ಹೂಗ್ಲಿ: ಕಾಲುವೆಗೆ ಉರುಳಿದ ಬಸ್: ಐವರು ಸಾವು
ಹೂಗ್ಲಿ, ಅ.16: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಹರಿಪಾಲ್ನಲ್ಲಿ ಬಸ್ವೊಂದು ಸೇತುವೆಯಿಂದ ಕಾಲುವಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ ಐದು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, ಇತರ 20 ಮಂದಿ ಗಾಯಗೊಂಡಿದ್ದಾರೆ.
ಕೋಲ್ಕತಾಕ್ಕೆ ತೆರಳುತ್ತಿದ್ದ ಬಸ್ ಬೆಳಗ್ಗೆ 9ರ ಸುಮಾರಿಗೆ ಸೇತುವೆಯ ಸಿಮೆಂಟ್ ಬೇಲಿಗೆ ಡಿಕ್ಕಿ ಹೊಡೆದು ದಕಾಟಿಯ ಖಾಲ್ ಕಾಲುವೆಗೆ ಉರುಳಿಬಿದ್ದಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ಸುಕೇಶ್ ಜೈನ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿರುವ 20 ಮಂದಿ ಪ್ರಯಾಣಿಕರ ಪೈಕಿ ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ.ಎಲ್ಲ ಗಾಯಾಳುಗಳನ್ನು ಹರಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ರಕ್ಷಣಾಕಾರ್ಯಾಚರಣೆ ನಡೆಯುತ್ತಿದ್ದು, ಘಟನಾ ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ಕಳುಹಿಸಲಾಗಿದೆ. ಸ್ಥಳೀಯರು ಹಾಗೂ ಪೊಲೀಸರು ಬಸ್ನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.
Next Story