Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಹಾರ ಸಂಸ್ಕರಣೆ ಉದ್ಯಮಕ್ಕೆ ವಿಫುಲ...

ಆಹಾರ ಸಂಸ್ಕರಣೆ ಉದ್ಯಮಕ್ಕೆ ವಿಫುಲ ಅವಕಾಶ: ರಾಮಚಂದ್ರನ್

ವಾರ್ತಾಭಾರತಿವಾರ್ತಾಭಾರತಿ16 Oct 2018 11:03 PM IST
share

ಬೆಳಗಾವಿ, ಅ.16: ನಮ್ಮ ದೇಶದಲ್ಲಿ ಆಹಾರ ಸಂಸ್ಕರಣಾ ಉದ್ದಿಮೆಗೆ ವಿಫುಲ ಅವಕಾಶಗಳಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಂಡರೆ ಕೃಷಿ ಉತ್ಪನ್ನಗಳಿಗೆ ಸೂಕ್ತ ಬೇಡಿಕೆ ಮತ್ತು ತಕ್ಕ ಬೆಲೆ ದೊರಕುವುದು ಸಾಧ್ಯವಾಗಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್ ಅಭಿಪ್ರಾಯಪಟ್ಟಿದ್ದಾರೆ.

ಕೃಷಿ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಬೆಳಗಾವಿ ಫೌಂಡ್ರಿ ಕ್ಲಸ್ಟರ್ ಸಭಾ ಭವನದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಆಹಾರ ಸಂಸ್ಕರಣೆ ಉತ್ತೇಜನಕ್ಕೆ ಇರುವ ಯೋಜನೆಗಳು ಮತ್ತು ಸಹಾಯಧನ ಸೌಲಭ್ಯಗಳು ಕುರಿತ ಅರಿವು ಮೂಡಿಸುವ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಹಾರ ಸಂಸ್ಕರಣೆ ಉದ್ಯಮಕ್ಕೆ ಪ್ರೋತ್ಸಾಹಿಸಲು ಕೇಂದ್ರ ಮತ್ತು ರಾಜ್ಯ ಸರಕಾರಗಳು ಭಾರಿ ಪ್ರಮಾಣದಲ್ಲಿ ಸಹಾಯಧನ ನೀಡುತ್ತಿವೆ. ಮೆಗಾ ಫುಡ್‌ಪಾರ್ಕ್ ಸ್ಥಾಪನೆಗೆ 50 ಕೋಟಿ ರೂ.ವರೆಗೆ ಸಹಾಯಧನ ನೀಡುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ. ಆದುದರಿಂದ, ರೈತರು ಕೂಡ ಆಹಾರ ಸಂಸ್ಕರಣಾ ಉದ್ದಿಮೆ ಆರಂಭಿಸುವ ಮೂಲಕ ಕೃಷಿ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಂಡುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಸಹಾಯಧನ ಸದ್ಬಳಕೆ ಆಗಲಿ ಎಂಬ ಉದ್ದೇಶಕ್ಕೆ ಸರಕಾರ ಹಲವಾರು ಷರತ್ತುಗಳನ್ನು ವಿಧಿಸಿರುತ್ತದೆ. ಆದರೆ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ನಿಯಮಗಳನ್ನು ಸರಳೀಕರಣಗೊಳಿಸಿ ರೈತ ಉದ್ದಿಮೆದಾರರನ್ನು ಪ್ರೋತ್ಸಾಹಿಸಬೇಕು ಎಂದು ರಾಮಚಂದ್ರನ್ ಸಲಹೆ ನೀಡಿದರು.

ರಾಸಾಯನಿಕ ಮಿತಿಮೀರಿ ಬಳಕೆ ಮಾಡಿರುವುದರಿಂದ ಮಣ್ಣಿನ ಫಲವತ್ತತೆ ನಾಶವಾಗಿದ್ದು, ಇದೀಗ ಸಾವಯವ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗಿದೆ. ರೈತರು ಇದನ್ನು ಅರಿತುಕೊಂಡು ಆಹಾರ ಸಂಸ್ಕರಣಾ ಉದ್ಯಮ ಆರಂಭಿಸಬೇಕು ಎಂದು ಅವರು ಕರೆ ನೀಡಿದರು.

ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಕೊರತೆಯಿಂದ ಸೌಲಭ್ಯಗಳನ್ನು ಪಡೆದುಕೊಳ್ಳಲು ಜನರು ಮುಂದೆ ಬರುತ್ತಿಲ್ಲ. ಅಧಿಕಾರಿಗಳು ಅರ್ಹ ರೈತರು ಮತ್ತು ಸಾರ್ವಜನಿಕರಿಗೆ ಸರಕಾರಿ ಯೋಜನೆಗಳ ಮಾಹಿತಿ ತಲುಪಿಸಬೇಕು ಎಂದು ರಾಮಚಂದ್ರನ್ ನಿರ್ದೇಶನ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಪರ ನಿರ್ದೇಶಕ ಮಹಾಂತೇಶ ಕರೂರ ಕೃಷಿ, ಕೈಗಾರಿಕೆ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿದರೆ ಸರಕಾರದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನ ಸಾಧ್ಯವಾಗಲಿದೆ ಎಂದರು.

ಆಹಾರ ಸಂಸ್ಕರಣೆ ಉತ್ತೇಜನಕ್ಕೆ ಇರುವ ಯೋಜನೆಗಳು ಮತ್ತು ಸಹಾಯಧನ ಸೌಲಭ್ಯಗಳು ಕುರಿತ ಅರಿವು ಮೂಡಿಸುವ ಕಾರ್ಯಾಗಾರದಲ್ಲಿ ಭಾಗವಹಿಸಿರುವ ರೈತರು ಮತ್ತು ಉದ್ದಿಮೆದಾರರು ತಮ್ಮ ಅನುಭವ-ಜ್ಞಾನವನ್ನು ಉದ್ದಿಮೆ ವಿಸ್ತರಣೆಗೆ ಬಳಸಿಕೊಳ್ಳಬೇಕು ಎಂದು ಅವರು ಹೇಳಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಲಾನಿ ಮೊಖಾಶಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ದೊಡ್ಡಬಸವರಾಜ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರವೀಂದ್ರ ಹಕಾಟಿ, ಕೃಷಿ ಇಲಾಖೆ ಉಪ ನಿರ್ದೇಶಕ ಸಲೀಂ, ಗ್ಲೋಬಲ್ ಸಂಸ್ಥೆಯ ರಾವಸಾಹೇಬ್ ಮೋತೆ, ಚಂದ್ರಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X