Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಶಿವಮೊಗ್ಗ ಲೋಕಸಭಾ ಉಪಚುನಾವಣೆ:...

ಶಿವಮೊಗ್ಗ ಲೋಕಸಭಾ ಉಪಚುನಾವಣೆ: ಯಡಿಯೂರಪ್ಪ ಪಾಲಿಗೆ ನಿರ್ಣಾಯಕ

ಪುತ್ರ ಬಿ.ವೈ ರಾಘವೇಂದ್ರ ಗೆಲುವಿನ ಮೇಲೆ ನಿಂತಿದೆ 'ಸಿಎಂ' ಹುದ್ದೆಯ ಭವಿಷ್ಯ

ವರದಿ: ಬಿ. ರೇಣುಕೇಶ್ವರದಿ: ಬಿ. ರೇಣುಕೇಶ್19 Oct 2018 11:05 PM IST
share
ಶಿವಮೊಗ್ಗ ಲೋಕಸಭಾ ಉಪಚುನಾವಣೆ: ಯಡಿಯೂರಪ್ಪ ಪಾಲಿಗೆ ನಿರ್ಣಾಯಕ

ಶಿವಮೊಗ್ಗ, ಅ.19: ದಿಢೀರ್ ಎದುರಾಗಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಬಗ್ಗೆ ಈ ಮೊದಲು ಕೇವಲ ರಾಜಕೀಯ ರಂಗ ಮಾತ್ರವಲ್ಲದೆ, ಮತದಾರರ ವಲಯದಲ್ಲಿಯೂ ನಿರುತ್ಸಾಹ ಭಾವವಿತ್ತು. ಕೇವಲ ನಾಲ್ಕೈದು ತಿಂಗಳ ಅಧಿಕಾರವದಿಯಿರುವುದರಿಂದ ಉಪ ಚುನಾವಣೆ ರದ್ದುಪಡಿಸಬೇಕೆಂಬ ಒತ್ತಾಯ ಕೂಡ ಕೇಳಿಬಂದಿತ್ತು. 

ಆದರೆ ಇದೀಗ ದಿಢೀರ್ ಆಗಿ ಶಿವಮೊಗ್ಗ ಕ್ಷೇತ್ರದ ರಾಜಕೀಯ ಚಿತ್ರಣವೇ ಅದಲು-ಬದಲಾಗಿದೆ. ಚುನಾವಣಾ ಕಣ ಕಾವೇರುವುದರ ಜೊತೆಗೆ, ಸಂಪೂರ್ಣ ರಂಗೇರಲಾರಂಭಿಸಿದೆ. ರಾಜಕಾರಣಿಗಳಲ್ಲಿ ಸಂಚಲನ ಸೃಷ್ಟಿಸಿದೆ. ರಾಜ್ಯ ಮಾತ್ರವಲ್ಲ ಇಡೀ ರಾಷ್ಟ್ರದ ಗಮನ ಸೆಳೆದಿದೆ. ಕೆಲ ಘಟಾನುಘಟಿ ರಾಜಕಾರಣಿಗಳ ಪಾಲಿಗಂತೂ ಅತ್ಯಂತ ನಿರ್ಣಾಯಕವಾಗಿ ಪರಿಣಮಿಸಿದೆ. 

ಅದರಲ್ಲಿಯೂ ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಈ ಎಲೆಕ್ಷನ್ ಅತ್ಯಂತ ಮಹತ್ವದ್ದಾಗಿ ಪರಿಣಮಿಸಿದೆ. ಅವರು ಅಭ್ಯರ್ಥಿಯಾಗದಿದ್ದರೂ ಅವರ ರಾಜಕೀಯ ಜೀವನದ ಮೇಲೆ ಈ ಚುನಾವಣೆಯ ಫಲಿತಾಂಶ ಪರಿಣಾಮ ಬೀರುವುದು ಖಚಿತವಾಗಿದೆ. ಎಲ್ಲದಕ್ಕಿಂತ ಮುಖ್ಯವಾಗಿ ಪುತ್ರ ಬಿ.ವೈ.ರಾಘವೇಂದ್ರ ಸೋಲು-ಗೆಲುವಿನ ಮೇಲೆ ಬಿ.ಎಸ್.ಯಡಿಯೂರಪ್ಪ ಭವಿಷ್ಯದ 'ಮುಖ್ಯಮಂತ್ರಿ' ಗಾದಿಗೇರುವುದು ನಿರ್ಧರಿತವಾಗಲಿದೆ ಎಂದು ಸ್ವತಃ ಬಿಜೆಪಿ ಪಾಳಯದಲ್ಲಿಯೇ ಮಾತನಾಡಿಕೊಳ್ಳುತ್ತಿರುವುದು ಕುತೂಹಲ ಮೂಡಿಸಿದೆ. 

ಸವಾಲು: ಉಪ ಚುನಾವಣೆ ಮಾದರಿ ನೀತಿ-ಸಂಹಿತೆ ಘೋಷಣೆಯಾಗುತ್ತಿದ್ದಂತೆ ಬಿಜೆಪಿಯಿಂದ ಬಿ.ವೈ.ರಾಘವೇಂದ್ರ ಕಣಕ್ಕಿಳಿಯುವುದು ಖಚಿತವಾಗಿತ್ತು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕಣಕ್ಕಿಳಿಸುವುದು ಖಚಿತವಾಗಿದ್ದರೂ ಹುರಿಯಾಳು ಯಾರಾಗಲಿದ್ದಾರೆಂಬುವುದು ಗೊತ್ತಾಗಿರಲಿಲ್ಲ. ಕಳೆದ ವಿಧಾನಸಭೆ ಚುನಾವಣೆ ಫಲಿತಾಂಶ, ಪಕ್ಷಗಳ ಪ್ರಾಬಲ್ಯ ಮತ್ತಿತರ ಅಂಶಗಳ ಆಧಾರದ ಮೇಲೆ ಶಿವಮೊಗ್ಗ ಕ್ಷೇತ್ರದಲ್ಲಿ ತನ್ನ ಗೆಲುವಿನ ಓಟ ಮುಂದುವರಿಯಲಿದೆ ಎಂಬ ಆತ್ಮವಿಶ್ವಾಸ ಬಿಜೆಪಿಯಲ್ಲಿತ್ತು. 

ಏಕಾಏಕಿ ಎಂಬಂತೆ ದಿವಂಗತ ಮಾಜಿ ಸಿಎಂ ಎಸ್.ಬಂಗಾರಪ್ಪ ಪುತ್ರ, ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಮೈತ್ರಿ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿದ್ದಾರೆ. ಅದರಲ್ಲಿಯೂ ಸ್ವತಃ ಜೆಡಿಎಸ್ ವರಿಷ್ಠ ದೇವೇಗೌಡ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಶಿವಮೊಗ್ಗ ಕ್ಷೇತ್ರದತ್ತ ವಿಶೇಷ ಚಿತ್ತ ಹರಿಸಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ಪಕ್ಷ ಕೂಡ ಜೆಡಿಎಸ್‍ಗೆ ಬೆಂಗಾವಲಾಗಿ ನಿಂತುಕೊಂಡಿದೆ. ಇದು ಬಿಜೆಪಿಯ ರಾಜಕೀಯ ಲೆಕ್ಕಾಚಾರ ತಲೆಕೆಳಗಾಗಿಸಿದೆ. ಅದರಲ್ಲಿಯೂ ತವರೂರಿನತ್ತ ಯಡಿಯೂರಪ್ಪ ವಿಶೇಷ ಚಿತ್ತ ಹರಿಸುವಂತೆ ಮಾಡಿದೆ. 

ಮಹತ್ವ: ಮುಂದಿನ ವರ್ಷ ಎದುರಾಗಲಿರುವ ಲೋಕಸಭೆ ಸಾರ್ವತ್ರಿಕ ಚುನಾವಣೆ ವೇಳೆಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ತರಲು ಆ ಪಕ್ಷದ ನಾಯಕರು ಕಾರ್ಯತಂತ್ರ ರೂಪಿಸುತ್ತಿದ್ದಾರೆಂಬ ಮಾತುಗಳಿವೆ. ಇನ್ನೊಂದೆಡೆ ಸಮ್ಮಿಶ್ರ ಸರ್ಕಾರ ಕೂಡ ಹಲವು ಅಡೆತಡೆಗಳನ್ನು ಎದುರಿಸುತ್ತಿದೆ. ಒಂದು ವೇಳೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದು ಖಚಿತ. ಈ ಕಾರಣದಿಂದ ಯಡಿಯೂರಪ್ಪ ನಡೆಯತ್ತ ಸಮ್ಮಿಶ್ರ ಸರ್ಕಾರದ ನಾಯಕರು ವಿಶೇಷ ಗಮನಹರಿಸಿರುವುದು ಸುಳ್ಳಲ್ಲ. ಇಂತಹ ಸನ್ನಿವೇಶದಲ್ಲಿಯೇ ಯಡಿಯೂರಪ್ಪ ತವರೂರು ಶಿವಮೊಗ್ಗ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿರುವುದು ಹಾಗೂ ಅವರ ಪುತ್ರ ಬಿ.ವೈ.ರಾಘವೇಂದ್ರ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದು ದೋಸ್ತಿಗಳಾದ ಜೆಡಿಎಸ್ ಹಾಗೂ ಕಾಂಗ್ರೆಸ್ ಪಾಲಿಗೆ ಒಂದು ರೀತಿ ವರವಾಗಿ ಪರಿಣಮಿಸಿದೆ. ಈ ಕಾರಣದಿಂದಲೇ ಶಿವಮೊಗ್ಗ ಕ್ಷೇತ್ರದಲ್ಲಿ ದೊಡ್ಡ ರಾಜಕೀಯ ದಾಳವೊಂದನ್ನು ದೋಸ್ತಿಗಳು ಸೇರಿ ಉರುಳಿಸಿದ್ದಾರೆ. ಅದರಂತೆ ಎಸ್.ಬಂಗಾರಪ್ಪ ಪುತ್ರ ಮಧು ಬಂಗಾರಪ್ಪರ ಮನವೊಲಿಸಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿದೆ. 

ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಮಣಿಸಿದರೆ ಸಹಜವಾಗಿಯೇ ಬಿಜೆಪಿ ಓಟಕ್ಕೆ, ಅದರಲ್ಲಿಯೂ ಯಡಿಯೂರಪ್ಪ ಸ್ಪೀಡ್‍ಗೆ ಸುಲಭವಾಗಿ ತಡೆ ಹಾಕಬಹುದು. ಅವರು ಕಣ್ಣಿಟ್ಟಿರುವ 'ಸಿಎಂ ಗಾದಿ' ಕೈ ತಪ್ಪಲಿದೆ. ಯಡಿಯೂರಪ್ಪಗೆ 'ಸಿಎಂ' ಹುದ್ದೆ ಸಿಗದಂತಹ ಸ್ಥಿತಿ ಬಿಜೆಪಿಯಲ್ಲಿ ಉದ್ಭವವಾದರೇ, ಲೋಕಸಭೆ ಚುನಾವಣೆ ಪೂರ್ಣಗೊಳ್ಳುವವರೆಗಾದರೂ ಸಮ್ಮಿಶ್ರ ಸರ್ಕಾರಕ್ಕೆ ಎದುರಾಗಬಹುದಾದ ದೊಡ್ಡ ಕಂಟಕ ತಪ್ಪಲಿದೆ ಎಂಬುವುದು 'ದೋಸ್ತಿ'ಗಳ ಲೆಕ್ಕಾಚಾರವಾಗಿದೆ ಎಂದು ಹೇಳಲಾಗುತ್ತಿದೆ. 

ಅತೀ ಮುಖ್ಯ: ಬಿ.ಎಸ್.ವೈ ಹಾಗೂ ಅವರ ಪುತ್ರ ಬಿ.ವೈ.ಆರ್ ಗೂ ವೈಯಕ್ತಿಕವಾಗಿ ಉಪ ಚುನಾವಣೆ ಮಹತ್ವದ್ದಾಗಿದೆ. ಉಪ ಚುನಾವಣೆಯಲ್ಲಿ ಗೆದ್ದರೆ ಜಿಲ್ಲಾ ಬಿಜೆಪಿಯಲ್ಲಿ ತಂದೆ-ಮಗನ ಪ್ರಾಬಲ್ಯ ಹೆಚ್ಚಾಗಲಿದೆ. 2019 ರ ಲೋಕಸಭೆ ಚುನಾವಣೆಯಲ್ಲಿ ಅನಾಯಾಸವಾಗಿ ತಮ್ಮ ಕುಟುಂಬಕ್ಕೆ ಟಿಕೆಟ್ ಗಿಟ್ಟಿಸಿಕೊಳ್ಳಬಹುದು. ರಾಜ್ಯ ರಾಜಕಾರಣದಲ್ಲಿಯೂ ಪ್ರಾಬಲ್ಯ ಮುಂದುವರಿಸಬಹುದಾಗಿದೆ. ಇಲ್ಲದಿದ್ದರೆ ಅಪ್ಪ - ಮಗ ರಾಜಕೀಯ ಸುಳಿಗಳಿಗೆ ಸಿಲುಕಿ ಬೀಳುವುದು ನಿಶ್ಚಿತವಾಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ. 

ಅಪ್ಪ-ಮಗನ ವಿರುದ್ಧ ಅಪ್ಪ-ಮಗನ ತಂತ್ರಗಾರಿಕೆ!
ಶಿವಮೊಗ್ಗ ಲೋಕಸಭಾ ಉಪ ಚುನಾವಣೆಯಲ್ಲಿ 'ಅಪ್ಪ-ಮಗನ ವಿರುದ್ಧ ಅಪ್ಪ-ಮಗನ ತಂತ್ರಗಾರಿಕೆ' ಸಾಕಷ್ಟು ಸದ್ದು ಮಾಡುತ್ತಿದೆ. ಹೌದು. ಬಿಜೆಪಿ ಅಭ್ಯರ್ಥಿಯಾಗಿರುವ ಬಿ.ವೈ.ರಾಘವೇಂದ್ರ ಹಾಗೂ ಅವರ ತಂದೆ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತವರ ತಂದೆ ದೇವೇಗೌಡ ಸೆಡ್ಡು ಹೊಡೆದು ನಿಂತಿದ್ದಾರೆ. ಶತಾಯಗತಾಯ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಜಯ ಸಾಧಿಸುವ ನಿಟ್ಟಿನಲ್ಲಿ, ದೇವೇಗೌಡ ಹಾಗೂ ಕುಮಾರಸ್ವಾಮಿ ಭಾರೀ ಕಾರ್ಯತಂತ್ರ ನಡೆಸುತ್ತಿದ್ದಾರೆ. 

ಸಮ್ಮಿಶ್ರ ಸರ್ಕಾರದ ಮೇಲೆ ಬಿದ್ದಿರುವ ಯಡಿಯೂರಪ್ಪ ಕರಿನೆರಳನಿಂದ ಪಾರಾಗಬೇಕಾದರೆ ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಲಲೇಬೇಕು ಎಂದು ನಿರ್ಧರಿಸಿರುವ ದೇವೆಗೌಡ-ಹೆಚ್ಡಿಕೆ, ಅತ್ಯಂತ ಶ್ರಮಪಟ್ಟು ತನ್ನ ಪಕ್ಷದ ಅಭ್ಯರ್ಥಿ ಅಖಾಡಕ್ಕಿಳಿಸಿದ್ದಾರೆ. ಜೆಡಿಎಸ್ ಕಾರ್ಯತಂತ್ರ ಅರಿತಿರುವ ಬಿ.ಎಸ್.ವೈ ರವರು ಕೂಡ ಪ್ರತಿ ಕಾರ್ಯತಂತ್ರ ರೂಪಿಸಿದ್ದಾರೆ. ತವರೂರರಲ್ಲಿ ಪುತ್ರನನ್ನು ಗೆಲ್ಲಿಸುವ ಮೂಲಕ 'ಅಪ್ಪ-ಮಗ'ನಿಗೆ ಏದಿರೇಟು ನೀಡುವ ಹಾಗೂ ಭವಿಷ್ಯದ 'ಸಿಎಂ' ಕ್ಯಾಂಡಿಡೇಟ್ ತಾವೇ ಎಂಬ ಪರೋಕ್ಷ ಸಂದೇಶ ರವಾನಿಸಲು ಮುಂದಾಗಿದ್ದಾರೆ. 

'ಕೈ' ನಾಯಕರ ಹುಬ್ಬೇರಿಸಿದ ಕಾಗೋಡು ತಿಮ್ಮಪ್ಪ ವಿಶೇಷ ಕಾಳಜಿ!
ಮಾಜಿ ಸಚಿವ ಕಾಗೋಡು ತಿಮ್ಮಪ್ಪರವರು ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಬಗ್ಗೆ ವಹಿಸಿರುವ ವಿಶೇಷ ಕಾಳಜಿ-ಆಸಕ್ತಿ ಕಾಂಗ್ರೆಸ್‍ನ ಹಲವು ನಾಯಕರ ಹುಬ್ಬೇರುವಂತೆ ಮಾಡಿದೆ. 'ಮಧು ತನ್ನ ಮಗನ ಸಮಾನ. ಅವರು ಗೆಲ್ಲಬೇಕು. ಪಕ್ಷದ ಎಲ್ಲ ನಾಯಕರು ವೈಮನಸ್ಸು ಮರೆತು ಕೆಲಸ ಮಾಡಬೇಕು. ಏನಾದರೂ ಹೆಚ್ಚು ಕಡಿಮೆಯಾದರೆ ವರಿಷ್ಠರು ಶಿಸ್ತುಕ್ರಮ ಜರುಗಿಸುವುದು ನಿಶ್ಚಿತ' ಎಂದು ಕಾಗೋಡುರವರು ಬಹಿರಂಗವಾಗಿಯೇ ಸ್ವ ಪಕ್ಷದ ನಾಯಕರಿಗೆ ತಿಳಿಸುತ್ತಿದ್ದಾರೆ. 

'ಜೆಡಿಎಸ್ ಪಕ್ಷದ ಮುಖಂಡ ಮಧು ಬಗ್ಗೆ ಕಾಗೋಡು ವಹಿಸುತ್ತಿರುವ ಕಾಳಜಿ, ಅವರ ವೈಯಕ್ತಿಕ ವಿಷಯವಾಗಿದೆ. ಆದರೆ ಕಳೆದ 2014 ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಂಜುನಾಥ ಭಂಡಾರಿಯವರ ಬಗ್ಗೆ, ಕಾಗೋಡುರವರು ಪ್ರಸ್ತುತ ಮಧು ಬಗ್ಗೆ ವಹಿಸುತ್ತಿರುವ ವಿಶೇಷ ಆಸಕ್ತಿ ಕಂಡುಬರಲಿಲ್ಲ. ಅವರ ಸ್ವಕ್ಷೇತ್ರ ಸಾಗರ ವಿಧಾನಸಭಾ ಕ್ಷೇತ್ರದಲ್ಲಿಯೇ ಕಾಂಗ್ರೆಸ್‍ಗೆ ಹೆಚ್ಚಿನ ಮತ ಕೊಡಿಸಲು ಸಾಧ್ಯವಾಗಲಿಲ್ಲ. ಅಂದು ಸ್ವಪಕ್ಷದ ಮುಖಂಡರಿಗೆ ಇಂತಹ ಕಠಿಣ ಸಂದೇಶ ಅವರ ಕಡೆಯಿಂದ ರವಾನೆಯಾಗಲಿಲ್ಲ' ಎಂದು ಹೆಸರು ಹೇಳಲಿಚ್ಚಿಸದ ಕಾಂಗ್ರೆಸ್ ಪಕ್ಷದ ನಾಯಕರೋರ್ವರು ಹೇಳುತ್ತಾರೆ.

ಒಟ್ಟಾಗುತ್ತಿದೆ ಬಿ.ಎಸ್.ವೈ ವಿರೋಧಿ ಪಡೆ
ಜೆಡಿಎಸ್ ಹಾಗೂ ಕಾಂಗ್ರೆಸ್‍ನಲ್ಲಿರುವ ಯಡಿಯೂರಪ್ಪ ವಿರೋಧಿ ಪಡೆ, ಶಿವಮೊಗ್ಗ ಕ್ಷೇತ್ರದಲ್ಲಿ ಒಟ್ಟಾಗುತ್ತಿದೆ. ದೇವೇಗೌಡ, ಕುಮಾರಸ್ವಾಮಿಯವರೇ ಬಿ.ಎಸ್.ವೈ. ವಿರೋಧಿಗಳ ಮಾಹಿತಿ ಕಲೆ ಹಾಕಲಾರಂಭಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಸ್ಥಳೀಯ ನಾಯಕರು ಯಡಿಯೂರಪ್ಪ ಕಾರಣದಿಂದ ಶಿವಮೊಗ್ಗ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರವಾಗಿ ಬಿರುಸಿನ ಪ್ರಚಾರ ನಡೆಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. 

share
ವರದಿ: ಬಿ. ರೇಣುಕೇಶ್
ವರದಿ: ಬಿ. ರೇಣುಕೇಶ್
Next Story
X