ಪೌರ ರಕ್ಷಣಾ ಮುಖ್ಯ ವಾರ್ಡನ್ ಹುದ್ದೆ: ಅರ್ಜಿ ಆಹ್ವಾನ
ಉಡುಪಿ, ಅ.20: ಉಡುಪಿ ಜಿಲ್ಲಾ ಪೌರರಕ್ಷಣಾ ಮುಖ್ಯ ವಾರ್ಡನ್ ಹಾಲಿ ಖಾಲಿಯಿರುವ ಗೌರವ ಹುದ್ದೆಗೆ ನೇಮಕ ಮಾಡುವ ಸಂಬಂಧ ಆಸಕ್ತಿ ಯುಳ್ಳ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಉಡುಪಿ ಜಿಲ್ಲಾಧಿಕಾರಿಯವರ ಕಚೇರಿಗೆ ಅ. 29ರ ಒಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಯವರ ಕಚೇರಿ, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿನ ದೂರವಾಣಿ ಸಂಖ್ಯೆ: 0820-2574925 ಅನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





