರವಾಗಿರುವ ಜನರು ಹೆಚ್ಚು ಹೆಚ್ಚು ಜಾಗೃತರಾಗಬೇಕಾಗಿದೆ. ಸಂವಿಧಾನವನ್ನು ಉಳಿಸಲು ಬೀದಿಗಿಳಿಯಬೇಕಾಗಿದೆ. ಸಂವಿಧಾನ ಉಳಿದರೆ, ನಮ್ಮ ಉಳಿವು ಎನ್ನುವುದನ್ನು ಶ್ರೀಸಾಮಾನ್ಯರಿಗೆ ಅರ್ಥೈಸಬೇಕಾಗಿದೆ. ಆದರೆ ಇದೇ ಸಂದರ್ಭದಲ್ಲಿ, ಸಂವಿಧಾನ ಪರವಾಗಿ ಧ್ವನಿಯೆತ್ತುತ್ತಿರುವವರಿಗೂ ನಮ್ಮ ಸಂವಿಧಾನದ ಒಳಗೆ ಏನಿದೆ ಎನ್ನುವುದರ ಸ್ಪಷ್ಟ ಅರಿವಿಲ್ಲ. ಸಂವಿಧಾನ ಆಶಯಗಳ ಕುರಿತಂತೆ ಸರಳವಾಗಿ ಮಾತನಾಡುತ್ತೇವೆಯೇ ಹೊರತು, ಸಂವಿಧಾನವನ್ನು ವಿವರವಾಗಿ ಓದುವುದು, ತಿಳಿದುಕೊಳ್ಳುವುದು ನಮ್ಮ ಕೆಲಸವಲ್ಲ, ಅದು ನ್ಯಾಯಾಲಯದ ಕೆಲಸ ಮತ್ತು ಕಾನೂನು ವಿದ್ಯಾರ್ಥಿಗಳ ಕೆಲಸ ಎಂದು ನಂಬಿದ ದೊಡ್ಡ ವರ್ಗವಿದೆ. ವಿದ್ಯಾರ್ಥಿಯಾಗಿ ಸಂವಿಧಾನದ ಕುರಿತಂತೆ ಪ್ರಾಥಮಿಕ ವಿಷಯಗಳನ್ನು ಕಲಿಯುತ್ತೇವಾದರೂ, ಸಂವಿಧಾನದ ಕುರಿತ ಆಸಕ್ತಿಯಿಂದಲ್ಲ, ಬದಲಿಗೆ, ಅಂಕಗಳನ್ನು ಪಡೆಯುವ ಉದ್ದೇಶದಿಂದ. ಇಂದು ಸಂವಿಧಾನ ಹೇಳುವ ಸರಳ ವಿಷಯಗಳನ್ನು ಯುವಜನರಿಗೆ ತಲುಪಿಸುವ ಅಗತ್ಯ ಹಿಂದೆಂದಿಗಿಂತ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಸಹಯಾನ ಮತ್ತು ಸಮುದಾಯ ಹೊರತಂದಿರುವ ‘ಸಂವಿಧಾನ ಓದು-ವಿದ್ಯಾರ್ಥಿ ಯುವಜನರಿಗಾಗಿ ಕೈಪಿಡಿ’ ಒಂದು ಒಳ್ಳೆಯ ಪ್ರಯತ್ನ ವಾಗಿದೆ. ನ್ಯಾಯಮೂರ್ತಿ ಎಚ್. ಎನ್. ನಾಗಮೋಹನ ದಾಸ್ ಅವರು ಈ ಕೈಪಿಡಿಯನ್ನು ರಚಿಸಿದ್ದಾರೆ.
  ನಮ್ಮ ದೇಶದ ಸಂವಿಧಾನದ ಅರ್ಥ, ಅದು ರಚನೆಯಾದ ಬಗೆ, ಸಂವಿಧಾನದ ಅಗತ್ಯತೆ, ಅದರ ಸಾಮರ್ಥ್ಯ, ಸಾಧ್ಯತೆ ನಮ್ಮ ಕರ್ತವ್ಯ, ಹಾಗೂ ಸಂವಿಧಾನವು ಎದುರಿಸುತ್ತಿರುವ ಸವಾಲುಗಳ ಕುರಿತು ಸರಳ ಭಾಷೆಯಲ್ಲಿ ಈ ಕೈ ಪಿಡಿಯಲ್ಲಿ ವಿವರಿಸಲಾಗಿದೆ. ಈ ಪುಸ್ತಕದಲ್ಲಿ ಸಾಮಾಜಿಕ ನ್ಯಾಯ ಮತ್ತು ಜಾತ್ಯತೀತೆಗಳ ಬಗ್ಗೆ ಯಾವುದೇ ಗೊಂದಲವಿಲ್ಲದ ಸ್ಪಷ್ಟ ವ್ಯಾಖ್ಯಾನವಿದೆ. ಅಪವ್ಯಾಖ್ಯಾನಗಳಿಂದ ಹಾದಿ ತಪ್ಪಿಸುವ ತಜ್ಞತಂಡಕ್ಕೆ ತಕ್ಕ ಉತ್ತರವೆಂಬಂತೆ ಈ ವ್ಯಾಖ್ಯಾನ ಮೂಡಿ ಬಂದಿದೆ. ಸಂವಿಧಾನದ ಆಶಯಗಳ ಅನಾವರಣ ಮತ್ತು ವಿಶ್ಲೇಷಣೆಯನ್ನು ಸಮರ್ಥ ಸರಳ ವಿಧಾನದಲ್ಲಿ ನಿರ್ವಹಿಸಿದ್ದಾರೆ. ‘‘....ನಮ್ಮ ದೇಶದ ಎದೆಯ ದನಿಯೇ ನಮ್ಮ ಸಂವಿಧಾನ ಎಂದಾದರೆ, ಈ ಎದೆಯ ದನಿಯ ಒಳದನಿ ಈ ಪುಸ್ತಕ’’ ಎಂದು ಬರಗೂರು ಅಭಿಪ್ರಾಯ ಪಡುತ್ತಾರೆ. ಸಾಮಾಜಿಕ ಮತ್ತು ಆರ್ಥಿಕ ವ್ಯವಸ್ಥೆಗಳು, ಸಂವಿಧಾನದ ಉಗಮ, ಭಾರತ ದೇಶದ ಸ್ವರೂಪ, ಸ್ವಾತಂತ್ರ ಹೋರಾಟ, ಭಾರತದ ಸಂವಿಧಾನ ರಚನೆ, ಸಂವಿಧಾನದ ಒಳಗಿರುವ ವಿಷಯಗಳು, ಸಂವಿಧಾನದ ಮೂಲತತ್ವಗಳು, ತಿದ್ದುಪಡಿಗಳು, ಗಣರಾಜ್ಯ ಭಾರತದ ಸಾಧನೆಗಳು, ಸಂವಿಧಾನದ ಮುಂದಿರುವ ಸವಾಲುಗಳು...ಹೀಗೆ ಹಲವು ನೆಲೆಗಳಲ್ಲಿ ಸಂವಿಧಾನದ ಸ್ವರೂಪವನ್ನು ನಮಗೆ ಈ ಕೈ ಪಿಡಿ ಅರ್ಥ ಮಾಡಿಸಲು ಪ್ರಯತ್ನಿಸುತ್ತದೆ. 92 ಪುಟಗಳ ಈ ಕೃತಿಯ ಮುಖಬೆಲೆ 30 ರೂಪಾಯಿ. ಆಸಕ್ತರು 94487 29359 ದೂರವಾಣಿಯನ್ನು ಸಂಪರ್ಕಿಸಬಹುದಾಗಿದೆ.

 

share
-ಕಾರುಣ್ಯಾ
-ಕಾರುಣ್ಯಾ
Next Story
X